AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ವರ್ಷದ ಮೊದಲ ದಿನವೇ ಗುಡ್​ ನ್ಯೂಸ್​: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​​ ಬೆಲೆ ಇಳಿಕೆ

ಹೊಸ ಹಣಕಾಸು ವರ್ಷದ ಮೊದಲ ದಿನ ಎಲ್​​ಪಿಜಿ ದರವನ್ನು ಕಡಿಮೆ ಮಾಡಲಾಗಿದ್ದು, ಇದರಿಂದ ಗ್ಯಾಸ್​ ಬಳಕೆದಾರರಿಗೆ ಗುಡ್​ನ್ಯೂಸ್​ ಸಿಕ್ಕಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ​​ಬೆಲೆ 30.50 ರೂ. ಇಳಿಕೆಯಾಗಿದೆ. ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೇ ಅನ್ವಯವಾಗಲಿದೆ .

ಆರ್ಥಿಕ ವರ್ಷದ ಮೊದಲ ದಿನವೇ ಗುಡ್​ ನ್ಯೂಸ್​: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​​ ಬೆಲೆ ಇಳಿಕೆ
ಸಿಲಿಂಡರ್​​
ವಿವೇಕ ಬಿರಾದಾರ
|

Updated on:Apr 01, 2024 | 10:28 AM

Share

ನವದೆಹಲಿ, ಏಪ್ರಿಲ್​ 01: ಹೊಸ ಹಣಕಾಸು ವರ್ಷದ ಮೊದಲ ದಿನ ಎಲ್​​ಪಿಜಿ (LPG) ದರವನ್ನು ಕಡಿಮೆ ಮಾಡಲಾಗಿದ್ದು, ಇದರಿಂದ ಗ್ಯಾಸ್​ ಬಳಕೆದಾರರಿಗೆ ಗುಡ್​ನ್ಯೂಸ್​ ಸಿಕ್ಕಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ (19kg Commercial Cylinder Price)​​ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್​ಟಿಎಲ್ (ಫ್ರೀ ಟ್ರೇಡ್​ ಎಲ್​ಪಿಜಿ)​ ಸಿಲಿಂಡರ್​ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೇ ಅನ್ವಯವಾಗಲಿದೆ.

ದೆಹಲಿಯಲ್ಲಿ 19 ಕೆಜಿ ಎಲ್​ಪಿಜಿ ಸಿಲಿಂಡರ್​ ಬೆಲೆ 30.50 ರೂ, ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32 ರೂ. ಕಡಿಮೆಯಾಗಿದೆ. ಬೆಲೆ ಇಳಿಕೆ ನಂತರ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್​ 1764.50 ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 1717.50 ರೂ. ಇದೆ. ಕೋಲ್ಕತ್ತಾದಲ್ಲಿ 1879 ರೂ. ಮತ್ತು ಚೆನ್ನೈನಲ್ಲಿ 1930 ರೂ. ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ 1830 ರೂ.ಗೆ ದೊರೆಯಲಿದೆ.

ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹಿಂದಿನ ತಿಂಗಳ ಅಂತರರಾಷ್ಟ್ರೀಯ ಮಾರುಕಟ್ಟೆಯ ಸರಾಸರಿ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್​ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ತಿಂಗಳು ಗೃಹ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆಯನ್ನು ನೀಡಿದ್ದರು.

ಇದನ್ನೂ ಓದಿ: LPG Users: ಎಲ್​ಪಿಜಿ ಗ್ರಾಹಕರಿಗೆ ಉಚಿತ 50 ಲಕ್ಷ ವಿಮೆ; ಕ್ಲೈಮ್ ಮಾಡುವುದು ಹೇಗೆ?

ಮಾರ್ಚ್​​ನ ಮೊದಲ ದಿನ ಬೆಲೆ ಏರಿಕೆ

ಎಲ್​ಪಿಜಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ಬೆಲೆ ಮಾರ್ಚ್​ 1 ರಂದು ಹೆಚ್ಚಳವಾಗಿತ್ತು. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್​ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಿದ್ದವು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​  ಮಾಡಿ

Published On - 8:53 am, Mon, 1 April 24

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ