AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಎನ್‌ಟಿಎ ಕಚೇರಿಗೆ ಭೇಟಿ ನೀಡುವ ಸುಳಿವು ನೀಡಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್​ಟಿಎ) ಪರೀಕ್ಷಾ ಪದ್ಧತಿಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆ ತರುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಎನ್‌ಟಿಎ ಸುಧಾರಣೆಗಳಿಗೆ ಸಂಬಂಧಿಸಿದ ತನ್ನ ಅಫಿಡವಿಟ್‌ ಅನ್ನು ತಕ್ಷಣವೇ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸುವಂತೆ ಕೋರ್ಟ್ ಸೂಚಿಸಿದೆ. ಅಲ್ಲದೆ, ಈಗಾಗಲೇ ರಚಿಸಲಾಗಿರುವ ನಿಲೇಕಣಿ ಸಮಿತಿ ಮುಂದಿನ 3 ವಾರಗಳ ಒಳಗಾಗಿ ಪ್ರಗತಿ ವರದಿಯ ಪ್ರಮಾಣಪತ್ರವನ್ನು ಸಲ್ಲಿಸಬೇಕೆಂದು ನ್ಯಾಯಪೀಠ ನಿರ್ದೇಶಿಸಿದೆ. ಸುಧಾರಣೆಗಳು ಕೇವಲ ಸಮಿತಿಯ ವರದಿಗಳಿಗೆ ಸೀಮಿತವಾಗದೆ, ಹಂತ-ಹಂತವಾಗಿ ನೈಜವಾಗಿ ಅನುಷ್ಠಾನಕ್ಕೆ ಬರಬೇಕು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಎನ್‌ಟಿಎ ಕಚೇರಿಗೆ ಭೇಟಿ ನೀಡುವ ಸುಳಿವು ನೀಡಿದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್Image Credit source: Getty Image
ಸುಷ್ಮಾ ಚಕ್ರೆ
|

Updated on: Sep 18, 2026 | 3:21 PM

Share

ನವದೆಹಲಿ, ಸೆಪ್ಟೆಂಬರ್ 18: ನೀಟ್-ಯುಜಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಠಿಣ ನಿಲುವು ತಳೆದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್​ಟಿಎ) ಆಡಳಿತ ಶೈಲಿ ಮತ್ತು ಪರೀಕ್ಷಾ ಸುರಕ್ಷತೆಯನ್ನು ಖುದ್ದಾಗಿ ಪರಿಶೀಲಿಸಲು, ಸುಪ್ರೀಂ ಕೋರ್ಟ್ ಎನ್‌ಟಿಎ ಕಚೇರಿಗೆ ಸ್ವತಃ ಭೇಟಿ ನೀಡುವ ಚಿಂತನೆ ನಡೆಸಿದೆ. ಇದರ ಜೊತೆಗೆ, ಸಂಸ್ಥೆಯ ಮೂಲಭೂತ ಸುಧಾರಣೆಗಾಗಿ ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಇದುವರೆಗಿನ ಸುಧಾರಣಾ ಪ್ರಗತಿಯ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ನ್ಯಾಯಪೀಠ ನಿರ್ದೇಶಿಸಿದೆ.

ಎನ್‌ಟಿಎ ಕಚೇರಿಗೆ ಸದ್ಯದಲ್ಲೇ ಭೇಟಿ:

ಎನ್‌ಟಿಎ ಪರೀಕ್ಷೆಗಳನ್ನು ನಡೆಸುವ ವಿಧಾನ, ತಂತ್ರಜ್ಞಾನ ವ್ಯವಸ್ಥೆ ಮತ್ತು ದತ್ತಾಂಶ ಭದ್ರತೆಯ ನೈಜ ಸ್ಥಿತಿಯನ್ನು ಪರಿಶೀಲಿಸಲು ತನಿಖಾಧಿಕಾರಿಗಳು ಹಾಗೂ ನ್ಯಾಯಪೀಠದ ಪ್ರತಿನಿಧಿಗಳು ಕಚೇರಿಗೆ ನೇರವಾಗಿ ಭೇಟಿ ನೀಡುವ ಕುರಿತು ಸುಪ್ರೀಂ ಕೋರ್ಟ್ ಸುಳಿವು ನೀಡಿದೆ. ಪರೀಕ್ಷೆಯನ್ನು ನಡೆಸಲು ಮಾಡಿದ ಸುಧಾರಣೆಗಳನ್ನು ನಿಜವಾಗಿಯೂ ಅನುಷ್ಠಾನಗೊಳಿಸಲಾಗಿದೆಯೇ ಎಂದು ನೋಡಲು ನ್ಯಾಯಮೂರ್ತಿಗಳಾದ ಪಿಎಸ್​ ನರಸಿಂಹ ಮತ್ತು ಅಲೋಕ್ ಆರಾಧೆ ಅವರ ಪೀಠವು ಎನ್​ಟಿಎ ಕಚೇರಿಗೆ ವೈಯಕ್ತಿಕವಾಗಿ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಸೂಚಿಸಿದೆ. ವಿಚಾರಣೆಯ ಸಮಯದಲ್ಲಿ, ಪರೀಕ್ಷೆಯನ್ನು ನಡೆಸಲು ವಿನ್ಯಾಸಗೊಳಿಸಲಾದ ವ್ಯವಸ್ಥೆಯು ನಿಜವಾಗಿಯೂ ಅಸ್ತಿತ್ವದಲ್ಲಿದೆಯೇ, ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ ಮತ್ತು ಅದಕ್ಕೆ ಸಾಕಷ್ಟು ಮಾನವಶಕ್ತಿ ಮತ್ತು ಇತರ ಅಗತ್ಯ ವ್ಯವಸ್ಥೆಗಳು ಲಭ್ಯವಿದೆಯೇ ಎಂದು ನೋಡಲು ಬಯಸುವುದಾಗಿ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ‘ನಮ್ಮ ಮುಂದೆ ಎಲ್ಲರೂ ಸಮಾನರು’; ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ತುರ್ತು ವಿಚಾರಣೆ ಕೋರಿಕೆಗೆ ಸುಪ್ರೀಂ ಕೋರ್ಟ್ ಅಸಮಾಧಾನ

ಎನ್‌ಟಿಎ ತಾಂತ್ರಿಕ ಹಾಗೂ ಕಾರ್ಯಾಚರಣೆಯ ಸುಧಾರಣೆಗಾಗಿ ರಚಿಸಲಾದ ನಂದನ್ ನಿಲೇಕಣಿ ಸಮಿತಿಯು, ಪರೀಕ್ಷಾ ಭದ್ರತೆಯನ್ನು ಬಲಪಡಿಸಲು ಕೈಗೊಂಡಿರುವ ಕ್ರಮಗಳ ವಿವರವಾದ ಪ್ರಗತಿ ವರದಿಯನ್ನು ಸಲ್ಲಿಸಲು ಕೋರ್ಟ್ ಸೂಚಿಸಿದೆ. ಹಾಗೇ, ಈ ಶಿಫಾರಸುಗಳು ಕೇವಲ ವರದಿಗೆ ಸೀಮಿತವಾಗಿರಬಾರದು, ಇದನ್ನು ಅನುಷ್ಠಾನಕ್ಕೂ ತರಬೇಕು ಎಂದು ಕೋರ್ಟ್ ಹೇಳಿದೆ.

ಎನ್‌ಟಿಎ ತನ್ನ ಸುಧಾರಣಾ ವರದಿಗಳು ಮತ್ತು ಅಫಿಡವಿಟ್‌ಗಳನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು, ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮುಂಬರುವ ಪರೀಕ್ಷೆಗಳ ಭದ್ರತೆಯ ಕುರಿತು ವಿಶ್ವಾಸ ಮೂಡುತ್ತದೆ ಎಂದು ಕೋರ್ಟ್ ತಿಳಿಸಿದೆ.

ಇದನ್ನೂ ಓದಿ: NEET-PG 2026: ನೀಟ್–ಪಿಜಿ ಪರೀಕ್ಷೆಯ ವೇಳೆ ವಿದ್ಯುತ್ ಕಡಿತ; ಸೆಪ್ಟೆಂಬರ್ 5ಕ್ಕೆ ಮರುಪರೀಕ್ಷೆ ನಡೆಸಲು ನಿರ್ಧಾರ!

ಹಂತ-ಹಂತದ ಅನುಷ್ಠಾನ:

ಕೇವಲ ವರದಿಗಳನ್ನು ಸಿದ್ಧಪಡಿಸುವುದಷ್ಟೇ ಸಾಲದು, ಮುಂದಿನ ವರ್ಷದ ನೀಟ್-ಯುಜಿ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳು ಆರಂಭವಾಗುವ ಮೊದಲೇ ಎಲ್ಲಾ ಡಿಜಿಟಲ್ ಹಾಗೂ ಭದ್ರತಾ ಸುಧಾರಣೆಗಳು ಸಂಪೂರ್ಣವಾಗಿ ಜಾರಿಗೆ ಬರಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!