AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ ಬೋರಾಗೆ ಮತ್ತೊಂದು ಶಾಕ್; ಶಾಂತಿ ಬಾಂಡ್​​ಗೆ ಸಹಿ ಹಾಕಲು ಸೂಚಿಸಿ, ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್!

ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (AISA) ಅಧ್ಯಕ್ಷೆ ನೇಹಾ ಬೋರಾ ಅವರಿಗೆ ಎಸ್​ಇಎಂ ನೀಡಿದ್ದ ನೋಟಿಸ್ ಅನ್ನು ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ದಂಡಾಧಿಕಾರಿಗಳ ಮುಂದೆ ಹಾಜರಾಗಿ 10,000 ರೂ. ಮೌಲ್ಯದ ವೈಯಕ್ತಿಕ 'ಶಾಂತಿ ನಿರ್ವಹಣಾ ಬಾಂಡ್' ಸಲ್ಲಿಸಿ, ಪ್ರಕ್ರಿಯೆಯ ಸಮಯದಲ್ಲಿ ಶಾಂತಿ ಕಾಪಾಡುವಂತೆ ಅವರಿಗೆ ಸೂಚಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್ ಅವರಿದ್ದ ಪೀಠವು, "ಈ ಹಂತದಲ್ಲಿ ನಾವು ಈ ರಿಟ್ ಅರ್ಜಿಯನ್ನು ವಜಾಗೊಳಿಸುತ್ತಿದ್ದೇವೆ" ಎಂದು ತಿಳಿಸಿತು.

ನೇಹಾ ಬೋರಾಗೆ ಮತ್ತೊಂದು ಶಾಕ್; ಶಾಂತಿ ಬಾಂಡ್​​ಗೆ ಸಹಿ ಹಾಕಲು ಸೂಚಿಸಿ, ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್!
ನೇಹಾ ಬೋರಾImage Credit source: PTI
ಸುಷ್ಮಾ ಚಕ್ರೆ
|

Updated on: Oct 23, 2026 | 8:55 PM

Share

ನವದೆಹಲಿ, ಅಕ್ಟೋಬರ್ 23: ಮತದಾರರ ಪಟ್ಟಿಯ ಎಸ್​ಐಆರ್​ ವಿರೋಧಿಸಿ ದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಸಿಆರ್‌ಪಿಸಿ ಸೆಕ್ಷನ್ ಅಡಿಯಲ್ಲಿ 10,000 ರೂ. ಮೌಲ್ಯದ ‘ಶಾಂತಿ ನಿರ್ವಹಣಾ ಬಾಂಡ್’ ಸಲ್ಲಿಸುವಂತೆ ದೆಹಲಿ ಪೊಲೀಸರು ನೀಡಿರುವ ನೋಟಿಸ್ ಅನ್ನು ರದ್ದುಗೊಳಿಸಲು ಕೋರಿ ಸಾಮಾಜಿಕ ಕಾರ್ಯಕರ್ತೆ ನೇಹಾ ಬೋರಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಾವಿರಾರು ಜನರು ದೆಹಲಿಯಲ್ಲಿ ಭಾರಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಈ ನೋಟಿಸ್ ಜಾರಿಗೊಳಿಸಿದ್ದರು.

ಮ್ಯಾಜಿಸ್ಟ್ರೇಟ್ ಹೊರಡಿಸಿರುವ ಶೋ-ಕಾಸ್ ನೋಟಿಸ್ ಅನ್ನು ಪ್ರಶ್ನಿಸಿ ನೇರವಾಗಿ ಹೈಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್, ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆಯೇ ತಮ್ಮ ವಾದಗಳನ್ನು ಹಾಗೂ ಸ್ಪಷ್ಟನೆಯನ್ನು ಮಂಡಿಸುವಂತೆ ನೇಹಾ ಬೋರಾಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಬಿಗುವಿನ ವಾತಾವರಣ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ನೇಹಾ ಬೋರಾ ವಿರುದ್ಧ ಪೊಲೀಸರ ಆರೋಪಗಳೇನು?:

ಅಕ್ಟೋಬರ್ 16ರಂದು ಮಂಡಿ ಹೌಸ್‌ನಲ್ಲಿ ಘೋಷಣೆ ಕೂಗಿದ್ದು, ಬಿಎನ್‌ಎಸ್‌ಎಸ್ ಸೆಕ್ಷನ್ 163 (ನಿಷೇಧಾಜ್ಞೆ) ಜಾರಿಯಲ್ಲಿದ್ದರೂ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಜನರನ್ನು ಪ್ರಚೋದಿಸಿದ್ದು ಹಾಗೂ ಕೆಜೆಪಿಯ ‘ಲೆಹರಾ ದೋ ತಿರಂಗಾ’ ಮೆರವಣಿಗೆಯಲ್ಲಿ ಭಾಗವಹಿಸಲು ಯತ್ನಿಸಿದ ಆರೋಪಗಳು ಅವರ ಮೇಲಿವೆ. ಅಕ್ಟೋಬರ್ 16ರಂದು ನೇಹಾ ಬೋರಾ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದು, ಅಕ್ಟೋಬರ್ 17ರಂದು ಬಿಡುಗಡೆ ಮಾಡಿ ಈ ನೋಟಿಸ್ ನೀಡಲಾಗಿತ್ತು.

ಶಾಂತಿ ಬಾಂಡ್ ಅಂದರೇನು?:

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಗಲಭೆ ಅಥವಾ ಶಾಂತಿ ಭಂಗ ಉಂಟಾಗುವ ಸಾಧ್ಯತೆಯಿದ್ದಾಗ, ವ್ಯಕ್ತಿಯು ನಿರ್ದಿಷ್ಟ ಅವಧಿಗೆ ಯಾವುದೇ ಅಪರಾಧದಲ್ಲಿ ಭಾಗಿಯಾಗುವುದಿಲ್ಲ ಎಂಬ ಭರವಸೆಯ ಮೇಲೆ ಬಾಂಡ್ ಹಾಗೂ ಶೂರಿಟಿ ನೀಡುವಂತೆ ಮ್ಯಾಜಿಸ್ಟ್ರೇಟ್ ಆದೇಶಿಸುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?