New Parliament Building Inauguration: ನೂತನ ಸಂಸತ್ ಭವನ ಉದ್ಘಾಟನೆ ಯಾವಾಗ? ದಿನಾಂಕ, ಸಮಯದ ಬಗ್ಗೆ ಮಾಹಿತಿ ಇಲ್ಲಿದೆ

New Parliament Building Inauguration: ದೆಹಲಿಯಲ್ಲಿ ನಿರ್ಮಿಸಲಾಗಿರುವ ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮ ಮೇ 28 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಉಪಸ್ಥಿತಿಯಲ್ಲಿ ಸಂಸತ್​ ಭವನದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.

New Parliament Building Inauguration: ನೂತನ ಸಂಸತ್ ಭವನ ಉದ್ಘಾಟನೆ ಯಾವಾಗ? ದಿನಾಂಕ, ಸಮಯದ ಬಗ್ಗೆ ಮಾಹಿತಿ ಇಲ್ಲಿದೆ
ನೂತನ ಸಂಸತ್ ಭವನImage Credit source: Siasat.com
Follow us
ನಯನಾ ರಾಜೀವ್
| Updated By: Digi Tech Desk

Updated on:May 24, 2023 | 3:23 PM

ದೆಹಲಿಯಲ್ಲಿ ನಿರ್ಮಿಸಲಾಗಿರುವ ನೂತನ ಸಂಸತ್ ಭವನ(Parliament Building)ದ ಉದ್ಘಾಟನಾ ಕಾರ್ಯಕ್ರಮ ಮೇ 28 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಹಾಗೂ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಉಪಸ್ಥಿತಿಯಲ್ಲಿ ಸಂಸತ್​ ಭವನದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ. ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಯ ಭಾಗವಾಗಿ ಸಂಸತ್ ಭವನವನ್ನು ನಿರ್ಮಿಸಲಾಗಿದೆ. ಈ ಹೊಸ ಕಟ್ಟಡ 65 ಸಾವಿರ ಚದರ ಮೀಟರ್ ವ್ಯಾಪಿಸಿದೆ. ಲೋಕಸಭೆ-ರಾಜ್ಯ ಸಭೆ ಕಲಾಪಗಳಿಗಾಗಿ ಎರಡು ದೊಡ್ಡ ವಿಶಾಲವಾದ ಸಭಾಂಗಣಗಳನ್ನು ಹೊಂದಿದೆ. ಒಂದು ಗ್ರಂಥಾಲಯ, ಸಂಸದರ ಕಚೇರಿಗಳು, ಸಭೆಗಳಿಗಾಗಿ ಸಮಿತಿ ರೂಮ್​ಗಳು ಇನ್ನಿತರೆ ಸೌಕರ್ಯಗಳು ಅಲ್ಲಿವೆ.  ಸಂಸತ್ತಿನ ಪ್ರಸ್ತುತ ಕಟ್ಟಡವು 1927 ರಲ್ಲಿ ಪೂರ್ಣಗೊಂಡಿತು, ಅದು ಈಗ ಸುಮಾರು 100 ವರ್ಷಗಳಷ್ಟು ಹಳೆಯದು.

 ಸಂಸತ್ ಭವನದ ಉದ್ಘಾಟನೆ ಎಂದು? ಪ್ರಧಾನಿ ಮೋದಿ ಅವರು ಮೇ 28 ರಂದು ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಅವರು ಸಂಸತ್ತಿನ ಸದಸ್ಯರು ಸೇರಿದಂತೆ ವಿವಿಧ ಗಣ್ಯರು ಆಗಮಿಸಲಿದ್ದಾರೆ, ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗುತ್ತದೆ.

ಹೊಸ ಸಂಸತ್ ಕಟ್ಟಡವು 888 ಸದಸ್ಯರು ಲೋಕಸಭೆಯಲ್ಲಿ ಕುಳಿತುಕೊಳ್ಳಲು ಅನುವು ಮಾಡಿಕೊಡುತ್ತದೆ. ಕಾಂಗ್ರೆಸ್, ಎಎಪಿ, ಟಿಎಂಸಿ, ಸಿಪಿಐ ಸೇರಿದಂತೆ ಹಲವು ವಿರೋಧ ಪಕ್ಷಗಳು ಉದ್ಘಾಟನೆಗೆ ಆಕ್ಷೇಪ ವ್ಯಕ್ತಪಡಿಸುತ್ತಿವೆ.

ಮತ್ತಷ್ಟು ಓದಿ:New Parliament Inauguration Row: ನೂತನ ಸಂಸತ್ ಭವನವನ್ನು ಯಾರು ಉದ್ಘಾಟಿಸಬೇಕೆಂಬ ವಿವಾದ: ಸಂವಿಧಾನ ಹೇಳುವುದೇನು? ಇಲ್ಲಿದೆ ಮಾಹಿತಿ

ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮವನ್ನು ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನ ಅಥವಾ ಗಾಂಧಿ ಜಯಂತಿಯಂದು ನಡೆಸಬೇಕೇ ಹೊರತು ವಿಡಿ ಸಾವರ್ಕರ್ ಅವರ ಜನ್ಮದಿನದಂದು ಅಲ್ಲ ಎಂದು ಲೋಕಸಭೆಯ ಟಿಎಂಸಿ ನಾಯಕ ಸುದೀಪ್ ಬಂಡೋಪಾಧ್ಯಾಯ ಅವರು ಹೇಳಿದ್ದಾರೆ.

ನೂತನ ಸಂಸತ್​ ಭವನ(Parliament Building)ವನ್ನು ರಾಷ್ಟ್ರಪತಿ ಉದ್ಘಾಟನೆ ಮಾಡಬೇಕೇ ಹೊರತು ಪ್ರಧಾನಿಯಲ್ಲ ಎಂದು ವಿರೋಧಪಕ್ಷ ನಾಯಕರು ಪಟ್ಟು ಹಿಡಿದಿದ್ದಾರೆ.

ಪ್ರಸ್ತುತ ಸಂಸತ್ತಿನ ಕಟ್ಟಡದಲ್ಲಿ ಲೋಕಸಭೆಯಲ್ಲಿ 543 ಸದಸ್ಯರು ಮತ್ತು ರಾಜ್ಯಸಭೆಯಲ್ಲಿ 250 ಸದಸ್ಯರು ಕುಳಿತುಕೊಳ್ಳಲು ಅವಕಾಶವಿದೆ. ಭವಿಷ್ಯದ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆಯಲ್ಲಿ 888 ಸದಸ್ಯರು ಮತ್ತು ರಾಜ್ಯಸಭೆಯಲ್ಲಿ 384 ಸದಸ್ಯರನ್ನು ಸಂಸತ್ತಿನ ನೂತನ ಕಟ್ಟಡದಲ್ಲಿ ಸಭೆ ನಡೆಸಲು ವ್ಯವಸ್ಥೆ ಮಾಡಲಾಗಿದೆ.

ಬಿಜೆಪಿಯ ಎಲ್ಲಾ ನಾಯಕರು ಈ ವಿಚಾರದಲ್ಲಿ ಇಲ್ಲಿಯವರೆಗೆ ಮೌನವಹಿಸಿದ್ದಾರೆ. ಅವರು ರಾಷ್ಟ್ರಪತಿ ಅಥವಾ ಪ್ರಧಾನಿ ಪರವಾಗಿ ಅಥವಾ ವಿರುದ್ಧವಾಗಿ ಏನನ್ನೂ ಹೇಳಿಲ್ಲ. ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:40 am, Wed, 24 May 23

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ