AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಜಾರ್ಖಂಡ್‌ನಲ್ಲಿ ಪತ್ರಕರ್ತನ ಬಂಧನ, ಗುಜರಾತಿನಲ್ಲಿ ಸಿಬಿಐ ಶೋಧ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಬಂಧಿಸಿದ ವ್ಯಕ್ತಿಯನ್ನು ಈತನನ್ನು ಜಮಾಲುದ್ದೀನ್ ಎಂದು ಗುರುತಿಸಲಾಗಿದ್ದು ಹಿಂದಿ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ಬಂಧಿಸಲಾದ ಓಯಸಿಸ್ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರಿಗೆ ಈತ ಸಹಾಯ ಮಾಡಿದ್ದ ಎನ್ನಲಾಗಿದೆ.

NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಜಾರ್ಖಂಡ್‌ನಲ್ಲಿ ಪತ್ರಕರ್ತನ ಬಂಧನ, ಗುಜರಾತಿನಲ್ಲಿ ಸಿಬಿಐ ಶೋಧ
ಸಿಬಿಐ
ರಶ್ಮಿ ಕಲ್ಲಕಟ್ಟ
|

Updated on:Jun 29, 2024 | 12:52 PM

Share

ದೆಹಲಿ ಜೂನ್ 29: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ (NEET-UG  Paper Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಶನಿವಾರ ಜಾರ್ಖಂಡ್‌ನ (Jharkhand) ಹಜಾರಿಬಾಗ್‌ನಲ್ಲಿ ಪತ್ರಕರ್ತರೊಬ್ಬರನ್ನು ಬಂಧಿಸಿದೆ. ಈತನನ್ನು ಜಮಾಲುದ್ದೀನ್ ಎಂದು ಗುರುತಿಸಲಾಗಿದ್ದು ಹಿಂದಿ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳ ಪ್ರಕಾರ, ಓಯಸಿಸ್ ಶಾಲೆಯ ಪ್ರಾಂಶುಪಾಲ ಎಹ್ಸಾನುಲ್ ಹಕ್ ಮತ್ತು ಉಪ ಪ್ರಾಂಶುಪಾಲ ಇಮ್ತಿಯಾಜ್ ಆಲಂ ಪ್ರಶ್ನೆ ಪತ್ರಿಕೆ  ಸೋರಿಕೆಯಲ್ಲಿ ಪಾತ್ರವಹಿಸಿದ್ದಾರೆ ಎಂಬ ಶಂಕೆಯಲ್ಲಿ ಬಂಧಿಸಲಾಗಿದೆ. ಆಲಂ ಅವರನ್ನು ಎನ್‌ಟಿಎ ವೀಕ್ಷಕರಾಗಿ ಮತ್ತು ಓಯಸಿಸ್ ಶಾಲೆಯ ಕೇಂದ್ರ ಸಂಯೋಜಕರಾಗಿ ನೇಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಸೋರಿಕೆಗೆ ಸಂಬಂಧಿಸಿದಂತೆ ಜಿಲ್ಲೆಯ ಇನ್ನೂ ಐದು ಜನರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ ಎಂದು ಹೇಳಿದರು.

ಮೇ 5 ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ನೀಟ್ ಪರೀಕ್ಷೆಗೆ ಪ್ರಾಂಶುಪಾಲರು ಹಜಾರಿಬಾಗ್ ಜಿಲ್ಲಾ ಸಂಯೋಜಕರಾಗಿದ್ದರು.

ಗುಜರಾತ್‌ನಲ್ಲಿ ಸಿಬಿಐ ತಂಡಗಳು ಗೋದ್ರಾ, ಖೇಡಾ, ಅಹಮದಾಬಾದ್ ಮತ್ತು ಆನಂದ್‌ನ 7 ಸ್ಥಳಗಳಲ್ಲಿ ಕೆಲವು ಶಂಕಿತರ ಮೇಲೆ ಶೋಧ ನಡೆಸುತ್ತಿವೆ. ಇದು ಗೋಧ್ರಾ ಪೊಲೀಸರು ಈ ಹಿಂದೆ ತನಿಖೆ ನಡೆಸಿದ ಎಫ್‌ಐಆರ್‌ಗೆ ಸಂಬಂಧಿಸಿದೆ.

ಜೂನ್ 27 ರಂದು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಯ ಭಾಗವಾಗಿ ಸಿಬಿಐ ಪ್ರಕರಣದಲ್ಲಿ ತನ್ನ ಮೊದಲ ಬಂಧನವನ್ನು ಮಾಡಿತ್ತು. ಅಧಿಕಾರಿಗಳ ಪ್ರಕಾರ, ಪಾಟ್ನಾದ ಇಬ್ಬರು ಬಂಧಿತ ಆರೋಪಿಗಳಾದ ಅಶುತೋಷ್ ಕುಮಾರ್ ಮತ್ತು ಮನೀಶ್ ಕುಮಾರ್ ಅವರು ಪರೀಕ್ಷೆಗೆ ಹಾಜರಾಗಿದ್ದ ಕೆಲವರನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ದು  ಅಲ್ಲಿ ಸೋರಿಕೆಯಾದ ನೀಟ್ ಪ್ರಶ್ನೆ ಪತ್ರಿಕೆ ಮತ್ತು ಉತ್ತರ  ಒದಗಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಜೂನ್ 23 ರಂದು  ಸಿಬಿಐ ಮೊದಲ  ಎಫ್‌ಐಆರ್ ದಾಖಲಿಸಿತ್ತು. ಶಿಕ್ಷಣ ಸಚಿವಾಲಯವು ಪರೀಕ್ಷೆಯ ನಿರ್ವಹಣೆಯಲ್ಲಿನ ಅಕ್ರಮಗಳ ತನಿಖೆಯನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸುವುದಾಗಿ ಘೋಷಿಸಿದ ಒಂದು ದಿನದ ನಂತರ ಈ ಬಂಧನ ನಡೆದಿದೆ.

NEET-UG ಅನ್ನು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಎನ್‌ಟಿಎ ನಡೆಸುತ್ತದೆ. ಸರ್ಕಾರವು ‘ಮುನ್ನೆಚ್ಚರಿಕೆ ಕ್ರಮ’ವಾಗಿ NEET-PG ಪರೀಕ್ಷೆಯನ್ನು ಮುಂದೂಡಿದೆ.

ಇದನ್ನೂ ಓದಿDelhi Airport Roof Collapse: ಪ್ರಯಾಣಿಕರ ಸುರಕ್ಷತೆಗೆ ವಾರ್ ರೂಮ್, ರದ್ದಾದ ವಿಮಾನಗಳ ಟಿಕೆಟ್​ ಹಣ ಮರುಪಾವತಿಗೆ ಕೇಂದ್ರ ಸೂಚನೆ

18 ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ NEET ವಿವಾದ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದೆ, ಪ್ರತಿಪಕ್ಷಗಳು ಆಪಾದಿತ ಅಕ್ರಮಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ರದ್ದತಿ ಬಗ್ಗೆ ತಕ್ಷಣ ಚರ್ಚೆಗೆ ಒತ್ತಾಯಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Sat, 29 June 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!