AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET ವಿವಾದ: ಕೇಂದ್ರ ವಿರುದ್ಧ ರಾಹುಲ್, ಅಖಿಲೇಶ್ ವಾಗ್ದಾಳಿಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು

ನೀಟ್ ಒಂದು ವ್ಯವಸ್ಥಿತ ಸಮಸ್ಯೆಯಾಗಿದೆ, ಈ ಸಮಸ್ಯೆಯನ್ನು ಸರಿಪಡಿಸಲು ನೀವು ನಿಖರವಾಗಿ ಏನು ಮಾಡುತ್ತಿದ್ದೀರಿ?" ಎಂದು ರಾಹುಲ್ ಕೇಳಿದ್ದಾರೆ.  ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ , ಕೇವಲ ಕೂಗಿದ ಮಾತ್ರಕ್ಕೆ ಸುಳ್ಳು ಸತ್ಯವಾಗುವುದಿಲ್ಲ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಕಳಪೆ ಎಂದು ವಿರೋಧ ಪಕ್ಷದ ನಾಯಕ ಹೇಳಿರುವುದು ಅತ್ಯಂತ ಖಂಡನೀಯ ಎಂದಿದ್ದಾರೆ.

NEET ವಿವಾದ: ಕೇಂದ್ರ ವಿರುದ್ಧ ರಾಹುಲ್, ಅಖಿಲೇಶ್ ವಾಗ್ದಾಳಿಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು
ಧರ್ಮೇಂದ್ರ ಪ್ರಧಾನ್
ರಶ್ಮಿ ಕಲ್ಲಕಟ್ಟ
|

Updated on: Jul 22, 2024 | 1:41 PM

Share

ದೆಹಲಿ ಜುಲೈ 22: ನೀಟ್ ಪದವಿಪೂರ್ವ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ  (Paper leak) ವಿವಾದದ ಕುರಿತು ಸೋಮವಾರ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರುಈ ವಿಷಯದ ಬಗ್ಗೆ ಕೇಂದ್ರ ಸಚಿವರ ತಿಳುವಳಿಕೆಯನ್ನು ಪ್ರಶ್ನಿಸಿದರು. “ನೀಟ್ ಮಾತ್ರವಲ್ಲದೆ, ಎಲ್ಲಾ ಪ್ರಮುಖ ಪರೀಕ್ಷೆಗಳಲ್ಲಿ ನಮ್ಮ ಪರೀಕ್ಷಾ ವ್ಯವಸ್ಥೆಯಲ್ಲಿ ಬಹಳ ಗಂಭೀರವಾದ ಸಮಸ್ಯೆ ಇದೆ ಎಂಬುದು ಇಡೀ ದೇಶಕ್ಕೆ ಸ್ಪಷ್ಟವಾಗಿದೆ. ಸಚಿವರು (ಧರ್ಮೇಂದ್ರ ಪ್ರಧಾನ್) ತಮ್ಮನ್ನು ಹೊರತುಪಡಿಸಿ ಎಲ್ಲರನ್ನೂ ದೂಷಿಸಿದ್ದಾರೆ. ಇಲ್ಲಿ ಏನಾಗುತ್ತಿದೆ ಎಂಬುದನ್ನು ಅವರ ಅರ್ಥ ಮಾಡಿಕೊಂಡಿದ್ದಾರೆ ಎಂದು ನಾನು ಭಾವಿಸುತ್ತಿಲ್ಲ ಎಂದು ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ಅಧಿವೇಶನದಲ್ಲಿ ಮಾತನಾಡಿದ ರಾಹುಲ್ ಹೇಳಿದ್ದಾರೆ.

“ಇದು (ನೀಟ್) ಒಂದು ವ್ಯವಸ್ಥಿತ ಸಮಸ್ಯೆಯಾಗಿದೆ, ಈ ಸಮಸ್ಯೆಯನ್ನು ಸರಿಪಡಿಸಲು ನೀವು ನಿಖರವಾಗಿ ಏನು ಮಾಡುತ್ತಿದ್ದೀರಿ?” ಎಂದು ರಾಹುಲ್ ಕೇಳಿದ್ದಾರೆ.  ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ , ಕೇವಲ ಕೂಗಿದ ಮಾತ್ರಕ್ಕೆ ಸುಳ್ಳು ಸತ್ಯವಾಗುವುದಿಲ್ಲ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಕಳಪೆ ಎಂದು ವಿರೋಧ ಪಕ್ಷದ ನಾಯಕ ಹೇಳಿರುವುದು ಅತ್ಯಂತ ಖಂಡನೀಯ” ಎಂದಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ ಸಮಾಜವಾದಿ ಪಕ್ಷದ ಸಂಸದ ಅಖಿಲೇಶ್ ಯಾದವ್, ”ಈ ಸರ್ಕಾರ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ದಾಖಲೆ ಮಾಡುತ್ತೆ. ಕೆಲವು ಕೇಂದ್ರಗಳಲ್ಲಿ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಸಚಿವರು (ಶಿಕ್ಷಣ ಸಚಿವರು) ಇರುವವರೆಗೂ ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವುದಿಲ್ಲ ಎಂದಿದ್ದಾರೆ.

ವಿವಾದಿತ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ ಅರ್ಜಿಗಳ ಬ್ಯಾಚ್‌ನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಆರಂಭಿಸಿದಾಗಲೂ ಸಂಸತ್ತಿನಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವನ್ನು ಪ್ರಸ್ತಾಪಿಸಲಾಯಿತು.

NEET-UG ಆಕಾಂಕ್ಷಿಗಳ ಪರ ವಕೀಲರು ಸುಪ್ರೀಂಕೋರ್ಟ್‌ಗೆ ಪ್ರತಿಷ್ಠಿತ ಪರೀಕ್ಷೆಯನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಾಟ್ಸಾಪ್ ಮೂಲಕ ‘ಸೋರಿಕೆಯಾದ ಪ್ರಶ್ನೆ ಪತ್ರಿಕೆ’ ಪ್ರಸಾರವನ್ನು ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ. ಆರಂಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಪರೀಕ್ಷೆಯ ಕೇಂದ್ರವಾರು ಮತ್ತು ನಗರವಾರು ಫಲಿತಾಂಶಗಳ ಘೋಷಣೆಯಿಂದ ಏನಾಯಿತು ಎಂದು ಕಕ್ಷಿದಾರರ ವಕೀಲರನ್ನು ಕೇಳಿತು. ಸುಪ್ರೀಂಕೋರ್ಟ್​​ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಕನ್ವರ್ ಯಾತ್ರೆ:ಯುಪಿ ಸರ್ಕಾರದ ‘ಹೆಸರು ಪ್ರದರ್ಶನ’ ಆದೇಶ ಬಗ್ಗೆ ಸೂನು ಸೂದ್ ನಿಲುವು ಪ್ರಶ್ನಿಸಿದ ಕಂಗನಾ ರಣಾವತ್

ಶನಿವಾರ ಎನ್‌ಟಿಎ ಬಿಡುಗಡೆ ಮಾಡಿದ ಫಲಿತಾಂಶಗಳ ವಿಶ್ಲೇಷಣೆಯು ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳಿಂದ ಲಾಭ ಪಡೆದ ಅಭ್ಯರ್ಥಿಗಳು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ ಎಂದು ಸೂಚಿಸಿದೆ. ಆದಾಗ್ಯೂ, ಕೆಲವು ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿರುವುದನ್ನು ತೋರಿಸಿದೆ ಎಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ