ಶೌಚಾಲಯ ಬಳಕೆಗಾಗಿ ಎರಡು ಗುಂಪುಗಳ ನಡುವೆ ಕಲ್ಲುತೂರಾಟ, ಮೂವರಿಗೆ ಗಾಯ, 9 ಮಂದಿ ಬಂಧನ

ಘಟನೆ ಸಂಬಂಧ ಪೊಲೀಸರಿಗೆ ದೂರು ಕರೆಯೊಂದು ಬಂದಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ

ಶೌಚಾಲಯ ಬಳಕೆಗಾಗಿ ಎರಡು ಗುಂಪುಗಳ ನಡುವೆ ಕಲ್ಲುತೂರಾಟ, ಮೂವರಿಗೆ ಗಾಯ, 9 ಮಂದಿ ಬಂಧನ
ದೆಹಲಿ ಪೊಲೀಸ್ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 03, 2021 | 8:23 PM

ದೆಹಲಿ: ಶೌಚಾಲಯ ಬಳಕೆಗೆ ಸಂಬಂಧಿಸಿದಂತೆ ಗೀತಾ ಕಾಲೊನಿ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ನಡೆದ ಕಲ್ಲುತೂರಾಟದಲ್ಲಿ ಮೂವರಿಗೆ ಗಾಯಗಳಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಸಂಬಂಧ ಪೊಲೀಸರಿಗೆ ದೂರು ಕರೆಯೊಂದು ಬಂದಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಶೌಚಾಲಯಕ್ಕೆ ಸಮೀಪದಲ್ಲಿದ್ದ ಒಂದು ಗುಂಪು, ದೂರದಲ್ಲಿದ್ದ ಮತ್ತೊಂದು ಗುಂಪು ಪರಸ್ಪರ ಕಲ್ಲುತೂರಾಟದಲ್ಲಿ ತೊಡಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡೂ ಗುಂಪುಗಳು ಪರಸ್ಪರ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿಕೊಂಡಿದ್ದವು. ಇದೇ ಕಾರಣಕ್ಕೆ ಎರಡೂ ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕೌಟುಂಬಿಕ ಕಲಹ: ಕೊಲೆ ಆರೋಪಿ ಬಂಧನ ಬೆಂಗಳೂರು: ದೊಣ್ಣೆಯಿಂದ ಹೊಡೆದು ಅಳಿಯನನ್ನು ಭೀಕರ ಹತ್ಯೆ ಮಾಡಿದ್ದ ಆರೋಪಿಯನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನಜೀರ್ ಅಹ್ಮದ್ ಎಂದು ಗುರುತಿಸಲಾಗಿದೆ. ಮೆಹಬೂಬ್ ಎಂಬಾತನನ್ನು ಕೊಲೆ ಮಾಡಿದ ಆರೋಪ ನಜೀರ್ ಅಹ್ಮದ್ ಮೇಲಿದೆ. ನಜೀರ್ ಅಹ್ಮದ್ ಮಗಳನ್ನು ಮೆಹಬೂಬ್ ಮಗನಿಗೆ ಕೊಟ್ಟು ವಿವಾಹ ಮಾಡಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಶಂಕೆಯಿದೆ. ಗ್ಯಾರೇಜಿನಲ್ಲಿ ಕೆಲಸ ಮಾಡುವ ವೇಳೆ ಮೆಹಬೂಬ್​ ಮೇಲೆ ಮಾರಣಾಂತಿಕ ದೊಣ್ಣೆಯಿಂದ ಹಲ್ಲೆ ನಡೆದಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೆಹಬೂಬ್ ಸಾವನ್ನಪ್ಪಿದ್ದರು. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

(New Delhi Stone Pelting Over Use Of Toilet In 3 Injured 9 Detained)

ಇದನ್ನೂ ಓದಿ: Crime News: ತಂದೆ, ತಾಯಿ, ದೊಡ್ಡಪ್ಪನಿಂದಲೇ ಮಗಳ ಹತ್ಯೆ; ಪರ್ವಿನಾ ಕೊಲೆ ರಹಸ್ಯ ಬಯಲು ಮಾಡಿದ ಪೊಲೀಸರು

ಇದನ್ನೂ ಓದಿ: ರಾಯಚೂರಿನಲ್ಲಿ ಒಂದೇ ಕುಟುಂಬದ ಮೂವರ ಕೊಲೆ! ಅಳಿಯನೇ ಹತ್ಯೆ ಮಾಡಿರುವ ಶಂಕೆ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ