ಮಸೀದಿ, ದೇಗುಲಗಳಲ್ಲಿ ಮೈಕ್ ಬಳಕೆ: ಹೊಸ ಮಾರ್ಗಸೂಚಿ ಹೊರಡಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಈದ್ ಮತ್ತು ಅಕ್ಷಯ ತೃತೀಯ ಸೇರಿದಂತೆ ಮುಂಬರುವ ಹಬ್ಬಗಳ ಮುನ್ನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶ ಹೊರಡಿಸಿದ್ದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮೈಕ್‌ಗಳನ್ನು ಬಳಸಬಹುದಾದರೂ, ಆವರಣದ ಹೊರಗೆ ಧ್ವನಿ ಕೇಳಬಾರದು ಮತ್ತು ಇತರರಿಗೆ ಅನಾನುಕೂಲತೆಯನ್ನು ಉಂಟುಮಾಡಬಾರದು ಎಂದು ಹೇಳಿದ್ದಾರೆ.

ಮಸೀದಿ, ದೇಗುಲಗಳಲ್ಲಿ ಮೈಕ್ ಬಳಕೆ:  ಹೊಸ ಮಾರ್ಗಸೂಚಿ ಹೊರಡಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Follow us
S Chandramohan
| Updated By: ಸಾಧು ಶ್ರೀನಾಥ್​

Updated on: Apr 19, 2022 | 5:40 PM

ದೇಶದಲ್ಲಿ ಈಗ ಮಹಾರಾಷ್ಟ್ರದಿಂದ ಹಿಡಿದು ಕರ್ನಾಟಕದವರೆಗೂ ಮೈಕ್ ಅನ್ನು ಬಳಸಿ ಧಾರ್ಮಿಕ ಘೋಷಣೆ, ಪ್ರವಚನ, ಹನುಮಾನ್ ಚಾಲೀಸಾ ಪಠಣ ವಿವಾದಕ್ಕೆ ಕಾರಣವಾಗಿದೆ. ಹೀಗಾಗಿ ಈಗ ಮುಂದಿನ ದಿನಗಳಲ್ಲಿ ಈದ್ ಹಾಗೂ ಅಕ್ಷಯ ತೃತೀಯ ಹಬ್ಬಗಳು ಬರುತ್ತಿರುವುದರಿಂದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮೈಕ್ ಬಳಕೆ ಬಗ್ಗೆ ಹೊಸ ಮಾರ್ಗಸೂಚಿಯನ್ನೇ ಹೊರಡಿಸಿದ್ದಾರೆ. ಅನುಮತಿ ಪಡೆಯದೇ, ಧಾರ್ಮಿಕ ಮೆರವಣಿಗೆ ನಡೆಸದಂತೆ ನಿರ್ಬಂಧ ವಿಧಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೈಕ್ ಬಳಕೆಗೆ ಹೊಸ ನಿಯಮ ಜಾರಿ ಈದ್ ಮತ್ತು ಅಕ್ಷಯ ತೃತೀಯ ಸೇರಿದಂತೆ ಮುಂಬರುವ ಹಬ್ಬಗಳ ಮುನ್ನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶ ಹೊರಡಿಸಿದ್ದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮೈಕ್‌ಗಳನ್ನು ಬಳಸಬಹುದಾದರೂ, ಆವರಣದ ಹೊರಗೆ ಧ್ವನಿ ಕೇಳಬಾರದು ಮತ್ತು ಇತರರಿಗೆ ಅನಾನುಕೂಲತೆಯನ್ನು ಉಂಟುಮಾಡಬಾರದು ಎಂದು ಹೇಳಿದ್ದಾರೆ.

ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ರಜೆ ಕ್ಯಾನ್ಸಲ್: ಕಾನೂನು ಮತ್ತು ಸುವ್ಯವಸ್ಥೆ ಕುರಿತ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಸ ಸ್ಥಳಗಳಲ್ಲಿ ಮೈಕ್‌ಗಳನ್ನು ಬಳಸದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. “ಪ್ರತಿಯೊಬ್ಬರಿಗೂ ಅವರವರ ಸ್ವಂತ ಧಾರ್ಮಿಕ ಸಿದ್ಧಾಂತದ ಪ್ರಕಾರ ಅವರವರ ಆರಾಧನಾ ವಿಧಾನವನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯವಿದೆ. ಮೈಕ್ರೊಫೋನ್‌ಗಳನ್ನು ಬಳಸಬಹುದು ಆದರೆ ಮೈಕ್ರೊಫೋನ್‌ನಿಂದ ಧ್ವನಿ ಆವರಣದಿಂದ ಹೊರಗೆ ಹೋಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು. ಇದರಿಂದ ಇತರರಿಗೆ ತೊಂದರೆಯಾಗಬಾರದು. ಯಾವುದೇ ಹೊಸ ಸ್ಥಳಗಳಲ್ಲಿ ಮೈಕ್ರೊಫೋನ್‌ಗಳನ್ನು ಅಳವಡಿಸಲು ಅನುಮತಿ ನೀಡಬಾರದು,” ಎಂದು ಆದಿತ್ಯನಾಥ್ ಹೇಳಿರುವುದಾಗಿ ಸರಕಾರದ ಪ್ರಕಟಣೆ ತಿಳಿಸಿದೆ.

ಪ್ರಚಲಿತ ಸಂದರ್ಭಗಳ ದೃಷ್ಟಿಯಿಂದ ಪೊಲೀಸರು ಹೆಚ್ಚು ಎಚ್ಚರಿಕೆ ಮತ್ತು ಜಾಗರೂಕರಾಗಿರಬೇಕು. ಸ್ಟೇಷನ್ ಹೌಸ್ ಆಫೀಸರ್‌ಗಳಿಂದ (ಎಸ್‌ಎಚ್‌ಒ) ಎಡಿಜಿ ವರೆಗೆ ಮುಂದಿನ 24 ಗಂಟೆಗಳಲ್ಲಿ ಧಾರ್ಮಿಕ ಮುಖಂಡರು ಮತ್ತು ಸಮಾಜದ ಇತರ ಗಣ್ಯ ವ್ಯಕ್ತಿಗಳೊಂದಿಗೆ ಮಾತನಾಡಬೇಕು ಎಂದು ಹೇಳಿರುವ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯಕ್ಕೆ ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಯಾಗದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಿಗದಿತ ಸ್ಥಳಗಳಲ್ಲಿ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ, ಅಧಿಕಾರಿಗಳಿಂದ ಅನುಮತಿ ಪಡೆಯದೆ ಧಾರ್ಮಿಕ ಮೆರವಣಿಗೆಗಳನ್ನು ನಡೆಸಬಾರದು. “ಮೆರವಣಿಗೆಗಳಿಗೆ ಅನುಮತಿ ನೀಡುವ ಮೊದಲು, ಅನುಮತಿ ನೀಡುವ ಪ್ರಾಧಿಕಾರವು ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸಂಘಟಕರಿಂದ ಅಫಿಡವಿಟ್ ತೆಗೆದುಕೊಳ್ಳಬೇಕು. ಅಲ್ಲದೆ, ಸಾಂಪ್ರದಾಯಿಕ ಮೆರವಣಿಗೆಗಳಿಗೆ ಮಾತ್ರ ಅನುಮತಿ ನೀಡಲಾಗುವುದು… ಯಾವುದೇ ಹೊಸ ಮೆರವಣಿಗೆಗಳಿಗೆ ಅನುಮತಿ ನೀಡಬಾರದು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಮೇ 4 ರವರೆಗೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ರಜೆಯನ್ನು ಸರ್ಕಾರ ರದ್ದುಗೊಳಿಸಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ