AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Cities: ಭಾರತದಲ್ಲಿ 8 ಹೊಸ ನಗರಗಳ ನಿರ್ಮಾಣಕ್ಕೆ ಕೇಂದ್ರ ಚಿಂತನೆ, ಈ ನಿರ್ಧಾರ ಏಕೆ?

ದೇಶದಲ್ಲಿ ಅಸ್ತಿತ್ವದಲ್ಲಿರುವ ನಗರಗಳ ಮೇಲಿನ ಜನಸಂಖ್ಯೆಯ ಹೊರೆಯನ್ನು ಕಡಿಮೆ ಮಾಡಲು 8 ಹೊಸ ನಗರಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಚಿಂತನೆ ನಡೆಸಿದೆ

New Cities: ಭಾರತದಲ್ಲಿ 8 ಹೊಸ ನಗರಗಳ ನಿರ್ಮಾಣಕ್ಕೆ ಕೇಂದ್ರ ಚಿಂತನೆ, ಈ ನಿರ್ಧಾರ ಏಕೆ?
ನಗರಗಳುImage Credit source: Timesnow
ನಯನಾ ರಾಜೀವ್
|

Updated on: May 19, 2023 | 10:48 AM

Share

ದೇಶದಲ್ಲಿ ಅಸ್ತಿತ್ವದಲ್ಲಿರುವ ನಗರಗಳ ಮೇಲಿನ ಜನಸಂಖ್ಯೆಯ ಹೊರೆಯನ್ನು ಕಡಿಮೆ ಮಾಡಲು 8 ಹೊಸ ನಗರಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಚಿಂತನೆ ನಡೆಸಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ಈ ಮಾಹಿತಿ ನೀಡಿದ್ದಾರೆ. ಇಂದೋರ್‌ನಲ್ಲಿ ನಡೆದ ಅರ್ಬನ್ 20 (ಯು20) ಸಭೆಯಲ್ಲಿ ಇಲಾಖೆಯ ಜಿ 20 ಘಟಕದ ನಿರ್ದೇಶಕ ಎಂ.ಬಿ.ಸಿಂಗ್ ಪಿಟಿಐಗೆ ತಿಳಿಸಿದರು. 15 ನೇ ಹಣಕಾಸು ಆಯೋಗದ ವರದಿಯು ದೇಶದಲ್ಲಿ ಹೊಸ ನಗರಗಳ ಅಭಿವೃದ್ಧಿಗೆ ಶಿಫಾರಸು ಮಾಡಿದೆ. ಇದರ ನಂತರ, ರಾಜ್ಯಗಳು 26 ಹೊಸ ನಗರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಿದ್ದು, ಈ ಪೈಕಿ ಎಂಟು ಹೊಸ ನಗರಗಳನ್ನು ವಿಂಗಡಿಸಿದ ನಂತರ ಪರಿಗಣಿಸಲಾಗುತ್ತದೆ.

ಯೋಜನೆಯನ್ನು ಪರಿಶೀಲಿಸಿದ ನಂತರ, ಹೊಸ ನಗರಗಳ ಸ್ಥಳಗಳು ಮತ್ತು ಅವುಗಳ ಅಭಿವೃದ್ಧಿಯ ಸಮಯದ ಚೌಕಟ್ಟಿನ ಬಗ್ಗೆ ಸರ್ಕಾರವು ಔಪಚಾರಿಕ ಘೋಷಣೆ ಮಾಡಲಿದೆ ಎಂದು ಸಿಂಗ್ ಹೇಳಿದರು. ನಾವು ದೇಶದಲ್ಲಿ ಹೊಸ ನಗರಗಳನ್ನು ಸ್ಥಾಪಿಸಬೇಕಾಗಿದೆ, ಏಕೆಂದರೆ ಅಸ್ತಿತ್ವದಲ್ಲಿರುವ ನಗರಗಳು ನಾಗರಿಕರ ಅಗತ್ಯಗಳ ಹೊರೆಯನ್ನು ಹೊರಲು ಸಾಧ್ಯವಾಗುತ್ತಿಲ್ಲ.

ಈಗಿರುವ ನಗರಗಳು ನಾಗರಿಕರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ನಾವು ದೇಶದಲ್ಲಿ ಹೊಸ ನಗರಗಳನ್ನು ನಿರ್ಮಿಸಬೇಕಾದ ಅನಿವಾರ್ಯತೆ ಇದೆ. ಅಸ್ತಿತ್ವದಲ್ಲಿರುವ ನಗರಗಳು ಅವ್ಯವಸ್ಥಿತ ರೀತಿಯಲ್ಲಿ ವಿಸ್ತರಣೆಗೊಳ್ಳುತ್ತಿವೆ. ಇದು ಮೂಲಭೂತ ಯೋಜನೆಗಳ ಮೇಲೂ ಪರಿಣಾಮ ಬೀರುತ್ತಿದೆ.

ಹೊಸ ನಗರಗಳ ಸ್ಥಾಪನೆಗೆ ಆರ್ಥಿಕ ಮಾರ್ಗಸೂಚಿಯನ್ನು ಅಂತಿಮಗೊಳಿಸಿಲ್ಲ, ಆದರೆ, ಕೇಂದ್ರ ಸರ್ಕಾರವು ಯೋಜನೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು. ಹೊಸ ನಗರವನ್ನು ಅಭಿವೃದ್ಧಿಪಡಿಸಿದ್ದೇ ಆದಲ್ಲಿ, ಕನಿಷ್ಠ 200 ಕಿ.ಮೀ ವ್ಯಾಪ್ತಿಯಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ ಎಂದರು.

2050 ರ ವೇಳೆಗೆ ವಿಶ್ವದ ಜನಸಂಖ್ಯೆಯು 9.7 ಶತಕೋಟಿಗೆ ಹೆಚ್ಚಾಗುತ್ತದೆ. ಮುಂದಿನ 8 ವರ್ಷಗಳಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ ಎಂದು ವರದಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ