ಮಾರ್ಚ್​ 14ರಂದು ನೂತನ ಚುನಾವಣಾ ಆಯುಕ್ತರ ಆಯ್ಕೆ

ಚುನಾವಣಾ ಆಯುಕ್ತರ ಆಯ್ಕೆಗಾಗಿ ಉನ್ನತಾಧಿಕಾರಿಗಳ ಸಮಿತಿಯ ಸಭೆಯನ್ನು ಮಾರ್ಚ್​ 14 ರಂದು ನಡೆಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಮಾರ್ಚ್​ 14ರಂದು ನೂತನ ಚುನಾವಣಾ ಆಯುಕ್ತರ ಆಯ್ಕೆ
ಕೇಂದ್ರ ಚುನಾವಣಾ ಆಯೋಗ

Updated on: Mar 13, 2024 | 8:40 AM

ನೂತನ ಚುನಾವಣಾ ಆಯುಕ್ತ(Election Commissioner)ರ ಆಯ್ಕೆಗಾಗಿ ಉನ್ನತಾಧಿಕಾರಿಗಳ ಸಭೆಯನ್ನು ಮಾರ್ಚ್​ 14ರಂದು ನಡೆಯಲಿದೆ. ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ರಾಜೀನಾಮೆ ಹಾಗೂ ಅನೂಪ್ ಚಂದ್ರ ಪಾಂಡೆ ಅವರ ನಿವೃತ್ತಿಯ ನಂತರ ಖಾಲಿ ಇರುವ ಎರಡು ಚುನಾವಣಾ ಆಯುಕ್ತರ ಹುದ್ದೆಯ ಭರ್ತಿ ಪ್ರಕ್ರಿಯೆ ಚುರುಕುಗೊಂಡಿದೆ. ಚುನಾವಣಾ ಆಯುಕ್ತರ ಆಯ್ಕೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಉನ್ನತ ಮಟ್ಟದ ಆಯ್ಕೆ ಮಂಡಳಿಯ ಸಭೆ ಇದೀಗ ಮಾರ್ಚ್​ 14ರಂದು ನಿಗದಿಯಾಗಿದೆ.

ಮಾರ್ಚ್​ 15ರಂದು ಸಂಜೆ 6 ಗಂಟೆಗೆ ಸಭೆ ನಡೆಯಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಈ ಮೊದಲು ಹೇಳಿದ್ದರು. ಆದರೆ ಈಗ ತ್ರಿಸದಸ್ಯ ಆಯ್ಕೆ ಸಮಿತಿಯ ಸಭೆ ಮಾರ್ಚ್​ 14 ರಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎನ್ನಲಾಗಿದೆ.

ಮಾರ್ಚ್​ 16ರಂದು ಚುನಾವಣಾ ದಿನಾಂಕ ಘೋಷಣೆ ಸಾಧ್ಯತೆ
ಇಬ್ಬರು ಚುನಾವಣಾ ಆಧಿಕಾರಿಗಳ ಆಯ್ಕೆಯ ನಂತರ ಶೀಘ್ರವೇ ಪ್ರಮಾಣವಚನ ಬೋಧಿಸಲಾಗುತ್ತದೆ. ಮಾರ್ಚ್​ 15 ಅಥವಾ 16 ರಂದು ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: ಅರುಣ್ ಗೋಯಲ್ ರಾಜೀನಾಮೆ ಬೆನ್ನಲ್ಲೇ ನೂತನ ಚುನಾವಣಾ ಆಯುಕ್ತರ ಆಯ್ಕೆಗೆ ಈ ವಾರದಲ್ಲೇ ಸಭೆ ಸಾಧ್ಯತೆ

ಅರುಣ್​ ಗೋಯಲ್ ರಾಜೀನಾಮೆ
2024ರ ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಯಾಗುವ ಕೆಲ ದಿನಗಳ ಮೊದಲು ಚುನಾವಣಾ ಆಯುಕ್ತ ಅರುಣ್​ ಗೋಯಲ್ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ಕೇಂದ್ರ ಕಾನೂನು ಸಚಿವಾಲಯವು ಅಧಿಸೂಚನೆಯನ್ನು ಪ್ರಕಟಿಸಿದೆ. ಇದರಿಂದಾಗಿ ಚುನಾವಣಾ ಆಯೋಗದ ಏಕೈಕ ಸದಸ್ಯರಾಗಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಉಳಿದಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:39 am, Wed, 13 March 24

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us