Jharkhand New CM: ಜಾರ್ಖಂಡ್‌ನ 12ನೇ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ
Champai Soren: ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೇಲೆ ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪವಿದ್ದು, ಈ ಕಾರಣಕ್ಕೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ರಾಂಚಿ, ಫೆ.2: ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ (Champai Soren) ಅವರು ಇಂದು (ಫೆ.2) ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಂಚಿಯ ರಾಜಭವನದ ದರ್ಬಾರ್ ಹಾಲ್ ಈ ಕಾರ್ಯಕ್ರಮ ನಡೆದಿದ್ದು, ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೇಲೆ ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪವಿದ್ದು, ಅವರು ಈಗಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕಾರಣದಿಂದ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇನ್ನು ಮುಖ್ಯಮಂತ್ರಿ ಚಂಪೈ ಸೊರೆನ್ ಜತೆಗೆ ಕಾಂಗ್ರೆಸ್ ನಾಯಕ ಅಲಂಗೀರ್ ಆಲಂ ಮತ್ತು ಆರ್‌ಜೆಡಿಯ ಸತ್ಯಾನಂದ ಭೋಕ್ತಾ ಕೂಡ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಚಂಪೈ ಸೊರೆನ್ ಅವರು ಪ್ರಮಾಣ ವಚನಕ್ಕೂ ಮುನ್ನ ಜ.31ರಂದು ರಾಜ್ಯಪಾಲರನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಎಂದು ಪತ್ರ ಬರೆದಿದ್ದರು. ನಂತರ ರಾಜ್ಯಪಾಲರು ಮಾಧ್ಯಹ್ನ 3.00 ಗಂಟೆಗೆ ಭೇಟಿ ಮಾಡುವಂತೆ ಹೇಳಿದರು. ಒಟ್ಟು 45 ಶಾಸಕರ ಜತೆಗೆ ರಾಜ್ಯಪಾಲರನ್ನು ಭೇಟಿ ಮಾಡಿ. ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಕೇಳಿದ್ದರೆ. ಅದರಂತೆ ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ.
#WATCH | JMM vice president Champai Soren takes oath as the Chief Minister of Jharkhand, at the Raj Bhavan in Ranchi.
This comes two days after Hemant Soren’s resignation as the CM and his arrest by the ED. pic.twitter.com/WEECELBegr
— ANI (@ANI) February 2, 2024
ಇನ್ನು ಹೇಮಂತ್ ಸೊರೆನ್ ಅವರ ಮೇಲೆ ಭೂ- ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಬಗ್ಗೆ ಈಗಾಗಲೇ ಇಡಿ ರಾಂಚಿಯಲ್ಲಿರುವಪಿಎಂಎಲ್‌ಎ ನ್ಯಾಯಾಲಯಕ್ಕೆ ಸಾಕ್ಷ್ಯಗಳನ್ನು ನೀಡಲಾಗಿದೆ. ಹೇಮಂತ್ ಸೊರೆನ್ ಅವರನ್ನು ತನಿಖೆ ನಡೆಸಬೇಕಾಗಿದೆ. ಈ ಕಾರಣಕ್ಕಾಗಿ 10 ದಿನಗಳ ನ್ಯಾಯಂಗ ಬಂಧನದಲ್ಲಿ ಇರಿಸಬೇಕು ಎಂದು ಇಡಿ ಕೋರ್ಟ್ಗೆ ಮನವಿ ಮಾಡಿತ್ತು. ಆದರೆ ಇದಕ್ಕೆ ಒಪ್ಪದ ಕೋರ್ಟ್ ಒಂದು ದಿನದ ಮಟ್ಟಿಗೆ ಅವರನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ. ಈ ಬಗ್ಗೆ ಇಂದು ವಿಚಾರಣೆ ನಡೆಸುವುದಾಗಿ ಕೋರ್ಟ್ ಗುರುವಾರ ಹೇಳಿದೆ.
ಇದನ್ನೂ ಓದಿ: ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್ಗೆ ನ್ಯಾಯಾಂಗ ಬಂಧನ
ಇನ್ನು ಇಡಿ ಸಲ್ಲಿಸಿದ ವರದಿ ಪ್ರಕಾರ ಮುಖ್ಯಮಂತ್ರಿ ಕಚೇರಿಯಲ್ಲಿ ದಲ್ಲಾಳಿಗಳು ಮತ್ತು ಉದ್ಯಮಿಗಳು ಅಕ್ರಮವಾಗಿ ನಕಲಿ ದಾಖಲೆಗಳನ್ನು ಮಾಡುವುದು ಹಾಗೂ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಹಲವು ಸರ್ಕಾರಿ ಭೂಮಿಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂದು ಹೇಳಿತ್ತು. ಇದೀಗ ಈ ವಿಚಾರವಾಗಿ ಇಡಿ ತನಿಖೆ ನಡೆಸುತ್ತಿದೆ. ಇದಕ್ಕಾಗಿ ಹೇಮಂತ್ ಸೊರೆನ್ ಅವರಿಗೆ 10 ದಿನಗಳ ಕಾಲ ನ್ಯಾಯಂಗ ಬಂಧನ ವಿಧಿಸಬೇಕು ಎಂದು ಹೇಳಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:26 pm, Fri, 2 February 24