ಅಕ್ಟೋಬರ್ 17 ರಂದು ಹರ್ಯಾಣದಲ್ಲಿ ಹೊಸ ಬಿಜೆಪಿ ಸರ್ಕಾರ ಪ್ರಮಾಣ ವಚನ ಸ್ವೀಕಾರ; ಭಾಗಿಯಾಗಲಿದ್ದಾರೆ ಮೋದಿ

ಪ್ರಧಾನಿ ನರೇಂದ್ರ ಮೋದಿ, ಹಿರಿಯ ಬಿಜೆಪಿ ನಾಯಕರು ಮತ್ತು ಇತರ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಂಚಕುಲ ಸೆಕ್ಟರ್ 5ರ ದಸರಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಅಕ್ಟೋಬರ್ 17 ರಂದು ಹರ್ಯಾಣದಲ್ಲಿ ಹೊಸ ಬಿಜೆಪಿ ಸರ್ಕಾರ ಪ್ರಮಾಣ ವಚನ ಸ್ವೀಕಾರ; ಭಾಗಿಯಾಗಲಿದ್ದಾರೆ ಮೋದಿ
ನಯಾಬ್ ಸಿಂಗ್ ಸೈನಿ- ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Oct 12, 2024 | 1:58 PM

ದೆಹಲಿ ಅಕ್ಟೋಬರ್ 12: ಅಕ್ಟೋಬರ್ 17 ರಂದು ಪಂಚಕುಲದಲ್ಲಿ ಹರ್ಯಾಣದ (Haryana) ಹೊಸ ಬಿಜೆಪಿ (BJP) ಸರ್ಕಾರದ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ, ಹಿರಿಯ ಬಿಜೆಪಿ ನಾಯಕರು ಮತ್ತು ಇತರ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಂಚಕುಲ ಸೆಕ್ಟರ್ 5ರ ದಸರಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಬಿಜೆಪಿ ಇನ್ನೂ ತಮ್ಮ ಮುಖ್ಯಮಂತ್ರಿ ಆಯ್ಕೆಯನ್ನು ಘೋಷಿಸಿಲ್ಲ, ಆದರೆ ವರದಿಗಳು ಪಕ್ಷವು ನಯಾಬ್ ಸಿಂಗ್ ಸೈನಿ ಅವರನ್ನೇ ಸಿಎಂ ಮಾಡಲಿದೆ ಎಂದು ಹೇಳುತ್ತದೆ. ಸೈನಿ ಅವರು ಮಾರ್ಚ್‌ನಲ್ಲಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಹರ್ಯಾಣ ಮುಖ್ಯಮಂತ್ರಿಯಾಗಿ ಬದಲಾಯಿಸಿದ್ದರು ಮತ್ತು ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಬಿಜೆಪಿ ಈ ಚುನಾವಣೆಯಲ್ಲಿ 48 ಸ್ಥಾನಗಳನ್ನು ಗಳಿಸಿದ್ದು ಇದು ಕಾಂಗ್ರೆಸ್‌ಗಿಂತ 11 ಹೆಚ್ಚು. ಜನತಾ ಜನನಾಯಕ್ ಪಕ್ಷ (ಜೆಜೆಪಿ) ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಹೀನಾಯವಾಗಿ ಸೋತಿತು ಮತ್ತು ಐಎನ್‌ಎಲ್‌ಡಿ ಕೇವಲ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ 10 ವರ್ಷಗಳ ಆಡಳಿತ-ವಿರೋಧಿ ಅಲೆ ಮತ್ತು ಎಕ್ಸಿಟ್ ಪೋಲ್‌ ಭವಿಷ್ಯವನ್ನು ತಲೆಕೆಳಗಾಗಿಸಿವೆ.

ಬಿಜೆಪಿಯ ಹರ್ಯಾಣ ಯೋಜನೆ

ಬಿಜೆಪಿಯ ಆಂತರಿಕ ವಲಯಗಳ ಪ್ರಕಾರ ರಾಜ್ಯದಲ್ಲಿನ ಆಡಳಿತ ವಿರೋಧಿಯನ್ನು ಎದುರಿಸಲು 14 ಹಾಲಿ ಶಾಸಕರನ್ನು ಕೈಬಿಡುವ ನಿರ್ಧಾರವೂ ಸೇರಿದೆ. ಪಕ್ಷವು 27 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಅವರಲ್ಲಿ 15 ಮಂದಿ ಗೆಲುವು ಸಾಧಿಸಿದ್ದಾರೆ. ಅದರ ಸೀಟು ಹಂಚಿಕೆ ಮತ್ತು ಮತ ಹಂಚಿಕೆ ಎರಡೂ, ಕ್ರಮವಾಗಿ 53.3% ಮತ್ತು 39.9% ರಾಜ್ಯದ ಯಾವುದೇ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಇದುವರೆಗೆ ಅತ್ಯಧಿಕವಾಗಿದೆ.

ಇದನ್ನೂ ಓದಿ: ಯುಪಿಯ ಬಿಸ್ರಖ್ ಗ್ರಾಮದಲ್ಲಿ ದಸರಾ ಹಬ್ಬಕ್ಕೆ ಇಲ್ಲ ಸಂತಸ; ಇಲ್ಲಿ ರಾವಣನ ಸಾವಿಗೆ ಸಂತಾಪ

ಪಕ್ಷವು ಗುಂಪುಗಾರಿಕೆ ಮತ್ತು ಅಸಮಾಧಾನಗೊಂಡ ಕಾರ್ಯಕರ್ತರೊಂದಿಗೆ ಸೆಣಸುತ್ತಿರುವ ಕಾರಣ ಲೋಕಸಭೆಯ ತೀರ್ಪು ಎಚ್ಚರಿಕೆಯ ಗಂಟೆಗಳನ್ನು ಬಾರಿಸಿದೆ ಎಂದು ಬಿಜೆಪಿ ಮೂಲಗಳು ಹೇಳುತ್ತವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 10 ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಗೆದ್ದು 44 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ನಂತರ, ಸರ್ಕಾರವು ನೆಲದ ವಾಸ್ತವತೆಗೆ ಎಚ್ಚೆತ್ತುಕೊಂಡು ಸರಿಪಡಿಸುವ ಕ್ರಮಗಳನ್ನು ಕೈಗೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ