New Parliament Inauguration Row: ನೂತನ ಸಂಸತ್ ಭವನವನ್ನು ಯಾರು ಉದ್ಘಾಟಿಸಬೇಕೆಂಬ ವಿವಾದ: ಸಂವಿಧಾನ ಹೇಳುವುದೇನು? ಇಲ್ಲಿದೆ ಮಾಹಿತಿ

ನೂತನ ಸಂಸತ್​ ಭವನ(Parliament Building)ವನ್ನು ರಾಷ್ಟ್ರಪತಿ ಉದ್ಘಾಟನೆ ಮಾಡಬೇಕೇ ಹೊರತು ಪ್ರಧಾನಿಯಲ್ಲ ಎಂದು ವಿರೋಧಪಕ್ಷ ನಾಯಕರು ಪಟ್ಟು ಹಿಡಿದಿದ್ದಾರೆ. ಹಾಗಾದರೆ ಪ್ರಧಾನಿ(Prime Minister)  ಹಾಗೂ ರಾಷ್ಟ್ರಪತಿ(President) ಅಧಿಕಾರ ವ್ಯಾಪ್ತಿಯ ಬಗ್ಗೆ ಸಂವಿಧಾನ ಏನು ಹೇಳುತ್ತೆ ಎಂಬುದರ ಬಗ್ಗೆ ತಿಳಿಯೋಣ.

New Parliament Inauguration Row: ನೂತನ ಸಂಸತ್ ಭವನವನ್ನು ಯಾರು ಉದ್ಘಾಟಿಸಬೇಕೆಂಬ ವಿವಾದ: ಸಂವಿಧಾನ ಹೇಳುವುದೇನು? ಇಲ್ಲಿದೆ ಮಾಹಿತಿ
ನೂತನ ಸಂಸತ್ ಭವನ
Follow us
ನಯನಾ ರಾಜೀವ್
| Updated By: Digi Tech Desk

Updated on:May 24, 2023 | 3:23 PM

ನೂತನ ಸಂಸತ್​ ಭವನ(Parliament Building)ವನ್ನು ರಾಷ್ಟ್ರಪತಿ ಉದ್ಘಾಟನೆ ಮಾಡಬೇಕೇ ಹೊರತು ಪ್ರಧಾನಿಯಲ್ಲ ಎಂದು ವಿರೋಧಪಕ್ಷ ನಾಯಕರು ಪಟ್ಟು ಹಿಡಿದಿದ್ದಾರೆ. ಹಾಗಾದರೆ ಪ್ರಧಾನಿ(Prime Minister)  ಹಾಗೂ ರಾಷ್ಟ್ರಪತಿ(President) ಅಧಿಕಾರ ವ್ಯಾಪ್ತಿಯ ಬಗ್ಗೆ ಸಂವಿಧಾನ ಏನು ಹೇಳುತ್ತೆ ಎಂಬುದರ ಬಗ್ಗೆ ತಿಳಿಯೋಣ. ಭಾರತದ ನೂತನ ಸಂಸತ್ ಭವನವನ್ನು ಮೇ 28 ರಂದು ಉದ್ಘಾಟಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಆದರೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ರಾಷ್ಟ್ರೀಯ ಜನತಾ ದಳ ಇನ್ನೂ ಇತರೆ ವಿರೋಧ ಪಕ್ಷಗಳು ಸಂವಿಧಾನದ ಪ್ರಕಾರ ರಾಷ್ಟ್ರಪತಿ ಉದ್ಘಾಟಿಸಬೇಕು ಎಂದು ಹೇಳುತ್ತಿದ್ದಾರೆ.ಹಾಗೆಯೇ ರಾಷ್ಟ್ರಪತಿ ಮುರ್ಮು ಅವರನ್ನು ಈ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಆಹ್ವಾನಿಸಿಯೇ ಇಲ್ಲ ಎಂದು ಕಾಂಗ್ರೆಸ್ ದೂರಿದೆ.

ಭಾರತದ ಸಂವಿಧಾನ ಈ ಕುರಿತು ಹೇಳುವುದೇನು? ಇಲ್ಲಿದೆ ಮಾಹಿತಿ ಭಾರತದ ಸಂವಿಧಾನದ ಪ್ರಕಾರ ಸಂಸತ್ತು ಎಂದರೆ ರಾಷ್ಟ್ರಪತಿ ಹಾಗೂ ಲೋಕಸಭೆ, ರಾಜ್ಯಸಭೆಯನ್ನು ಒಳಗೊಂಡಿರುವಂಥದ್ದಾಗಿದೆ. ಪ್ರಧಾನಿಯು ಸಚಿವ ಸಂಪುಟದ ಮುಖ್ಯಸ್ಥರಾಗಿರುತ್ತಾರೆ, ರಾಷ್ಟ್ರಪತಿಯು ಪ್ರಧಾನಿ ಹಾಗೂ ಸಚಿವ ಸಂಪುಟದ ಮೇರೆಗೆ ಕಾರ್ಯ ನಿರ್ವಹಿಸುತ್ತಾರೆ. ರಾಷ್ಟ್ರಪತಿ ಮೊದಲ ಸಭೆಯನ್ನುದ್ದೇಶಿ ಮಾತನಾಡಬೇಕು, ರಾಷ್ಟ್ರಪತಿ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಾಹಕ, ಶಾಸಕಾಂಗ, ನ್ಯಾಯಾಂಗ, ತುರ್ತುಸ್ಥಿತಿ ಮತ್ತು ಮಿಲಿಟರಿ ಸೇರಿರುತ್ತದೆ ಎಂದು ಸಂವಿಧಾನದಲ್ಲಿ ಬರೆಯಲಾಗಿದೆ.

ಸಂಸತ್ತಿಗೆ ಸಂಬಂಧಿಸಿದಂತೆ, ಶಾಸಕಾಂಗದ ಅಡಿಯಲ್ಲಿ ಬರುತ್ತದೆ, ಲೋಕಸಭೆ (ಸಂಸತ್ತಿನ ಕೆಳಮನೆ), ಮತ್ತು ರಾಜ್ಯಸಭೆ (ಸಂಸತ್ತಿನ ಮೇಲ್ಮನೆ) ಒಳಗೊಂಡಿದೆ.

ಮತ್ತಷ್ಟು ಓದಿ: ನೂತನ ಸಂಸತ್ ಭವನ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬಹಿಷ್ಕಾರ ಸಾಧ್ಯತೆ

ಸಂವಿಧಾನದ 79ನೇ ವಿಧಿಯ ಪ್ರಕಾರ ರಾಷ್ಟ್ರಪತಿ ಮತ್ತು ಎರಡು ಸದನಗಳನ್ನು ಒಳಗೊಂಡಿರುವ ಒಕ್ಕೂಟಕ್ಕೆ ಸಂಸತ್ತು ಇರಬೇಕು ಅದು ರಾಜ್ಯಗಳ ಕೌನ್ಸಿಲ್ (ರಾಜ್ಯಸಭೆ) ಮತ್ತು ಹೌಸ್ ಆಫ್ ಪೀಪಲ್ (ಲೋಕಸಭೆ).

ಬಿಜೆಪಿಯ ಎಲ್ಲಾ ನಾಯಕರು ಈ ವಿಚಾರದಲ್ಲಿ ಇಲ್ಲಿಯವರೆಗೆ ಮೌನವಹಿಸಿದ್ದಾರೆ. ಅವರು ರಾಷ್ಟ್ರಪತಿ ಅಥವಾ ಪ್ರಧಾನಿ ಪರವಾಗಿ ಅಥವಾ ವಿರುದ್ಧವಾಗಿ ಏನನ್ನೂ ಹೇಳಿಲ್ಲ. ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಮುರ್ಮು ಅವರು ಭಾರತದ ಪ್ರಥಮ ಪ್ರಜೆ, ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸುವುದು ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಸಾಂವಿಧಾನಿಕ ಔಚಿತ್ಯಕ್ಕೆ ಸರ್ಕಾರದ ಬದ್ಧತೆಯನ್ನು ಸಂಕೇತಿಸುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:06 am, Wed, 24 May 23

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್