Himanta Biswa Sarma: ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಇಂದು ಪ್ರಮಾಣ ವಚನ

Assam: ಗುವಾಹಟಿಯ ಶ್ರೀಮಂತ ಶಂಕರದೇವ ಇಂಟರ್ ನ್ಯಾಷನಲ್ ಆಡಿಟೋರಿಯಂನಲ್ಲಿ ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು ಗವರ್ನರ್ ಜಗದೀಶ್ ಮುಖಿ ಪ್ರಮಾಣ ವಚನ ಬೋಧಿಸಲಿದ್ದಾರೆ.

Himanta Biswa Sarma: ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಇಂದು ಪ್ರಮಾಣ ವಚನ
ಹಿಮಂತ ಬಿಸ್ವ ಶರ್ಮಾ
Follow us
|

Updated on:May 10, 2021 | 10:44 AM

ಗುವಾಹಟಿ: ಅಸ್ಸಾಂನ ಬಿಜೆಪಿ ನಾಯಕ ಹಿಮಂತ ಬಿಸ್ವ ಶರ್ಮಾ ಅವರು ಇಂದು ಬೆಳಗ್ಗೆ 11.30ಕ್ಕೆ ಅಸ್ಸಾಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿದ್ದಾರೆ ಶರ್ಮಾ. ಭಾನುವಾರ ಶರ್ಮಾ ಅವರನ್ನು ಅಸ್ಸಾಂನ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧ ಆಯ್ಕೆ ಮಾಡಲಾಗಿತ್ತು. ಗುವಾಹಟಿಯ ಶ್ರೀಮಂತ ಶಂಕರದೇವ ಇಂಟರ್ ನ್ಯಾಷನಲ್ ಆಡಿಟೋರಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು ಗವರ್ನರ್ ಜಗದೀಶ್ ಮುಖಿ ಪ್ರಮಾಣ ವಚನ ಬೋಧಿಸಲಿದ್ದಾರೆ. ನನ್ನ ಹೃದಯದಲ್ಲಿ ಅಸ್ಸಾಂನ ಸುಗಂಧ ಮತ್ತು ನನ್ನ ನರಗಳಲ್ಲಿ ಜನರ ಬಗೆಗೆ ಅದ್ಭುತ ಪ್ರೀತಿಯೊಂದಿಗೆ ನಿಮ್ಮೆಲ್ಲರಿಗೂ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ನನ್ನ ಮೇಲಿನ ನಿಮ್ಮ ಧರ್ಮನಿಷ್ಠೆ ಇಲ್ಲದಿದ್ದರೆ ನಾನು ನಾನೇ ಆಗುತ್ತಿರಲಿಲ್ಲ. ಈ ದಿನ, ನಿಮ್ಮಲ್ಲಿ ಪ್ರತಿಯೊಬ್ಬರೊಂದಿಗೂ ಹೆಚ್ಚಿನ ಉತ್ಸಾಹದಿಂದ ಕೆಲಸ ಮಾಡಲು ನಾನು ಪ್ರತಿಜ್ಞೆ ಮಾಡುತ್ತೇನೆ ಎಂದು ಶರ್ಮಾ ಭಾನುವಾರ ಸಂಜೆ ಟ್ವೀಟ್ ಮಾಡಿದ್ದಾರೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಅಸ್ಸಾಂ ಮುಖ್ಯಮಂತ್ರಿ ಸ್ಥಾನಕ್ಕೆ ಶರ್ಮಾ ಅವರನ್ನು ಆಯ್ಕೆ ಮಾಡಿರುವುದಾಗಿ ಘೋಷಿಸಿದ್ದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ ಶರ್ಮಾ, “ನನ್ನ ಮೇಲಿನ ನಿಮ್ಮ ನಂಬಿಕೆಗಾಗಿ ಗೌರವಾನ್ವಿತ ಪ್ರಧಾನಿ ಮೋದಿ ಅವರ ಅಗಾಧ ಆಶೀರ್ವಾದ ಪಡೆದಿದ್ದೇನೆ ಎಂದು ಇದು ನನ್ನ ಜೀವನದ ಅತಿದೊಡ್ಡ ದಿನ, ಮತ್ತು ನಾನು ನಿಮ್ಮ ಉದಾರವಾದ ಪ್ರೀತಿಗೆ ಆಭಾರಿ. ಅಸ್ಸಾಂ ಮತ್ತು ಈಶಾನ್ಯ ರಾಜ್ಯವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುವ ನಿಮ್ಮ ಕನಸನ್ನು ನನಸಾಗಿಸುವುದಾಗಿ  ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ.

2015 ರಲ್ಲಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಕಾಂಗ್ರೆಸ್ ಮುಖಂಡ, ಸರ್ಬಾನಂದ ಸೋನೊವಾಲ್ ಅವರ ನಂತರ ಅಸ್ಸಾಂನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೇರಿದ ಎರಡನೇ ಬಿಜೆಪಿ ನಾಯಕರಾಗಿದ್ದರೆ. ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) 2016 ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ನಂತರ ಇಲ್ಲಿ ತನ್ನ ಮೊದಲ ಸರ್ಕಾರವನ್ನು ರಚಿಸಿದ್ದು ಆಗಿನ ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವರಾಗಿದ್ದ ಸೋನೊವಾಲ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತ್ತು.

ಈಶಾನ್ಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಇಡಿಎ) ಸಂಚಾಲಕರಾಗಿರುವ ವ ಶರ್ಮಾ ಅವರು ಇತ್ತೀಚೆಗೆ ಅಸ್ಸಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಮಾರ್ಚ್ 1, ಏಪ್ರಿಲ್ 1 ರಂದು ಮತ್ತು ಏಪ್ರಿಲ್ 6. ಬಿಜೆಪಿ ಸ್ಪರ್ಧಿಸಿದ 93 ಸ್ಥಾನಗಳಲ್ಲಿ 60 ಸ್ಥಾನಗಳನ್ನು ಗೆದ್ದಿದೆ. 126 ಸೀಟುಗಳಿರುವ ವಿಧಾನಸಭೆಯಲ್ಲಿ ಮೈತ್ರಿ ಪಕ್ಷಗೊಳೊಂದಿಗೆ ಬಿಜೆಪಿ 75 ಸೀಟುಗಳನ್ನು ಗಳಿಸಿ ಎರಡನೇ ಬಾರಿ ಅಧಿಕಾರಕ್ಕೇರಿದೆ.  ಬಿಜೆಪಿ ಮೈತ್ರಿ ಪಕ್ಷಗಳಾದ ಅಸೋಮ್ ಗಣ ಪರಿಷತ್ (ಎಜಿಪಿ) ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಕ್ರಮವಾಗಿ 9 ಮತ್ತು 6 ಸ್ಥಾನಗಳನ್ನು ಗೆದ್ದಿವೆ .

ಸೋನೊವಾಲ್ ನೇತೃತ್ವದ ಸರ್ಕಾರದಲ್ಲಿ, ಶರ್ಮಾ ಆರೋಗ್ಯ ಮತ್ತು ಹಣಕಾಸು ಸೇರಿದಂತೆ ಹಲವಾರು ಪ್ರಮುಖ ಖಾತೆಗಳನ್ನು ಹೊಂದಿದ್ದರು.

ಇದನ್ನೂ  ಓದಿ:  Assam Election 2021| ಅಸ್ಸಾಂ ಜನರಿಗೆ ಬೇಕಿರುವುದು ಶಾಂತಿ.. ಹಾಗಾಗಿ ಅವರ ಆದ್ಯತೆ ಎನ್​ಡಿಎ ಒಕ್ಕೂಟಕ್ಕೆ: ಪ್ರಧಾನಿ ಮೋದಿ

Published On - 10:40 am, Mon, 10 May 21