AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ. 22ರಂದು ನೇಪಾಳ ಪ್ರಧಾನಿ ಬಾಲೆನ್ ಶಾ ಭಾರತ ಪ್ರವಾಸ; ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ದ್ವಿಪಕ್ಷೀಯ ಭೇಟಿ

ನೇಪಾಳದ ಪ್ರಧಾನಮಂತ್ರಿ ಬಾಲೇಂದ್ರ ಶಾ (ಬಾಲೇನ್ ಶಾ)  ನವೆಂಬರ್ 22ರಂದು 2 ದಿನಗಳ ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ನಡೆಯುತ್ತಿರುವ ಈ ಭೇಟಿಯು, ಮಾರ್ಚ್ 27ರಂದು ಅಧಿಕಾರ ವಹಿಸಿಕೊಂಡ ನಂತರ ಬಾಲೆನ್ ಶಾ ಅವರ ಮೊದಲ ದ್ವಿಪಕ್ಷೀಯ ವಿದೇಶಿ ಪ್ರವಾಸವಾಗಿದೆ. ಈ ಭೇಟಿಯ ವೇಳೆ ಉಭಯ ದೇಶಗಳ ನಡುವಿನ ಬಾಂಧವ್ಯ ವೃದ್ಧಿ, ಮೂಲಸೌಕರ್ಯ, ಇಂಧನ ಮತ್ತು ಬಾಹ್ಯಾಕಾಶ ಸೇರಿದಂತೆ ಹಲವು ಪ್ರಮುಖ ಒಪ್ಪಂದಗಳು ಏರ್ಪಡುವ ನಿರೀಕ್ಷೆಯಿದೆ.

ನ. 22ರಂದು ನೇಪಾಳ ಪ್ರಧಾನಿ ಬಾಲೆನ್ ಶಾ ಭಾರತ ಪ್ರವಾಸ; ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ದ್ವಿಪಕ್ಷೀಯ ಭೇಟಿ
ಪ್ರಧಾನಿ ಮೋದಿ, ಬಾಲೆನ್ ಶಾImage Credit source: PTI
ಸುಷ್ಮಾ ಚಕ್ರೆ
|

Updated on: Nov 20, 2026 | 3:22 PM

Share

ಕಠ್ಮಂಡು, ನವೆಂಬರ್ 20: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ನೇಪಾಳ ಪ್ರಧಾನಿ ಬಾಲೆನ್ ಶಾ ನವೆಂಬರ್ 22ರಂದು 2 ದಿನಗಳ ಅಧಿಕೃತ ಭೇಟಿಗಾಗಿ ನವದೆಹಲಿಗೆ ತೆರಳಲಿದ್ದಾರೆ ಎಂದು ನೇಪಾಳದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಪ್ರಕಟಿಸಿದೆ. ಮಾರ್ಚ್ 27ರಂದು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಾಲೆನ್ ಶಾ ಅವರ ಮೊದಲ ಅಧಿಕೃತ ದ್ವಿಪಕ್ಷೀಯ ವಿದೇಶಿ ಭೇಟಿ ಇದಾಗಿದೆ. ಈ ಹಿಂದೆ ಅವರು ಸೆಪ್ಟೆಂಬರ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಅಮೆರಿಕಕ್ಕೆ ಪ್ರಯಾಣಿಸಿದ್ದರು.

34 ಸದಸ್ಯರ ನಿಯೋಗದ ನೇತೃತ್ವ:

36 ವರ್ಷದ ಬಾಲೆನ್ ಶಾ 34 ಸದಸ್ಯರ ನಿಯೋಗವನ್ನು ಮುನ್ನಡೆಸಲಿದ್ದು, ಇದರಲ್ಲಿ ಹಣಕಾಸು ಸಚಿವ ಸ್ವರ್ಣಿಮ್ ವಾಗ್ಲೆ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಶಿಶಿರ್ ಖನಾಲ್ ಸಹ ಸೇರಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಅಮೃತ್ ಬಹದ್ದೂರ್ ರೈ ವಿದೇಶಾಂಗ ಸಚಿವಾಲಯದಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಪ್ರಧಾನಿಯವರ ಮುಖ್ಯ ಸಲಹೆಗಾರ ಕುಮಾರ್ ಬ್ಯಂಜಂಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಹ ಪ್ರಧಾನಿಯವರೊಂದಿಗೆ ಇರಲಿದ್ದಾರೆ. ಪ್ರಧಾನಿ ನಿಯೋಗದೊಂದಿಗೆ ಪ್ರತ್ಯೇಕ ವಾಣಿಜ್ಯ ನಿಯೋಗವೂ ಭಾರತಕ್ಕೆ ಭೇಟಿ ನೀಡಲಿದೆ.

ಈ ಭೇಟಿಯ ಸಂದರ್ಭದಲ್ಲಿ ಬಾಲೆನ್ ಶಾ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದು, ಪ್ರಧಾನಿ ಮೋದಿ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಬಾಲೆನ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ.

ಇದನ್ನೂ ಓದಿ: Nepal Flood: ‘ಭಾರತ ನಿಮ್ಮೊಂದಿಗಿದೆ’; ಪ್ರವಾಹಕ್ಕೆ ತತ್ತರಿಸಿರುವ ನೇಪಾಳದ ಪ್ರಧಾನಿ ಬಾಲೆನ್ ಶಾಗೆ ಪಿಎಂ ಮೋದಿ ಭರವಸೆ

ಸಂಪರ್ಕ ಮತ್ತು ಇಂಧನ ಸಹಕಾರ ಯೋಜನೆಗಳು:

ವಿದೇಶಾಂಗ ಸಚಿವಾಲಯದ ಹೇಳಿಕೆಯ ಪ್ರಕಾರ, ಉಭಯ ದೇಶಗಳ ನಡುವಿನ ಸಂಪರ್ಕ ವಿಸ್ತರಣೆಗೆ ಸಂಬಂಧಿಸಿದ ವಿಷಯಗಳ ಚರ್ಚೆಯ ಜೊತೆಗೆ, ಇಂಧನ ಸಹಕಾರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಹೊಸ ಯೋಜನೆಗಳಿಗೆ ಶಂಕುಸ್ಥಾಪನೆಯೂ ಈ ಭೇಟಿಯ ವೇಳೆ ನಡೆಯಲಿದೆ. ಸಂಪರ್ಕ ಜಾಲ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ವ್ಯಾಪಾರ, ಸಾರಿಗೆ, ಇಂಧನ ಮತ್ತು ಹೂಡಿಕೆಯಂತಹ ಕ್ಷೇತ್ರಗಳಲ್ಲಿ ಆರ್ಥಿಕ ಸಹಕಾರವನ್ನು ವಿಸ್ತರಿಸುವ ವಿಷಯಗಳು ಉನ್ನತ ಮಟ್ಟದ ಚರ್ಚೆಯಲ್ಲಿ ಪ್ರಮುಖವಾಗಿರಲಿವೆ ಎಂದು ಸಚಿವಾಲಯ ತಿಳಿಸಿದೆ.

ವಿವಿಧ ಕ್ಷೇತ್ರಗಳಲ್ಲಿ ಒಡಂಬಡಿಕೆ:

ದ್ವಿಪಕ್ಷೀಯ ಸಭೆಗಳ ಸಂದರ್ಭದಲ್ಲಿ ಶಿಕ್ಷಣ, ಆರೋಗ್ಯ, ಕೃಷಿ, ಬಾಹ್ಯಾಕಾಶ, ವಿಪತ್ತು ನಿರ್ವಹಣೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಯಂತಹ ಕ್ಷೇತ್ರಗಳಲ್ಲಿ ಒಡಂಬಡಿಕೆಗಳನ್ನು (ಎಂಒಯು) ವಿನಿಮಯ ಮಾಡಿಕೊಳ್ಳಲಾಗುವುದು. ಇದು ಉಭಯ ದೇಶಗಳ ನಡುವಿನ ಆದ್ಯತೆಯ ಕ್ಷೇತ್ರಗಳಲ್ಲಿ ಪರಸ್ಪರ ಸಹಯೋಗವನ್ನು ಮತ್ತಷ್ಟು ವಿಸ್ತರಿಸಲು ಸಹಾಯ ಮಾಡುತ್ತದೆ ಎಂದು ವಿದೇಶಾಂಗ ಕಾರ್ಯದರ್ಶಿ ರೈ ಹೇಳಿದ್ದಾರೆ.

ಸಮಗ್ರ ದ್ವಿಪಕ್ಷೀಯ ಸಂಬಂಧಗಳ ಚರ್ಚೆ:

ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಲು ಸಹಾಯವಾಗುವ ಸಮಗ್ರ ದ್ವಿಪಕ್ಷೀಯ ವಿಷಯಗಳ ಕುರಿತು ಇಬ್ಬರೂ ಪ್ರಧಾನಿಗಳು ಚರ್ಚಿಸಲಿದ್ದಾರೆ. ಎರಡು ದಿನಗಳ ಅಧಿಕೃತ ಭೇಟಿಯನ್ನು ಮುಗಿಸಿ ನೇಪಾಳದ ಪ್ರಧಾನಿ ಬಾಲೆನ್ ಶಾ ನವೆಂಬರ್ 23ರಂದು ಸ್ವದೇಶಕ್ಕೆ ಮರಳಲಿದ್ದಾರೆ.

ಇದನ್ನೂ ಓದಿ: ಬಾಲೆನ್ ಶಾ ರಾಜತಾಂತ್ರಿಕತೆಯಲ್ಲಿ ಯು-ಟರ್ನ್; ಭಾರತ ಭೇಟಿಗೂ ಮುನ್ನ ವಿದೇಶಾಂಗ ಕಾರ್ಯದರ್ಶಿ ಮಿಸ್ರಿಯನ್ನು ಭೇಟಿಯಾದ ನೇಪಾಳದ ಪ್ರಧಾನಿ

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಯುವಜನರ ನೇತೃತ್ವದ ‘ಜೆನ್ ಝಡ್’ ಪ್ರತಿಭಟನೆಯು ಕೆ.ಪಿ. ಶರ್ಮಾ ಓಲಿ ಸರ್ಕಾರವನ್ನು ಪತನಗೊಳಿಸಿದ ಸುಮಾರು 6 ತಿಂಗಳ ನಂತರ, ಮಾರ್ಚ್‌ನಲ್ಲಿ ರಾಷ್ಟ್ರೀಯ ಸ್ವತಂತ್ರ ಪಾರ್ಟಿ (ಆರ್​ಎಸ್​ಪಿ) ನಾಯಕ ಬಾಲೆನ್ ಶಾ ನೇತೃತ್ವದ ಸರ್ಕಾರ ರಚನೆಯಾದಾಗ ಪ್ರಧಾನಿ ಮೋದಿ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದರು.

ನೂತನವಾಗಿ ಆಯ್ಕೆಯಾದ ನೇಪಾಳದ ಪ್ರಧಾನಿಗಳು ತಮ್ಮ ಮೊದಲ ಅಧಿಕೃತ ದ್ವಿಪಕ್ಷೀಯ ವಿದೇಶಿ ತಾಣವನ್ನಾಗಿ ಭಾರತವನ್ನು ಆಯ್ಕೆ ಮಾಡಿಕೊಳ್ಳುವುದು ದೀರ್ಘಕಾಲದ ಸಂಪ್ರದಾಯವಾಗಿದೆ, ಆದರೂ ಇದು ಕಡ್ಡಾಯ ನಿಯಮವಲ್ಲ. 2024ರಲ್ಲಿ ಮಾಜಿ ಪ್ರಧಾನಿ ಓಲಿ ಅವರು ಮೊದಲು ಚೀನಾಕ್ಕೆ ಭೇಟಿ ನೀಡುವ ಮೂಲಕ ಈ ಸಂಪ್ರದಾಯವನ್ನು ಮುರಿದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಗೋಣಿಚೀಲ ಹೊದ್ದು ತಹಶೀಲ್ದಾರ್ ಕಚೇರಿ ಗೇಟ್ ಬಳಿಯೇ ಮಲಗಿದ ರೈತ!
ಗೋಣಿಚೀಲ ಹೊದ್ದು ತಹಶೀಲ್ದಾರ್ ಕಚೇರಿ ಗೇಟ್ ಬಳಿಯೇ ಮಲಗಿದ ರೈತ!
ರಂಭಾಪುರಿ ಪೀಠದ  ಬಗ್ಗೆಯೂ ‘ಬಸವ ಮಂಟಪ’ ಪುಸ್ತಕದಲ್ಲಿ ವಿವಾದಾತ್ಮಕ ಉಲ್ಲೇಖ!
ರಂಭಾಪುರಿ ಪೀಠದ  ಬಗ್ಗೆಯೂ ‘ಬಸವ ಮಂಟಪ’ ಪುಸ್ತಕದಲ್ಲಿ ವಿವಾದಾತ್ಮಕ ಉಲ್ಲೇಖ!
ಟಿವಿ9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಅದ್ದೂರಿ ಚಾಲನೆ
ಟಿವಿ9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಅದ್ದೂರಿ ಚಾಲನೆ
ಕ್ಯಾಪ್ಟನ್ ಆದ ಮೊದಲ ಹೆಜ್ಜೆಯಲ್ಲೇ ಎಡವಿದ ಗಾನವಿ: ವಿಡಿಯೋ
ಕ್ಯಾಪ್ಟನ್ ಆದ ಮೊದಲ ಹೆಜ್ಜೆಯಲ್ಲೇ ಎಡವಿದ ಗಾನವಿ: ವಿಡಿಯೋ
‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್ ಕ್ಷಮೆಯಾಚನೆ
‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್ ಕ್ಷಮೆಯಾಚನೆ
ಸಿಎಂ ಸಂಧಾನದ ನಂತರವೂ 4ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ!
ಸಿಎಂ ಸಂಧಾನದ ನಂತರವೂ 4ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ!
ಹಿರಿಯೂರು ಉಪಚುನಾವಣೆ: ಕುಮಾರಸ್ವಾಮಿ ಬಳಿ ಅಮಿತ್​ ಶಾ ಚರ್ಚೆ
ಹಿರಿಯೂರು ಉಪಚುನಾವಣೆ: ಕುಮಾರಸ್ವಾಮಿ ಬಳಿ ಅಮಿತ್​ ಶಾ ಚರ್ಚೆ