ಒಡಿಶಾದ ವಿಶ್ವವಿದ್ಯಾಲಯದಲ್ಲಿ ನೇಪಾಳದ ವಿದ್ಯಾರ್ಥಿನಿ ಆತ್ಮಹತ್ಯೆ; 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳನ್ನು ಕಳುಹಿಸಿದ ವಿವಿ

|

Updated on: Feb 17, 2025 | 6:23 PM

ಒಡಿಶಾದ ಕೆಐಐಟಿ ವಿಶ್ವವಿದ್ಯಾಲಯದಲ್ಲಿ ನೇಪಾಳದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆಯಲ್ಲಿ 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯದಿಂದ ಹೊರಹೋಗುವಂತೆ ಸೂಚಿಸಲಾಗಿದೆ. "ನಮಗೆ ನ್ಯಾಯ ಬೇಕು" ಎಂದು ಘೋಷಣೆ ಕೂಗುತ್ತಾ ನೂರಾರು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಜಮಾಯಿಸಿ, ವಿಶ್ವವಿದ್ಯಾಲಯದ ಆಡಳಿತವು ಆತ್ಮಹತ್ಯೆ ಪ್ರಕರಣವನ್ನು ಕಡಿಮೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಒಡಿಶಾದ ವಿಶ್ವವಿದ್ಯಾಲಯದಲ್ಲಿ ನೇಪಾಳದ ವಿದ್ಯಾರ್ಥಿನಿ ಆತ್ಮಹತ್ಯೆ; 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳನ್ನು ಕಳುಹಿಸಿದ ವಿವಿ
Nepal Students
Follow us on

ಭುವನೇಶ್ವರ: ಒಡಿಶಾದ ಭುವನೇಶ್ವರದ ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ)ಯಲ್ಲಿ ನೇಪಾಳಿ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ಹೊರಬಿದ್ದ ನಂತರ ಇಂದು ಭಾರೀ ಪ್ರತಿಭಟನೆಗಳು ನಡೆಯಿತು. ಆ ವಿದ್ಯಾರ್ಥಿನಿ ಪ್ರಕೃತಿ ಲಾಮ್ಸಲ್ 3ನೇ ವರ್ಷದ ಬಿ.ಟೆಕ್ ವಿದ್ಯಾರ್ಥಿನಿಯಾಗಿದ್ದು, ಭಾನುವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾಳೆ. ನೇಪಾಳಿ ಪ್ರಜೆಗಳು ಸೇರಿದಂತೆ ಅನೇಕ ವಿದ್ಯಾರ್ಥಿಗಳು ವಿಶ್ವವಿದ್ಯಾಲಯವು ಪರಿಸ್ಥಿತಿಯನ್ನು ತಪ್ಪಾಗಿ ನಿರ್ವಹಿಸಿದೆ ಮತ್ತು ಅದನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ನೇಪಾಳಿ ವಿದ್ಯಾರ್ಥಿಗಳನ್ನು ಇದ್ದಕ್ಕಿದ್ದಂತೆ ಕ್ಯಾಂಪಸ್‌ನಿಂದ ಹೊರಹೋಗುವಂತೆ ಸೂಚಿಸಲಾಯಿತು. ಪ್ರತಿಭಟನಾಕಾರರು ನ್ಯಾಯಯುತ ತನಿಖೆಗೆ ಒತ್ತಾಯಿಸುತ್ತಿದ್ದಾರೆ.

ಭುವನೇಶ್ವರದ ಕಳಿಂಗ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆ (ಕೆಐಐಟಿ) ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನೇಪಾಳದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಆರೋಪದ ನಂತರ ಇಂದು ಭಾರಿ ಪ್ರತಿಭಟನೆಗಳು ನಡೆದವು. ಮೂರನೇ ವರ್ಷದ ಬಿಟೆಕ್ ವಿದ್ಯಾರ್ಥಿನಿ ಪ್ರಕೃತಿ ಲಾಮ್ಸಾಲ್ ಭಾನುವಾರ ಸಂಜೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಇದನ್ನೂ ಓದಿ: ಪತಿಯ ಗುಟ್ಟು ರಟ್ಟು: ಗಂಡನ ಜಿಮ್‌ ಸೆಂಟರ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ


ಪ್ರಕೃತಿಯ ಸ್ನೇಹಿತರು ಆಕೆಯ ಮಾಜಿ ಗೆಳೆಯ ಅದ್ವಿಕ್ ಶ್ರೀವಾಸ್ತವ ಕಿರುಕುಳ ನೀಡುತ್ತಿದ್ದುದರಿಂದಲೇ ಆಕೆಯ ಸಾವು ಸಂಭವಿಸಿದೆ ಎಂದು ಹೇಳಿದ್ದಾರೆ. ಆಕೆಯ ಸಹೋದರ ಕೂಡ ಆತನ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಅದ್ವಿಕ್‌ನನ್ನು ಬಂಧಿಸಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 108ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊರಿಸಲಾಗಿದೆ.


ನೂರಾರು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಜಮಾಯಿಸಿ, “ನಮಗೆ ನ್ಯಾಯ ಬೇಕು” ಎಂಬ ಘೋಷಣೆಗಳನ್ನು ಕೂಗುತ್ತಾ ವಿಶ್ವವಿದ್ಯಾಲಯದ ಆಡಳಿತವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ. ಮೃತ ವಿದ್ಯಾರ್ಥಿಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಇತರ ಗ್ಯಾಜೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ವಿಷಯದ ಬಗ್ಗೆ ನಾವು ವೈಜ್ಞಾನಿಕ ತನಿಖೆಯನ್ನು ಕೈಗೊಳ್ಳುತ್ತಿದ್ದೇವೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ