AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಅತಿವೇಗದ ಕಾರು ಡಿಕ್ಕಿಯಾಗಿ 23 ವರ್ಷದ ವ್ಯಕ್ತಿ ಸಾವು; ಅಪಘಾತಕ್ಕೂ ಮೊದಲ ವಿಡಿಯೋ ವೈರಲ್

ದೆಹಲಿಯ ದ್ವಾರಕಾದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು 23 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಈ ಅಪಘಾತಕ್ಕೂ ಮುನ್ನ ಅತಿವೇಗದಲ್ಲಿ ಚಲಿಸುತ್ತಿದ್ದ ಎಸ್‌ಯುವಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡ್ರೈವಿಂಗ್ ಲೈಸೆನ್ಸ್ ಇಲ್ಲದ ಅಪ್ರಾಪ್ತ ವಯಸ್ಕನಾದ ಎಸ್‌ಯುವಿ ಚಾಲಕನನ್ನು ಸ್ಥಳದಲ್ಲೇ ಬಂಧಿಸಿ ಬಾಲ ನ್ಯಾಯ ಮಂಡಳಿಯ (ಜೆಜೆಬಿ) ಮುಂದೆ ಹಾಜರುಪಡಿಸಲಾಗಿದೆ. ಆರಂಭದಲ್ಲಿ ಆತನನ್ನು ವೀಕ್ಷಣಾ ಗೃಹಕ್ಕೆ ಕಳುಹಿಸಲಾಯಿತು. ನಂತರ ಫೆಬ್ರವರಿ 10ರಂದು 10ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು ಮಧ್ಯಂತರ ಜಾಮೀನು ನೀಡಲಾಯಿತು.

ದೆಹಲಿಯಲ್ಲಿ ಅತಿವೇಗದ ಕಾರು ಡಿಕ್ಕಿಯಾಗಿ 23 ವರ್ಷದ ವ್ಯಕ್ತಿ ಸಾವು; ಅಪಘಾತಕ್ಕೂ ಮೊದಲ ವಿಡಿಯೋ ವೈರಲ್
Suv Accident
ಸುಷ್ಮಾ ಚಕ್ರೆ
|

Updated on: Feb 18, 2026 | 8:32 PM

Share

ನವದೆಹಲಿ, ಫೆಬ್ರವರಿ 18: ಇದೀಗ ವೈರಲ್ (Viral Video) ಆಗಿರುವ ಹೊಸ ಸಿಸಿಟಿವಿಯಲ್ಲಿ ದೆಹಲಿಯ ದ್ವಾರಕಾದಲ್ಲಿ 23 ವರ್ಷದ ಸಾಹಿಲ್ ಧನೇಶ್ರಾ ಸಾವನ್ನಪ್ಪಿದ ರಸ್ತೆ ಅಪಘಾತಕ್ಕೆ ಕಾರಣವಾದ ಕ್ಷಣಗಳನ್ನು ತೋರಿಸುವ ಹೊಸ ಸಿಸಿಟಿವಿ ದೃಶ್ಯಗಳು ಕಾಣಿಸಿಕೊಂಡಿವೆ. ಕಾರು ಡಿಕ್ಕಿ ಹೊಡೆಯುವುದಕ್ಕೂ ಸ್ವಲ್ಪ ಸಮಯದ ಮೊದಲು ಅಪ್ರಾಪ್ತ ವಯಸ್ಕ ಚಲಾಯಿಸುತ್ತಿದ್ದ ಸ್ಕಾರ್ಪಿಯೋ ಎಸ್‌ಯುವಿ ಅತಿವೇಗದಲ್ಲಿ ಚಲಿಸುತ್ತಿತ್ತು ಎಂಬುದನ್ನು ಈ ವಿಡಿಯೋದಲ್ಲಿ ನೋಡಬಹುದು.

ಫೆಬ್ರವರಿ 3ರಂದು ದ್ವಾರಕಾದ ಲಾಲ್ ಬಹದ್ದೂರ್ ಶಾಸ್ತ್ರಿ ಕಾಲೇಜಿನ ಬಳಿ ದಾಖಲಾಗಿರುವ ವಿಡಿಯೋ ಅಪಘಾತ ಸಂಭವಿಸುವ ಕೆಲವು ಕ್ಷಣಗಳ ಮೊದಲು ಎಸ್‌ಯುವಿ ಅತಿವೇಗದಲ್ಲಿ ಚಲಿಸುತ್ತಿರುವುದನ್ನು ತೋರಿಸುತ್ತದೆ. ಬಸ್ ಸಮೀಪಿಸುತ್ತಿದ್ದಂತೆ ಎಸ್‌ಯುವಿ ರಸ್ತೆಗೆ ಅಡ್ಡಲಾಗಿ ಚಲಿಸುತ್ತಿರುವುದು ಕಂಡುಬಂದಿತು. ನಂತರ ಅದು ಸಾಹಿಲ್ ಎಂಬಾತನ ಬೈಕ್​ಗೆ ಡಿಕ್ಕಿ ಹೊಡೆದು, ಭೀಕರ ಡಿಕ್ಕಿ ಹೊಡೆದ ಪರಿಣಾಮದಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ.

ಇದನ್ನೂ ಓದಿ: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಡೀ ಕುಟುಂಬವೇ ದುರಂತ ಅಂತ್ಯ

ಡ್ರೈವಿಂಗ್ ಲೈಸೆನ್ಸ್ ಇಲ್ಲದ ಅಪ್ರಾಪ್ತ ವಯಸ್ಕ ಆರೋಪಿ ಚಾಲಕನನ್ನು ಸ್ಥಳದಲ್ಲೇ ಬಂಧಿಸಿ ಬಾಲ ನ್ಯಾಯ ಮಂಡಳಿಯ (ಜೆಜೆಬಿ) ಮುಂದೆ ಹಾಜರುಪಡಿಸಲಾಯಿತು. ಎಸ್‌ಯುವಿ ಚಲಾಯಿಸುತ್ತಿದ್ದ ಅಕ್ಷತ್ರ ಸಿಂಗ್ 17 ವರ್ಷ ವಯಸ್ಸಿನವನಾಗಿದ್ದು, ಆತನಿಗೆ ಡ್ರೈವಿಂಗ್ ಲೈಸೆನ್ಸ್ ಇರಲಿಲ್ಲ. ಆತನನ್ನು ವೀಕ್ಷಣಾ ಗೃಹಕ್ಕೆ ಕಳುಹಿಸಲಾಯಿತು. ಫೆಬ್ರವರಿ 10ರಂದು ಜೆಜೆಬಿ ಆತನ 10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಪರಿಗಣಿಸಿ ಮಧ್ಯಂತರ ಜಾಮೀನು ನೀಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್