ತಮಿಳುನಾಡಿನಲ್ಲಿ ಅಮ್ಮ ಕ್ಯಾಂಟೀನ್​ ಹೆಸರನ್ನು ಅಣ್ಣಾ ಕ್ಯಾಂಟೀನ್​ ಆಗಿ ಬದಲಿಸಲಿದೆ ಡಿಎಂಕೆ

Amma canteens: ಹೊಸ ಸರ್ಕಾರವು ಎಲ್ಲ ಅಮ್ಮಾ ಕ್ಯಾಂಟೀನ್​ಗಳ ಹೆಸರನ್ನು ಬದಲಿಸಿ ಆ ಕ್ಯಾಂಟೀನ್​ಗಳಿಗೆ ಡಿಎಂಕೆ ಸಂಸ್ಥಾಪಕ, ಮಾಜಿ ಮುಖ್ಯಮಂತ್ರಿ ಸಿ.ಎನ್. ಅಣ್ಣಾದುರೈ ಅವರ ಹೆಸರನ್ನಿಡಲಾಗುವುದು.

ತಮಿಳುನಾಡಿನಲ್ಲಿ ಅಮ್ಮ ಕ್ಯಾಂಟೀನ್​ ಹೆಸರನ್ನು ಅಣ್ಣಾ ಕ್ಯಾಂಟೀನ್​ ಆಗಿ ಬದಲಿಸಲಿದೆ ಡಿಎಂಕೆ
ಎಂ.ಕೆ.ಸ್ಟಾಲಿನ್
Follow us
ರಶ್ಮಿ ಕಲ್ಲಕಟ್ಟ
|

Updated on: May 05, 2021 | 3:56 PM

ಚೆನ್ನೈ: ತಮಿಳುನಾಡಿನಲ್ಲಿ ಅಧಿಕಾರಕ್ಕೇರಿರುವ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಆರಂಭಿಸಿದ್ದ ಅಮ್ಮಾ ಕ್ಯಾಂಟೀನ್​ ಹೆಸರನ್ನು ಅಣ್ಣಾ ಕ್ಯಾಂಟೀನ್ ಎಂದು ಬದಲಿಸಲಿದೆ. 2013ರಲ್ಲಿ ಜೆ. ಜಯಲಲಿತಾ ತಮಿಳುನಾಡಿನ ಮುಖ್ಯಮಂತ್ರಿಯಾದಾಗ ಅಮ್ಮಾ ಕ್ಯಾಂಟೀನ್ ಆರಂಭಿಸಿದ್ದರು. ಇದೀಗ ತಮಿಳುನಾಡಿನಲ್ಲಿ 407 ಅಮ್ಮಾ ಕ್ಯಾಂಟೀನ್​ಗಳಿವೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ ನಡೆಸುತ್ತಿರುವ ಅಮ್ಮಾ ಕ್ಯಾಂಟೀನ್ 1 ರೂಪಾಯಿಗೆ ಇಡ್ಲಿ, ಮೂರು ರೂಪಾಯಿಗೆ ಅನ್ನ ಸಾರು, 3 ರೂಪಾಯಿಗೆ ಒಂದು ಪ್ಲೇಟ್ ಚಪಾತಿ,ಸಾಗು ನೀಡುತ್ತದೆ. ಮಂಗಳವಾರ ಮೊಗಪ್ಪಿಯಾರ್​ನಲ್ಲಿ ಡಿಎಂಕೆ ಕಾರ್ಯಕರ್ತರು ಅಮ್ಮಾ ಕ್ಯಾಂಟೀನ್ ಮೇಲೆ ದಾಂಧಲೆ ನಡೆಸಿದ್ದು ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ.  ಹೊಸ ಸರ್ಕಾರವು ಎಲ್ಲ ಅಮ್ಮಾ ಕ್ಯಾಂಟೀನ್​ಗಳ ಹೆಸರನ್ನು ಬದಲಿಸಿ ಆ ಕ್ಯಾಂಟೀನ್​ಗಳಿಗೆ ಡಿಎಂಕೆ ಸಂಸ್ಥಾಪಕ, ಮಾಜಿ ಮುಖ್ಯಮಂತ್ರಿ ಸಿ.ಎನ್. ಅಣ್ಣಾದುರೈ ಅವರ ಹೆಸರನ್ನಿಡಲಾಗುವುದು. ಅಮ್ಮಾ ಕ್ಯಾಂಟೀನ್‌ಗಳು ಬಡವರಿಗೆ ಮತ್ತು ನಿರ್ಗತಿಕರಿಗೆ ಸಾಂತ್ವನ ನೀಡುತ್ತಿದ್ದವು. ಚೆನ್ನೈ ನಿಗಮದಲ್ಲಿ ಎಐಎಡಿಎಂಕೆ ಸರ್ಕಾರದ ಅತ್ಯುತ್ತಮ ಸಾಮಾಜಿಕ ಕಾರ್ಯ ಇದಾಗಿತ್ತು .

ಡಿಎಂಕೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಅಗತ್ಯವಿರುವವರಿಗೆ ಮತ್ತು ಸಬ್ಸಿಡಿ ದರದಲ್ಲಿ ದೀನದಲಿತರಿಗೆ ಆಹಾರವನ್ನು ಒದಗಿಸಲು ರಾಜ್ಯದಾದ್ಯಂತ ಕಲೈಂಜರ್ ಹೆಸರಿನಲ್ಲಿ 500 ಕ್ಯಾಂಟೀನ್‌ಗಳನ್ನು ತೆರೆಯುವುದಾಗಿ ಭರವಸೆ ನೀಡಿತ್ತು.

ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿದ ಡಿಎಂಕೆ ನಾಯಕ ದುರೈಮುರುಗನ್ ರಾಜ್ಯಾದ್ಯಂತ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರವನ್ನು ಒದಗಿಸಲು ಕ್ಯಾಂಟೀನ್‌ಗಳನ್ನು ತೆರೆಯುವುದಾಗಿ ಡಿಎಂಕೆ ಭರವಸೆ ನೀಡಿದೆ. ಸರ್ಕಾರ ಅಧಿಕಾರ ವಹಿಸಿಕೊಂಡ ಕೂಡಲೇ ಅದನ್ನು ಮೊದಲು ಜಾರಿಗೊಳಿಸುತ್ತೇವೆ ಎಂದು ಹೇಳಿದರು.

ಡಿಎಂಕೆ ಸರ್ಕಾರವು ಚೆನ್ನೈದಾದ್ಯಂತ ಮತ್ತು ಎಲ್ಲಾ ಮೆಟ್ರೋ ನಗರಗಳಲ್ಲಿ ಉಚಿತ ಕುಡಿಯುವ ನೀರಿನ ಘಟಕಗಳನ್ನು ತೆರೆಯಲು ಮುಂದಾಗಿದೆ. ಸಿಎಸ್ಆರ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಹಣವನ್ನು ಸಂಗ್ರಹಿಸಬಹುದಾದ ಸಂಬಂಧಪಟ್ಟ ಕಾರ್ಪೊರೇಷನ್ ಗಳು ಇದಕ್ಕೆ ಸಹಾಯ ಮಾಡಲಿವೆ.

ತಮಿಳುನಾಡಿನ ರಾಜಕೀಯ ಪಕ್ಷಗಳು ಜನರಿಗೆ ಹಲವಾರು ಕಲ್ಯಾಣ ಯೋಜನೆಗಳು ಮತ್ತು ಉಚಿತ ಸೌಲಭ್ಯಗಳನ್ನು ಒದಗಿಸುತ್ತವೆ.ಆ ಸಮಯದಲ್ಲಿ ಅಧಿಕಾರದಲ್ಲಿದ್ದ ರಾಜಕೀಯ ಪಕ್ಷದ ಪ್ರಕಾರ ಹೆಸರುಗಳನ್ನು ಬದಲಾಯಿಸಲಾಗುತ್ತದೆ.

ಇದನ್ನೂ ಓದಿ:ತಮಿಳುನಾಡಿನಲ್ಲಿ ಹೆಚ್ಚುತ್ತಿದೆ ಕೊವಿಡ್ ಪಿಡುಗು; ಸರಳ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಡಿಎಂಕೆ ನಾಯಕ ಸ್ಟಾಲಿನ್ ಒಲವು

(New DMK government under M.K. Stalin is to rename the Amma canteens to be Anna canteens in Tamilnadu)

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ