ಕಿರುಕುಳ ನೀಡಲೆಂದೇ ಇತ್ತು ಒಂದು ಕೊಠಡಿ, ಹರಿದ್ವಾರ ಪ್ರವಾಸದಲ್ಲೂ ಕಿರುಕುಳ: ಸ್ವಾಮಿ ಚೈತನ್ಯಾನಂದನ ವಿಚಾರಗಳು ಬಹಿರಂಗ

ದೆಹಲಿಯ ಶ್ರೀ ಶಾರದಾ ಇನ್​​ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್​​ಮೆಂಟ್ ನಿರ್ದೇಶಕ ​​ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿದ್ಯಾರ್ಥಿನಿಯರಿಗೆ ನೀಡಿರುವ ಕಿರುಕುಳ ಪ್ರಕರಣ ಬೆಳಕಿಗೆ ಬಂದಿದೆ. ಅವರನ್ನು ಪತ್ತೆ ಹಚ್ಚಲು ಪೊಲೀಸರು ಬೃಹತ್ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯ ಸಮಯದಲ್ಲಿ ಪ್ರಕರಣದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ.

ಕಿರುಕುಳ ನೀಡಲೆಂದೇ ಇತ್ತು ಒಂದು ಕೊಠಡಿ, ಹರಿದ್ವಾರ ಪ್ರವಾಸದಲ್ಲೂ ಕಿರುಕುಳ: ಸ್ವಾಮಿ ಚೈತನ್ಯಾನಂದನ ವಿಚಾರಗಳು ಬಹಿರಂಗ
ಸ್ವಾಮಿ ಚೈತನ್ಯಾನಂದ

Updated on: Sep 25, 2025 | 12:39 PM

ನವದೆಹಲಿ, ಸೆಪ್ಟೆಂಬರ್ 25: ದೆಹಲಿಯ ಶ್ರೀ ಶಾರದಾ ಇನ್​​ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್​​ಮೆಂಟ್ ನಿರ್ದೇಶಕ ​​ಚೈತನ್ಯಾನಂದ ಸರಸ್ವತಿ(Chaitanyananda Saraswati) ಸ್ವಾಮೀಜಿ ವಿದ್ಯಾರ್ಥಿನಿಯರಿಗೆ ನೀಡಿರುವ ಕಿರುಕುಳ ಪ್ರಕರಣ ಬೆಳಕಿಗೆ ಬಂದಿದೆ. ಅವರನ್ನು ಪತ್ತೆ ಹಚ್ಚಲು ಪೊಲೀಸರು ಬೃಹತ್ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯ ಸಮಯದಲ್ಲಿ ಪ್ರಕರಣದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ದಕ್ಷಿಣ ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಖಾಸಗಿ ನಿರ್ವಹಣಾ ಸಂಸ್ಥೆಯ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಆರೋಪಿ ಸ್ವಾಮಿ ಈ ಹಿಂದೆ ಪಾರ್ಥಸಾರಥಿ ಎಂದು ಕರೆಯಲ್ಪಡುತ್ತಿದ್ದರು , ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್-ರಿಸರ್ಚ್‌ನ ನಿರ್ದೇಶಕರಾಗಿದ್ದರು.

ಚಿತ್ರಹಿಂಸೆ ನೀಡಲು ಇತ್ತೊಂದು ಕೊಠಡಿ
ಇಡಬ್ಲ್ಯೂಎಸ್ ವಿದ್ಯಾರ್ಥಿವೇತನದಲ್ಲಿ ಓದುತ್ತಿರುವ ದ್ಯಾರ್ಥಿನಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಸ್ಥೆಯ ಡೀನ್ ಮತ್ತು ಇಬ್ಬರು ಮಹಿಳಾ ಸಿಬ್ಬಂದಿಯೊಂದಿಗೆ ಶಾಮೀಲಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅಧಿಕಾರಿಗಳ ಪ್ರಕಾರ, ಚೈತನ್ಯಾನಂದ ತನ್ನ ನೆಲಮಹಡಿಯ ಕಚೇರಿಯನ್ನು ಲೈಂಗಿಕ ಕಿರುಕುಳದ ತಾಣವನ್ನಾಗಿ ಪರಿವರ್ತಿಸಿದ್ದ. ಆರೋಪಿಗಳು ಸಂತ್ರಸ್ತರು ಮಾತನಾಡದಂತೆ ಅಥವಾ ಸಂಸ್ಥೆಯಿಂದ ಹೊರಹೋಗದಂತೆ ತಡೆಯಲು ಅವರ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಹರಿದ್ವಾರದಲ್ಲಿ ಕಿರುಕುಳ
ಹೊಸ ಐಷಾರಾಮಿ ಕಾರು ಖರೀದಿಸಿದ ನಂತರ, ಆರೋಪಿ ವಿಶೇಷ ಪೂಜೆಯ ನೆಪದಲ್ಲಿ ಹಲವಾರು ವಿದ್ಯಾರ್ಥಿನಿಯರನ್ನು ಹರಿದ್ವಾರಕ್ಕೆ ಕರೆದೊಯ್ದಿದ್ದರು ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ. ಹಿಂತಿರುಗುವಾಗ ಕಾರಿನಲ್ಲಿ ಚೈತನ್ಯಾನಂದರ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ವಿದೇಶ ಪ್ರವಾಸದ ಆಮಿಷ ತೋರಿಸಿ ವಿದ್ಯಾರ್ಥಿನಿಯರ ಮಂಚಕ್ಕೆ ಕರೆಯುತ್ತಿದ್ದ ಸ್ವಾಮೀಜಿ! ದೆಹಲಿ ಚೈತನ್ಯಾನಂದ ಕಾಮಲೀಲೆ ಬಯಲು

ನನ್ನನ್ನು ಮಗು ಎಂದು ಕರೆಯುತ್ತಿದ್ದರು
ಚೈತನ್ಯಾನಂದ ವಾಟ್ಸಾಪ್‌ನಲ್ಲಿ ಸಂದೇಶಗಳನ್ನು ಕಳುಹಿಸುವ ಮೂಲಕ ಕಿರುಕುಳ ನೀಡುತ್ತಿದ್ದರು ಎಂದು 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಆರೋಪಿಗಳು ತಮ್ಮನ್ನು ಬೇಬಿ ಎಂದು ಕರೆಯುತ್ತಿದ್ದರು ಎಂದು ವಿದ್ಯಾರ್ಥಿನಿಯೊಬ್ಬಳು ಆರೋಪಿಸಿದ್ದಾರೆ. ಬೇಬಿ ನಾನು ನಿನ್ನನ್ನು ಪ್ರೀತಿಸುತ್ತೇನೆ, ನೀನು ತುಂಬಾ ಸುಂದರವಾಗಿದ್ದೀಯ ಎಂದು ಹೇಳುತ್ತಿದ್ದರು ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.

ಭದ್ರತೆಯ ನೆಪದಲ್ಲಿ ಮಹಿಳಾ ಹಾಸ್ಟೆಲ್‌ನಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಮತ್ತು ವಿದೇಶ ಪ್ರವಾಸಗಳಿಗೆ ಚೈತನ್ಯಾನಂದ ಅವರೊಂದಿಗೆ ಹೋಗುವಂತೆ ಒತ್ತಡ ಹೇರಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us