AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್​ 14ರಂದು ನೂತನ ಚುನಾವಣಾ ಆಯುಕ್ತರ ಆಯ್ಕೆ

ಚುನಾವಣಾ ಆಯುಕ್ತರ ಆಯ್ಕೆಗಾಗಿ ಉನ್ನತಾಧಿಕಾರಿಗಳ ಸಮಿತಿಯ ಸಭೆಯನ್ನು ಮಾರ್ಚ್​ 14 ರಂದು ನಡೆಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಮಾರ್ಚ್​ 14ರಂದು ನೂತನ ಚುನಾವಣಾ ಆಯುಕ್ತರ ಆಯ್ಕೆ
ಕೇಂದ್ರ ಚುನಾವಣಾ ಆಯೋಗ
Follow us
ನಯನಾ ರಾಜೀವ್
|

Updated on:Mar 13, 2024 | 8:40 AM

ನೂತನ ಚುನಾವಣಾ ಆಯುಕ್ತ(Election Commissioner)ರ ಆಯ್ಕೆಗಾಗಿ ಉನ್ನತಾಧಿಕಾರಿಗಳ ಸಭೆಯನ್ನು ಮಾರ್ಚ್​ 14ರಂದು ನಡೆಯಲಿದೆ. ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ರಾಜೀನಾಮೆ ಹಾಗೂ ಅನೂಪ್ ಚಂದ್ರ ಪಾಂಡೆ ಅವರ ನಿವೃತ್ತಿಯ ನಂತರ ಖಾಲಿ ಇರುವ ಎರಡು ಚುನಾವಣಾ ಆಯುಕ್ತರ ಹುದ್ದೆಯ ಭರ್ತಿ ಪ್ರಕ್ರಿಯೆ ಚುರುಕುಗೊಂಡಿದೆ. ಚುನಾವಣಾ ಆಯುಕ್ತರ ಆಯ್ಕೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಉನ್ನತ ಮಟ್ಟದ ಆಯ್ಕೆ ಮಂಡಳಿಯ ಸಭೆ ಇದೀಗ ಮಾರ್ಚ್​ 14ರಂದು ನಿಗದಿಯಾಗಿದೆ.

ಮಾರ್ಚ್​ 15ರಂದು ಸಂಜೆ 6 ಗಂಟೆಗೆ ಸಭೆ ನಡೆಯಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಈ ಮೊದಲು ಹೇಳಿದ್ದರು. ಆದರೆ ಈಗ ತ್ರಿಸದಸ್ಯ ಆಯ್ಕೆ ಸಮಿತಿಯ ಸಭೆ ಮಾರ್ಚ್​ 14 ರಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎನ್ನಲಾಗಿದೆ.

ಮಾರ್ಚ್​ 16ರಂದು ಚುನಾವಣಾ ದಿನಾಂಕ ಘೋಷಣೆ ಸಾಧ್ಯತೆ ಇಬ್ಬರು ಚುನಾವಣಾ ಆಧಿಕಾರಿಗಳ ಆಯ್ಕೆಯ ನಂತರ ಶೀಘ್ರವೇ ಪ್ರಮಾಣವಚನ ಬೋಧಿಸಲಾಗುತ್ತದೆ. ಮಾರ್ಚ್​ 15 ಅಥವಾ 16 ರಂದು ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: ಅರುಣ್ ಗೋಯಲ್ ರಾಜೀನಾಮೆ ಬೆನ್ನಲ್ಲೇ ನೂತನ ಚುನಾವಣಾ ಆಯುಕ್ತರ ಆಯ್ಕೆಗೆ ಈ ವಾರದಲ್ಲೇ ಸಭೆ ಸಾಧ್ಯತೆ

ಅರುಣ್​ ಗೋಯಲ್ ರಾಜೀನಾಮೆ 2024ರ ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಯಾಗುವ ಕೆಲ ದಿನಗಳ ಮೊದಲು ಚುನಾವಣಾ ಆಯುಕ್ತ ಅರುಣ್​ ಗೋಯಲ್ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ಕೇಂದ್ರ ಕಾನೂನು ಸಚಿವಾಲಯವು ಅಧಿಸೂಚನೆಯನ್ನು ಪ್ರಕಟಿಸಿದೆ. ಇದರಿಂದಾಗಿ ಚುನಾವಣಾ ಆಯೋಗದ ಏಕೈಕ ಸದಸ್ಯರಾಗಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಉಳಿದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:39 am, Wed, 13 March 24

ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು