NEET UG Paper Leak: ಮಾಸ್ಟರ್ ಮೈಂಡ್ ರವಿ ಅತ್ರಿಯನ್ನು ಬಂಧಿಸಿದ ಉತ್ತರ ಪ್ರದೇಶದ ಎಸ್​​ಟಿಎಫ್

2007 ರಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸಲು ಕೋಟಾ ಬಂದಿದ್ದ ರವಿ ಅತ್ರಿ ಕಾನೂನುಬಾಹಿರ ಚಟುವಟಿಕೆಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದ. 2012 ರಲ್ಲಿ ಆತ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಪಿಜಿಐ ರೋಹ್ಟಕ್‌ನಲ್ಲಿ ಪ್ರವೇಶ ಪಡೆದಿದ್ದ.

NEET UG Paper Leak: ಮಾಸ್ಟರ್ ಮೈಂಡ್ ರವಿ ಅತ್ರಿಯನ್ನು ಬಂಧಿಸಿದ ಉತ್ತರ ಪ್ರದೇಶದ ಎಸ್​​ಟಿಎಫ್
ನೀಟ್ ಪ್ರತಿಭಟನೆ
Follow us
ರಶ್ಮಿ ಕಲ್ಲಕಟ್ಟ
|

Updated on: Jun 22, 2024 | 8:59 PM

ದೆಹಲಿ ಜೂನ್ 22: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ 2024 ರ ಪರೀಕ್ಷೆ ನೀಟ್ (NEET UG) ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದಿನ ಮಾಸ್ಟರ್‌ಮೈಂಡ್ ರವಿ ಅತ್ರಿಯನ್ನು (Ravi Atri) ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (STF) ಬಂಧಿಸಿದೆ. ನೀಟ್ ಪರೀಕ್ಷೆಯಲ್ಲಿ ಅಕ್ರಮ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ವಿದ್ಯಾರ್ಥಿಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಈ ಬಂಧನ ನಡೆದಿದೆ. ನೀಮ್ಕಾ ಗ್ರಾಮದ ನಿವಾಸಿ ರವಿ ಅತ್ರಿ ಹಿಂದಿನ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿದ್ದ.

ಇಂತಹ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿರುವ ಆತನ ಮಾರ್ಗವು ‘ಸಾಲ್ವರ್ ಗ್ಯಾಂಗ್’ ಎಂಬ ಜಾಲದ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಪರಿಹರಿಸಲಾದ ಪ್ರಶ್ನೆ ಪತ್ರಿಕೆಗಳನ್ನು ಅಪ್‌ಲೋಡ್ ಮಾಡುವುದನ್ನು ಒಳಗೊಂಡಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯ ಪತ್ರಿಕೆಗಳನ್ನು ಸೋರಿಕೆ ಮಾಡಿದ್ದಕ್ಕಾಗಿ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ 2012 ರಲ್ಲಿ ಆತನನ್ನು ಬಂಧಿಸಿತ್ತು.

ಆರಂಭದಲ್ಲಿ ವಿದ್ಯಾರ್ಥಿ ಮತ್ತು ಸಹಚರರು ಸೇರಿದಂತೆ ಸೋರಿಕೆಗೆ ಸಂಬಂಧಿಸಿದ ಹಲವಾರು ವ್ಯಕ್ತಿಗಳನ್ನು ಬಂಧಿಸಿದ ಬಿಹಾರ ಪೊಲೀಸರು, ತನ್ನ ತನಿಖೆಯನ್ನು ರಾಜ್ಯದ ಗಡಿಯಾಚೆಗೆ ವಿಸ್ತರಿಸಿದ್ದರು. ವಿಚಾರಣೆಯ ಸಮಯದಲ್ಲಿ ಅತ್ರಿ ಜತೆಗಿನ ಸಂಪರ್ಕವು ಬೆಳಕಿಗೆ ಬಂದಿದ್ದು ಇದೀಗ ಯುಪಿ ಎಸ್‌ಟಿಎಫ್ ಆತನನ್ನು ಬಂಧಿಸಿದೆ.

2007 ರಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸಲು ಕೋಟಾ ಬಂದಿದ್ದ ರವಿ ಅತ್ರಿ ಕಾನೂನುಬಾಹಿರ ಚಟುವಟಿಕೆಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದ. 2012 ರಲ್ಲಿ ಆತ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಪಿಜಿಐ ರೋಹ್ಟಕ್‌ನಲ್ಲಿ ಪ್ರವೇಶ ಪಡೆದಿದ್ದ. ಆದಾಗ್ಯೂ, ಆತ ತನ್ನ ನಾಲ್ಕನೇ ವರ್ಷದ ಪರೀಕ್ಷೆಗೆ ಹಾಜರಾಗಲಿಲ್ಲ. ಮೂಲಗಳ ಪ್ರಕಾರ, ಆ ಹೊತ್ತಿಗೆ, ರವಿ ‘ಪರೀಕ್ಷಾ ಮಾಫಿಯಾ’ದಲ್ಲಿ ಭಾಗಿಯಾಗಿದ್ದ. ಈತ ಇತರ ಅಭ್ಯರ್ಥಿಗಳಿಗೆ ಪ್ರಾಕ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಸೋರಿಕೆಯಾದ ಪರೀಕ್ಷಾ ಪ್ರಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ: ನೀಟ್ ಅಕ್ರಮದ ಬೆನ್ನಲ್ಲೇ ಪಾರದರ್ಶಕ, ನ್ಯಾಯಸಮ್ಮತ ಪರೀಕ್ಷೆಗಳಿಗಾಗಿ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ

ಪ್ರವೇಶ ಪರೀಕ್ಷೆಯಲ್ಲಿ 67 ವಿದ್ಯಾರ್ಥಿಗಳು 720 ರಲ್ಲಿ 720 ಅಂಕಗಳನ್ನು ಗಳಿಸಿದ ನಂತರ NEET ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಪ್ರಾರಂಭವಾಯಿತು. ಈ ವರ್ಷ ಸುಮಾರು 24 ಲಕ್ಷ ಮಹತ್ವಾಕಾಂಕ್ಷಿ ವೈದ್ಯಕೀಯ ವಿದ್ಯಾರ್ಥಿಗಳು ನೀಟ್-ಯುಜಿ ಪರೀಕ್ಷೆಗೆ ಹಾಜರಾಗಿದ್ದರು.

NEET UG 2024 ಮರು ಪರೀಕ್ಷೆ

1,563 ಅಭ್ಯರ್ಥಿಗಳಿಗೆ NEET-UG ಮರುಪರೀಕ್ಷೆಯು ನಾಳೆ ಜೂನ್ 23 ರಂದು ನಡೆಯಲಿದೆ. ಹಿರಿಯ NTA ಅಧಿಕಾರಿಯ ಪ್ರಕಾರ, ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರುತ್ತಾರೆ. ಮೇಘಾಲಯ, ಹರಿಯಾಣ, ಛತ್ತೀಸ್‌ಗಢ, ಗುಜರಾತ್ ಮತ್ತು ಚಂಡೀಗಢದ ಆರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯ ಪ್ರಾರಂಭದಲ್ಲಿ ವಿಳಂಬದಿಂದಾಗಿ ಸಮಯದ ನಷ್ಟಕ್ಕೆ ಪರಿಹಾರವಾಗಿ ಗ್ರೇಸ್ ಅಂಕಗಳನ್ನು ಪಡೆದ ಅಭ್ಯರ್ಥಿಗಳಿಗೆ ಮರುಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ