ಇಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನ : ಈ ದಿನ ಪರಾಕ್ರಮ ದಿನವನ್ನಾಗಿ ಆಚರಿಸುವುದರ ಹಿಂದಿನ ಮಹತ್ವವೇನು?

ಭಾರತವನ್ನು ಬ್ರಿಟಿಷರ ದಾಸ್ಯದಿಂದ ಮುಕ್ತಗೊಳಿಸುವಲ್ಲಿ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಅಪಾರವಾದದ್ದು. ಅಂತಹವರಲ್ಲಿ ಅಪ್ರತಿಮ ದೇಶಭಕ್ತರಾಗಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಕೂಡ ಒಬ್ಬರಾಗಿದ್ದಾರೆ. ತಮ್ಮ ಹೋರಾಟದ ಹಾದಿಯಿಂದಲೇ ಯುವಕರಿಗೆ ಪ್ರೇರಣೆಯಾಗುವ ವ್ಯಕ್ತಿತ್ವ ನೇತಾಜಿಯವರಾಗಿದೆ. ಹೀಗಾಗಿ ಪ್ರತಿ ವರ್ಷ ಜನವರಿ 23 ರಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಜಯಂತಿಯ ಜೊತೆ ಜೊತೆಗೆ ಪರಾಕ್ರಮ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನ ವಿಶೇಷತೆ ಹಾಗೂ ಮಹತ್ವದ ಬಗ್ಗೆ ತಿಳಿಯೋಣ.

ಇಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನ : ಈ ದಿನ ಪರಾಕ್ರಮ ದಿನವನ್ನಾಗಿ ಆಚರಿಸುವುದರ ಹಿಂದಿನ ಮಹತ್ವವೇನು?
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 23, 2024 | 10:49 AM

ನನಗೆ ನಿಮ್ಮ ರಕ್ತವನ್ನು ನೀಡಿ, ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ” ಎನ್ನುವ ನೇತಾಜಿಯವರ ಈ ಹೇಳಿಕೆಯೂ ಯುವಕರ ಮೈಯ ರಕ್ತವು ಕುದಿಯುವಂತೆ ಮಾಡುತ್ತದೆ. ನೇತಾಜಿಯವರ ಈ ಹೇಳಿಕೆಯೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ ಯುವಕರು ಭಾಗಿಯಾಗಲು ಪ್ರೇರಣೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಇವತ್ತಿಗೂ ಕೂಡ ಯುವಕರು ಸುಭಾಸ್ ಚಂದ್ರ ಬೋಸ್ ಅವರು ಮಾದರಿಯಗಿ ತೆಗೆದುಕೊಳ್ಳುತ್ತಾರೆ. ಈ ಎಲ್ಲವನ್ನು ಗಮನಿಸಿದಾಗ ನೇತಾಜಿಯವರ ಸ್ವಾತಂತ್ಯ ಹೋರಾಟದ ಹಾದಿಯೂ ಯುವಕರಿಗೆ ಎಷ್ಟು ಪ್ರಭಾವ ಬೀರಿತ್ತು ಎನ್ನುವುದನ್ನು ಅರ್ಥ ಮಾಡಿಕೊಳ್ಳಬಹುದು.

ಸುಭಾಸ್ ಚಂದ್ರ ಬೋಸ್ ಅವರ ಜನ್ಮ ದಿನದಂದು ಪರಾಕ್ರಮ ದಿನವನ್ನಾಗಿ ಆಚರಿಸುವುದರ ಹಿಂದಿನ ಮಹತ್ವ ಸುಭಾಷ್ ಚಂದ್ರ ಬೋಸ್ ಅವರು ಒಡಿಶಾದ ಕಟಕ್ ನಲ್ಲಿ 1897 ರ ಜನವರಿ 23 ರಂದು ಜನಿಸಿದರು. ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಹೆಜ್ಜೆ ಗುರುತನ್ನು ಸ್ಮರಿಸುತ್ತಾ, ಪ್ರತಿ ವರ್ಷ ಜನವರಿ 23 ರಂದು ಇವರ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಒಬ್ಬರಾಗಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ವಿಶೇಷ ಸ್ಮರಣಾರ್ಥ ದಿನದಂದು ಗೌರವಿಸಲಾಗುತ್ತಿದ್ದು, ಅದೇ ದಿನವನ್ನು ಪರಾಕ್ರಮ ದಿನವನ್ನಾಗಿ ಆಚರಿಸಲಾಗುತ್ತಿದೆ. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಬೋಸ್ ನೀಡಿದ ಕೊಡುಗೆಗಳನ್ನು ಗೌರವಿಸಲು 2021 ರಲ್ಲಿ ಅವರ ಹುಟ್ಟುಹಬ್ಬದ ದಿನವೇ ಪರಾಕ್ರಮ ದಿನ ಆಚರಿಸಲು ನಿರ್ಧಾರವನ್ನು ತೆಗೆದುಕೊಂಡಿದೆ. ಪರಾಕ್ರಮ ದಿನ ಆಚರಣೆಯ ಮೂಲ ಉದ್ದೇಶವು ಸ್ವಾತಂತ್ರ ಹೋರಾಟಕ್ಕಾಗಿ ಮಾಡಿದ ತ್ಯಾಗವನ್ನು ಮುಂದಿನ ಪೀಳಿಗೆಯವರಿಗೆ ತಲುಪಿಸುವುದಾಗಿದೆ.

ಇದನ್ನೂ ಓದಿ: ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ 77ನೇ ಪುಣ್ಯತಿಥಿ: ಸ್ಮರಿಸಿದ ನಾಯಕರು

ನೇತಾಜಿಯವರ ಹೋರಾಟದ ಹಾದಿಯೇ ಭಿನ್ನ

ಇಂಗ್ಲೆಂಡ್ ನಿಂದ ಐಸಿಎಸ್ ಪದವಿಯನ್ನು ಪಡೆದ ಬೋಸ್ 1921 ರಲ್ಲಿ ಭಾರತಕ್ಕೆ ಮರಳಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾದರು. ಆದರೆ ಈ ಸುಭಾಸ್ ಚಂದ್ರ ಬೋಸ್ ಅವರಿಗೆ ಮಂದಗಾಮಿ ಚಿಂತನೆಯಲ್ಲಿ ನಂಬಿಕೆ ಇರದಿದ್ದರಿಂದ ಇವರ ಹೋರಾಟ ಹಾದಿಯೂ ತೀಕ್ಷತೆಯಿಂದ ಕೂಡಿತ್ತು. ಆ ಕಾರಣಕ್ಕಾಗಿಯೇ ಇಂಡಿಯನ್ ನ್ಯಾಶನಲ್ ಆರ್ಮಿ ಸ್ಥಾಪಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ಮತ್ತಷ್ಟು ಬೆಂಬಲ ನೀಡಿದರು. ಬ್ರಿಟಿಷರನ್ನು ಭಾರತದಿಂದ ಓಡಿಸಲು ಮಿಲಿಟರಿ ಕಾರ್ಯಾಚರಣೆಯಿಂದ ಮಾತ್ರ ಸಾಧ್ಯ ಎಂದು ನಂಬಿದ್ದ ಅವರು ತಮ್ಮ ಹೋರಾಟದ ಹಾದಿಯಲ್ಲಿ ಒಂದಷ್ಟು ಬದಲಾವಣೆಯ ತಂದರು. ಭಾರತವು ಸ್ವಾತಂತ್ರ್ಯರಾಗಲು ತನ್ನದೇ ಆದ ರೀತಿಯಲ್ಲಿ ಕೊಡುಗೆ ಕೊತ್ತ ಅಪ್ರತಿಮ ದೇಶ ಭಕ್ತರಾಗಿದ್ದ ಸುಭಾಸ್ ಬೋಸ್ ಜಪಾನಿನ ವಿಮಾನ ಅಪಘಾತಕ್ಕೀಡಾದ ನಂತರದಲ್ಲಿ ಆಗಸ್ಟ್ 18, 1945 ರಂದು ನಿಧನರಾದರು ಎನ್ನಲಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಸುಭಾಸ್ ಚಂದ್ರರವರ ಹೋರಾಟ ಹಾದಿಯೂ ಪ್ರೇರಣೆಯಾಗಿದ್ದು, ಹೀಗಾಗಿ ಯುವಕರು ಇವರ ಹೇಳಿಕೆಗಳನ್ನು ಮುಂದಿಟ್ಟು ಹೋರಾಟವನ್ನು ನಡೆಸುತ್ತಾ ಬರುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ