AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjay Raut: ನೆಹರೂ ಮೆಮೋರಿಯಲ್ ಮ್ಯೂಸಿಯಂ ಮರುನಾಮಕರಣ, ಬಿಜೆಪಿ ಇತಿಹಾಸವನ್ನು ನಾಶ ಮಾಡುತ್ತಿದೆ: ಸಂಜಯ್ ರಾವುತ್

ನೆಹರೂ ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯನ್ನು (Nehru Memorial Museum and Library Society) ಮರುನಾಮಕರಣ ಮಾಡಲಾಗಿದೆ. ಈ ಬಗ್ಗೆ ಶಿವಸೇನಾ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವುತ್ (Sanjay Raut) ಅವರು ಇಂದು (ಜೂ.17) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Sanjay Raut: ನೆಹರೂ ಮೆಮೋರಿಯಲ್ ಮ್ಯೂಸಿಯಂ ಮರುನಾಮಕರಣ, ಬಿಜೆಪಿ ಇತಿಹಾಸವನ್ನು ನಾಶ ಮಾಡುತ್ತಿದೆ: ಸಂಜಯ್ ರಾವುತ್
ಸಂಜಯ್ ರಾವುತ್
ಅಕ್ಷಯ್​ ಪಲ್ಲಮಜಲು​​
|

Updated on: Jun 17, 2023 | 1:26 PM

Share

ಮುಂಬೈ: ನೆಹರೂ ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯನ್ನು (Nehru Memorial Museum and Library Society) ಮರುನಾಮಕರಣ ಮಾಡಲಾಗಿದೆ. ಈ ಬಗ್ಗೆ ಶಿವಸೇನಾ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವುತ್ (Sanjay Raut) ಅವರು ಇಂದು (ಜೂ.17) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರವು ಇತಿಹಾಸವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ನೆಹರೂ ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಂಜಯ್ ರಾವುತ್, ಇತರ ಪ್ರಧಾನಿಗಳ ಕೊಡುಗೆಯನ್ನು ತೋರಿಸಬೇಕು ಎಂದು ನಾನು ಒಪ್ಪುತ್ತೇನೆ. ಇತರ ಪ್ರಧಾನಿಗಳ ಕೊಡುಗೆಗಳನ್ನು ಪ್ರದರ್ಶಿಸಬಹುದಾದ ಬೇರೆ ವಿಭಾಗವನ್ನು ಮಾಡಬಹುದು, ಆದರೆ ಈಗ ಇರುವ ಮ್ಯೂಸಿಯಂ ಹೆಸರನ್ನು ಬದಲಾಯಿಸುವ ಅಗತ್ಯವಿಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರ ದೇಶದ ಇತಿಹಾಸದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ ಸಂಜಯ್ ರಾವತ್, ಪಂಡಿತ್ ನೆಹರು ಅವರ ಹೆಸರನ್ನು ಪ್ರಧಾನಿ ಮ್ಯೂಸಿಯಂನಲ್ಲಿ ಇರಿಸಬಹುದಿತ್ತು, ಪಂಡಿತ್ ನೆಹರು ನಮ್ಮ ಮೊದಲ ಪ್ರಧಾನಿ ಮತ್ತು ಅವರ ಕೊಡುಗೆ ದೊಡ್ಡದಾಗಿದೆ, ಆದರೆ ಬಿಜೆಪಿ ಇತಿಹಾಸವನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಕಾಂಗ್ರೆಸ್ ನಾಯಕ ಗೌರವ್ ವಲ್ಲಭ್, ಬೋರ್ಡ್‌ನಿಂದ ಜವಾಹರಲಾಲ್ ನೆಹರು ಅವರ ಹೆಸರನ್ನು ತೆಗೆದುಹಾಕುವುದರಿಂದ ಅವರ ವ್ಯಕ್ತಿತ್ವ ಕಡಿಮೆಯಾಗುತ್ತದೆ ಎಂದು ಅವರು ಭಾವಿಸುತ್ತಾರೆ. ದೇಶದ ಜನರು ನೆಹರೂ ಅವರನ್ನು ಆಧುನಿಕ ಭಾರತದ ವಾಸ್ತುಶಿಲ್ಪಿ ಎಂದು ಪರಿಗಣಿಸುತ್ತಾರೆ. ನಾನು ಮೋದಿ ಅವರಿಗೆ ವಾಜಪೇಯಿಯವರ ಹೇಳಿಕೆಯ ಬಗ್ಗೆ ನೆನಪಿಸಲು ಬಯಸುತ್ತೇನೆ. ‘ಛೋಟೆ ಮನ್ ಸೆ ಕೋಯಿ ಬಡಾ ನಹೀ ಬನ್ ಪಯೇಗಾ’, ನೀವು ದೇಶದ ಮುಂದೆ ನಿಮ್ಮ ಕ್ಷುಲ್ಲಕ ಮನಸ್ಥಿತಿಯನ್ನು ಪ್ರದರ್ಶಿಸುತ್ತಿದ್ದೀರಿ, ನೀವು ಪಂಡಿತ್ ನೆಹರು ಅವರ ಹೆಸರನ್ನು ಬೋರ್ಡ್‌ನಿಂದ ತೆಗೆದುಹಾಕುತ್ತೀರಿ, ಆದರೆ ನೀವು ಅವರನ್ನು ಜನರ ಹೃದಯದಿಂದ ಹೇಗೆ ತೆಗೆದುಹಾಕುತ್ತೀರಿ ? ಎಂದು ಪ್ರಶ್ನಿಸಿದ್ದಾರೆ.

ನೆಹರು ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯ ಹೆಸರನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ಸಂಸ್ಕೃತಿ ಸಚಿವಾಲಯ ಶುಕ್ರವಾರ ತಿಳಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೊಸೈಟಿಯ ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯ ವಿಶೇಷ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: Sanjay Raut ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನಾ ನಾಯಕ ಸಂಜಯ್ ರಾವುತ್​ಗೆ ಜಾಮೀನು

ಈ ಯೋಜನೆಯನ್ನು ಕಾರ್ಯಕಾರಿ ಮಂಡಳಿ, NMML ನವೆಂಬರ್ 2016ರಲ್ಲಿ ನಡೆದ ಅದರ 162ನೇ ಸಭೆಯಲ್ಲಿ ಅನುಮೋದಿಸಿತು. ಪ್ರಧಾನಮಂತ್ರಿ ಸಂಗ್ರಹಾಲಯವನ್ನು ಕಳೆದ ವರ್ಷ ಏಪ್ರಿಲ್ 21ರಂದು ಸಾರ್ವಜನಿಕರಿಗೆ ತೆರೆಯಲಾಯಿತು. ಉದ್ಘಾಟನೆ ಸಂದರ್ಭದಲ್ಲಿ ಸರ್ಕಾರದಿಂದ ಆಹ್ವಾನ ಬಂದರೂ ನೆಹರೂ-ಗಾಂಧಿ ಕುಟುಂಬದ ಯಾವುದೇ ಸದಸ್ಯರು ಸಮಾರಂಭಕ್ಕೆ ಹಾಜರಾಗಿರಲಿಲ್ಲ. ಪಂಡಿತ್ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಸೇರಿದಂತೆ ನೆಹರೂ-ಗಾಂಧಿ ಕುಟುಂಬದ ಮೂವರು ಸದಸ್ಯರು ದೇಶದ ಪ್ರಧಾನಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಈ ವಸ್ತುಸಂಗ್ರಹಾಲಯವು ಎಲ್ಲರನ್ನೂ ಒಳಗೊಂಡಂತೆ ತಡೆರಹಿತ ನವೀಕರಿಸಿಲಾಗಿದೆ. ನೆಹರು ಮ್ಯೂಸಿಯಂ ಕಟ್ಟಡದಲ್ಲಿ ಎಲ್ಲರ ಚರಿತ್ರೆ ಇರುತ್ತದೆ. ಈಗ ಜವಾಹರಲಾಲ್ ನೆಹರೂ ಅವರ ಜೀವನ ಮತ್ತು ಕೊಡುಗೆಯ ಕುರಿತು ತಾಂತ್ರಿಕವಾಗಿ ಸುಧಾರಿತ ಪ್ರದರ್ಶನಗಳನ್ನು ಸಂಪೂರ್ಣವಾಗಿ ನವೀಕರಿಸಲಾಗಿದೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ