AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ದಾರಿ ತೋರಿಸಿದ್ದು ನೀವೇ: ಭಾರತದ ಜೆನ್​-ಝಿ ಹೋರಾಟಕ್ಕೆ ಬಾಂಗ್ಲಾದೇಶವೇ ಸ್ಫೂರ್ತಿ ಎಂದ ನೇಹಾ ಬೋರಾ

ಭಾರತದಲ್ಲಿ ಕೇಂದ್ರ ಸರ್ಕಾರದ ನೀತಿಗಳು, ಶಿಕ್ಷಣದ ಮೇಲಿನ ರಾಜಕೀಯ ಹಸ್ತಕ್ಷೇಪ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯ ವಿರುದ್ಧ ಭುಗಿಲೆದ್ದಿರುವ ಯುವಕರ ಪ್ರತಿಭಟನೆಗೆ ಬಾಂಗ್ಲಾದೇಶದ ಐತಿಹಾಸಿಕ ವಿದ್ಯಾರ್ಥಿ ಚಳವಳಿಯೇ ಮೂಲ ಪ್ರೇರಣೆ ಎಂದು ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಹೇಳಿದ್ದಾರೆ. ದಕ್ಷಿಣ ಏಷ್ಯಾದ ಯುವಕರು ಒಟ್ಟಾಗಿ ನಿಂತು ಸುಂದರ ಭವಿಷ್ಯವನ್ನು ನಿರ್ಮಿಸಬೇಕೆಂದು ಅವರು ಕರೆ ನೀಡಿದ್ದಾರೆ.

ನಮಗೆ ದಾರಿ ತೋರಿಸಿದ್ದು ನೀವೇ: ಭಾರತದ ಜೆನ್​-ಝಿ ಹೋರಾಟಕ್ಕೆ ಬಾಂಗ್ಲಾದೇಶವೇ ಸ್ಫೂರ್ತಿ ಎಂದ ನೇಹಾ ಬೋರಾ
ನೇಹಾ Image Credit source: PTI
ನಯನಾ ರಾಜೀವ್
|

Updated on: Oct 15, 2026 | 9:53 AM

Share

ನವದೆಹಲಿ, ಅಕ್ಟೋಬರ್ 15: ಭಾರತದಲ್ಲಿ ಕೇಂದ್ರ ಸರ್ಕಾರದ ನೀತಿಗಳು, ಶಿಕ್ಷಣದ ಮೇಲಿನ ರಾಜಕೀಯ ಹಸ್ತಕ್ಷೇಪ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯ ವಿರುದ್ಧ ಭುಗಿಲೆದ್ದಿರುವ ಯುವಕರ ಪ್ರತಿಭಟನೆಗೆ ಬಾಂಗ್ಲಾದೇಶದ ಐತಿಹಾಸಿಕ ವಿದ್ಯಾರ್ಥಿ ಚಳವಳಿಯೇ ಮೂಲ ಪ್ರೇರಣೆ ಎಂದು ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಹೇಳಿದ್ದಾರೆ. ವಿಡಿಯೋ ಸಂದೇಶದಲ್ಲಿ ಅವರು ಮಾತನಾಡಿದ್ದು, ಭಾರತದ ಬೀದಿಗಳಲ್ಲಿ ಇಂದು ಕಾಣುತ್ತಿರುವ ಜೆನ್-ಝಿ ಆಂದೋಲನಕ್ಕೆ ಬಾಂಗ್ಲಾದೇಶದ ವಿದ್ಯಾರ್ಥಿ ಶಕ್ತಿಯೇ ದಾರಿ ದೀಪವಾಗಿದೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ಬಾಂಗ್ಲಾ ವಿದ್ಯಾರ್ಥಿಗಳಿಗೆ ಕ್ರಾಂತಿಕಾರಿ ಶುಭಾಶಯ

ಭಾರತದಲ್ಲಿ ಇಂದು ಎಲ್ಲೆಡೆ ಹರಡುತ್ತಿರುವ ಜೆನ್-ಝಿ ಚಳವಳಿಯ ಕಿಡಿ ಮೊದಲು ಹೊತ್ತಿಕೊಂಡಿದ್ದು ಬಾಂಗ್ಲಾದೇಶದಲ್ಲಿ. ನಮಗೆ ಸಾಮೂಹಿಕ ಹೋರಾಟದ ದಾರಿ ತೋರಿಸಿದ್ದಕ್ಕಾಗಿ ಬಾಂಗ್ಲಾದೇಶದ ಯುವಜನತೆಗೆ ಧನ್ಯವಾದಗಳು ಎಂದು ಸಂದೇಶದಲ್ಲಿ ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಧಾರ್ಮಿಕ ಮೂಲಭೂತವಾದದ ವಿರುದ್ಧ ಯುವಕರು ನಡೆಸುತ್ತಿರುವ ಸಂಘರ್ಷ ಮತ್ತು ಭಾರತದಲ್ಲಿ ಸಂವಿಧಾನ, ಮುಕ್ತ ಚಿಂತನೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟಗಳ ನಡುವೆ ಸಾಮ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಾಂಗ್ಲಾದೇಶ ಮತ್ತು ಭಾರತ ಎರಡೂ ದೇಶಗಳ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸ್ವತಂತ್ರ ಚಿಂತನೆಯನ್ನು ಹತ್ತಿಕ್ಕುವ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲೆ ರಾಜಕೀಯ ಸಿದ್ಧಾಂತಗಳನ್ನು ಹೇರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ದಕ್ಷಿಣ ಏಷ್ಯಾದ ಯುವಕರು ಒಟ್ಟಾಗಿ ನಿಂತು ಸುಂದರ ಭವಿಷ್ಯವನ್ನು ನಿರ್ಮಿಸಬೇಕೆಂದು ಕರೆ ನೀಡಿದ್ದಾರೆ.

ಕಳೆದ ಕೆಲ ವಾರಗಳಿಂದ ನವದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಮತ್ತು ಯುವಜನರ ಪ್ರತಿಭಟನೆಗಳಲ್ಲಿ ನೇಹಾ ಬೋರಾ ಪ್ರಮುಖ ನಾಯಕಿಯಾಗಿ ಹೊರಹೊಮ್ಮಿದ್ದಾರೆ. ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳ ಮುಂದೆ ನಿಂತು ದೆಹಲಿ ಪೊಲೀಸರನ್ನು ನೇರವಾಗಿ ಪ್ರಶ್ನಿಸಿದ ಹಾಗೂ ಪೊಲೀಸ್ ವಾಹನಗಳೊಳಗಿಂದಲೇ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಅವರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದವು.

ಮತ್ತಷ್ಟು ಓದಿ: ಎಸ್‌ಐಆರ್ ಅಕ್ರಮ; ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ರಾಹುಲ್ ಗಾಂಧಿ

ಇತ್ತೀಚೆಗೆ ‘ಇಂಡಿ’ ಮೈತ್ರಿಕೂಟದ ಸಂಸದರು ದೆಹಲಿಯಲ್ಲಿ ನಡೆಸಿದ ಬೃಹತ್ ಮೆರವಣಿಗೆಯಲ್ಲಿ ಪ್ರಿಯಾಂಕಾ ಗಾಂಧಿ ಪಕ್ಕದಲ್ಲೇ ಟ್ರಕ್ ಮೇಲೆ ನಿಂತು ಗಮನ ಸೆಳೆದಿದ್ದ ನೇಹಾ, ನಂತರ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ‘ಹೈ ಟೀ’ ಸಭೆಯಲ್ಲೂ ಪ್ರಮುಖ ಆಕರ್ಷಣೆಯಾಗಿದ್ದರು.

ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಇವರನ್ನು ಪದೇಪದೇ ವಶಕ್ಕೆ ಪಡೆದಿದ್ದರು.

ಅಕ್ಟೋಬರ್ 2 ಹಾಗೂ 4: ಜಂತರ್ ಮಂತರ್ ಬಳಿ ಧರಣಿ ನಡೆಸುತ್ತಿದ್ದಾಗ ಮತ್ತು ಮೆರವಣಿಗೆಯ ಸಮಯದಲ್ಲಿ ವಶಕ್ಕೆ.

ಅಕ್ಟೋಬರ್ 10: ಸಫ್ದರ್ಜಂಗ್ ಏರ್‌ಪೋರ್ಟ್ ಫ್ಲೈಓವರ್ ಬಳಿ ಪೊಲೀಸರು ತಡೆದು, ಮೈದಾನ್ ಗರ್ಹಿ ಪೊಲೀಸ್ ಠಾಣೆಗೆ ಕರೆದೊಯ್ದರು.

ಅಕ್ಟೋಬರ್ 11: ನರೇಲಾ ಕೈಗಾರಿಕಾ ಪ್ರದೇಶದ ಠಾಣೆಯಲ್ಲಿ ದಿನವಿಡೀ ಇರಿಸಿ, ಪ್ರತಿ ಬಾರಿಯೂ ಸಂಜೆಯ ವೇಳೆ ಬಿಡುಗಡೆ ಮಾಡಲಾಯಿತು.

ಬಾಂಗ್ಲಾದೇಶದ ಪ್ರತಿಭಟನೆ ಹಿನ್ನೆಲೆ: 2024 ರ ಜುಲೈ-ಆಗಸ್ಟ್‌ನಲ್ಲಿ ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳ ಕೋಟಾ ಪದ್ಧತಿಯ ವಿರುದ್ಧ ವಿದ್ಯಾರ್ಥಿಗಳು ಆರಂಭಿಸಿದ ಜೆನ್-ಝಿ ಆಂದೋಲನವು ಅಂತಿಮವಾಗಿ ಶೇಖ್ ಹಸೀನಾ ನೇತೃತ್ವದ 15 ವರ್ಷಗಳ ಸರ್ಕಾರದ ಪತನಕ್ಕೆ ಕಾರಣವಾಗಿತ್ತು. ಅದೇ ಮಾದರಿಯ ವಿದ್ಯಾರ್ಥಿ ಶಕ್ತಿಯನ್ನು ದಕ್ಷಿಣ ಏಷ್ಯಾದಾದ್ಯಂತ ಸಂಘಟಿಸಲು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಪ್ರಯತ್ನಿಸುತ್ತಿವೆ.

ರಾಜಕೀಯ ಊಹಾಪೋಹ: ಕನ್ಹಯ್ಯಾ ಕುಮಾರ್ ಸಿಪಿಐ ತೊರೆದು ಕಾಂಗ್ರೆಸ್ ಸೇರಿದಂತೆ, ಜೆಎನ್‌ಯು ಹಾಗೂ ಐಸಾ ಹಿನ್ನೆಲೆಯ ನೇಹಾ ಬೋರಾ ಕೂಡ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ (NSUI) ಅಥವಾ ಮುಖ್ಯವಾಹಿನಿ ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳಲಿದ್ದಾರೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿದ ಕಬ್ಬು ಬೆಳೆಗಾರರು
ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿದ ಕಬ್ಬು ಬೆಳೆಗಾರರು
ಅಗ್ನಿ ಪರೀಕ್ಷೆಗೆ 18 ಕಿಲೋಮೀಟರ್ ನಡೆದುಕೊಂಡು ಹೋಗಿದ್ದೆ: ಕಷ್ಟ ನೆನೆದ ಮಂಜ
ಅಗ್ನಿ ಪರೀಕ್ಷೆಗೆ 18 ಕಿಲೋಮೀಟರ್ ನಡೆದುಕೊಂಡು ಹೋಗಿದ್ದೆ: ಕಷ್ಟ ನೆನೆದ ಮಂಜ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ