AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ವರ್ಷದೊಳಗಿನ ಮಕ್ಕಳಿಗೆ ಹೊಸ ಪಾಸ್‌ಪೋರ್ಟ್ ನಿಯಮ ಜಾರಿ: 5 ವರ್ಷ ಅಥವಾ 18 ವರ್ಷ ತುಂಬುವವರೆಗೆ ಸಿಂಧುತ್ವ

ವಿದೇಶಾಂಗ ಸಚಿವಾಲಯವು 15 ವರ್ಷದೊಳಗಿನ ಮಕ್ಕಳ ಪಾಸ್‌ಪೋರ್ಟ್ ನಿಯಮಗಳನ್ನು ಬದಲಾಯಿಸಿದೆ. ಇನ್ನು ಮುಂದೆ ಪಾಸ್‌ಪೋರ್ಟ್ 18 ವರ್ಷ ತುಂಬುವವರೆಗೆ ಅಥವಾ ಗರಿಷ್ಠ 5 ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ಶುಲ್ಕದಲ್ಲೂ ಪರಿಷ್ಕರಣೆ ಮಾಡಲಾಗಿದ್ದು, ಮಕ್ಕಳಿಗೆ 18 ವರ್ಷ ತುಂಬಿದ ಕೂಡಲೇ ಹೊಸ ವಯಸ್ಕ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಕಡ್ಡಾಯ. ಪೋಷಕರು ‘ಪಾಸ್‌ಪೋರ್ಟ್ ಸೇವಾ’ ಮೂಲಕ ಅರ್ಜಿ ಸಲ್ಲಿಸಬಹುದು.

15 ವರ್ಷದೊಳಗಿನ ಮಕ್ಕಳಿಗೆ ಹೊಸ ಪಾಸ್‌ಪೋರ್ಟ್ ನಿಯಮ ಜಾರಿ: 5 ವರ್ಷ ಅಥವಾ 18 ವರ್ಷ ತುಂಬುವವರೆಗೆ ಸಿಂಧುತ್ವ
ಪಾಸ್​ಪೋರ್ಟ್​Image Credit source: Getty Images
ನಯನಾ ರಾಜೀವ್
|

Updated on: Sep 18, 2026 | 12:38 PM

Share

ನವದೆಹಲಿ, ಸೆಪ್ಟೆಂಬರ್ 18: ವಿದೇಶಾಂಗ ಸಚಿವಾಲಯವು ಪಾಸ್‌ಪೋರ್ಟ್ ಕಾಯ್ದೆಗೆ ತಿದ್ದುಪಡಿ ತಂದಿದ್ದು, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪಾಸ್‌ಪೋರ್ಟ್ ಸಿಂಧುತ್ವದ ನಿಯಮವನ್ನು ಬದಲಾಯಿಸಿದೆ. ಇನ್ನು ಮುಂದೆ ಮಗುವಿಗೆ 18 ವರ್ಷ ತುಂಬಿದ ತಕ್ಷಣ ಆ ಪಾಸ್‌ಪೋರ್ಟ್ ಅಮಾನ್ಯವಾಗಲಿದ್ದು, ನೂತನ ನಿಯಮ ತಕ್ಷಣದಿಂದಲೇ ಜಾರಿಗೆ ಬಂದಿದೆ. ಮಕ್ಕಳ ಪಾಸ್‌ಪೋರ್ಟ್ ಪಡೆಯಲು ಬಯಸುವ ಪೋಷಕರಿಗೆ ವಿದೇಶಾಂಗ ಸಚಿವಾಲಯ ಮಹತ್ವದ ಮಾಹಿತಿ ನೀಡಿದೆ. ಅಪ್ರಾಪ್ತರಿಗೆ ನೀಡುವ 26 ಪುಟಗಳ ಪಾಸ್‌ಪೋರ್ಟ್ ಸಿಂಧುತ್ವವನ್ನು ಗರಿಷ್ಠ 5 ವರ್ಷ ಅಥವಾ 18 ವರ್ಷ ವಯಸ್ಸಿನವರೆಗೆ ನಿಗದಿಪಡಿಸಲಾಗಿದ್ದು, ಅರ್ಜಿ ಶುಲ್ಕವನ್ನೂ ಪರಿಷ್ಕರಿಸಲಾಗಿದೆ.

ಹೊಸ ಸಿಂಧುತ್ವ ನಿಯಮ: 1980 ರ ಪಾಸ್‌ಪೋರ್ಟ್ ನಿಯಮಾವಳಿಯ ರೂಲ್ 12 (1ಎ) ತಿದ್ದುಪಡಿ ಮಾಡಲಾಗಿದೆ. ಉದಾಹರಣೆಗೆ, ಮಕ್ಕಳ 14ನೇ ವಯಸ್ಸಿನಲ್ಲಿ ಪಾಸ್‌ಪೋರ್ಟ್ ನೀಡಿದರೆ, 5 ವರ್ಷದ ಲೆಕ್ಕಾಚಾರದ ಪ್ರಕಾರ ಅದು 19 ವರ್ಷದವರೆಗೆ ಇರಬೇಕಿತ್ತು. ಆದರೆ ಹೊಸ ನಿಯಮದ ಪ್ರಕಾರ ಮಕ್ಕಳಿಗೆ 18 ವರ್ಷ ತುಂಬಿದ ತಕ್ಷಣವೇ ಆ ಪಾಸ್‌ಪೋರ್ಟ್ ಅಮಾನ್ಯವಾಗಲಿದ್ದು, ವಯಸ್ಕರ ಹೊಸ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಹಿಂದಿನ ನಿಯಮವೇನಿತ್ತು?: ಈ ಹಿಂದೆ 15 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುತ್ತಿದ್ದ ಪಾಸ್‌ಪೋರ್ಟ್ 5 ವರ್ಷಗಳವರೆಗೆ ಅಥವಾ ಮಗುವಿಗೆ 15 ವರ್ಷ ತುಂಬುವವರೆಗೆ ಮಾತ್ರ ಮಾನ್ಯವಾಗಿರುತ್ತಿತ್ತು. ಈಗ ಆ ಮಿತಿಯನ್ನು 18 ವರ್ಷದವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಶುಲ್ಕ ಪರಿಷ್ಕರಣೆ: ನಿಯಮ 8 (1) ರ ತಿದ್ದುಪಡಿಯಂತೆ, ಎಲ್ಲಾ ವರ್ಗದ ಪಾಸ್‌ಪೋರ್ಟ್ ಅರ್ಜಿಗಳಿಗೆ ನಿಗದಿಪಡಿಸಲಾದ ನವೀಕೃತ ಶುಲ್ಕ ರಚನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಶೆಡ್ಯೂಲ್ IV ದರಗಳನ್ನು ಅನ್ವಯಿಸಲಾಗಿದೆ.

ಮತ್ತಷ್ಟು ಓದಿ: ವಿದೇಶದಲ್ಲಿರುವ ಮತದಾರರಿಗೆ ಎಸ್‌ಐಆರ್‌ ಸಂಕಷ್ಟ: ಖುದ್ದು ವಿಚಾರಣೆಗೆ ಹಾಜರಾಗದಿದ್ದರೆ ಬೇರೇನು ಆಯ್ಕೆಗಳಿವೆ? ಇಲ್ಲಿದೆ ವಿವರ

ಪರಿಷ್ಕೃತ ಶುಲ್ಕದ ವಿವರ:

ವಯಸ್ಕರ ಸಾಮಾನ್ಯ ಪಾಸ್‌ಪೋರ್ಟ್ (36 ಪುಟ): 1,500 ರೂ.ನಿಂದ 2,500 ರೂ.ಗೆ ಏರಿಕೆ.

ವಯಸ್ಕರ ಜಂಬೋ ಪಾಸ್‌ಪೋರ್ಟ್ (60ಪುಟ): 2 ಸಾವಿರ ರೂ.ನಿಂದ 2,500 ರೂ.ಗೆ ಏರಿಕೆ.

ತತ್ಕಾಲ್ 36 ಪುಟ: 3,500 ರೂ.ನಿಂದ 5 ಸಾವಿರ ರೂ.ಗೆ ಪರಿಷ್ಕರಣೆ.

ತತ್ಕಾಲ್ 60 ಪುಟ: 4 ಸಾವಿರ ರೂ.ನಿಂದ 6 ಸಾವಿರ ರೂ.ಗೆ ಹೆಚ್ಚಳ

ಫೋಟೋ ಬದಲಾವಣೆ ಮತ್ತು ಬಯೋಮೆಟ್ರಿಕ್ಸ್ ಅಗತ್ಯ: ಮಕ್ಕಳು ಬೆಳೆದಂತೆ ಅವರ ಮುಖಚಹರೆ ಮತ್ತು ದೈಹಿಕ ಲಕ್ಷಣಗಳು ವೇಗವಾಗಿ ಬದಲಾಗುವುದರಿಂದ ಅಂತಾರಾಷ್ಟ್ರೀಯ ವಲಸೆ ನಿಯಮಗಳ (ICAO) ಅಡಿಯಲ್ಲಿ ಗುರುತು ಪತ್ತೆ ಸುಲಭಗೊಳಿಸಲು ಈ 18 ವರ್ಷದ ಸ್ಪಷ್ಟ ಮಿತಿಯನ್ನು ನಿಗದಿಪಡಿಸಲಾಗಿದೆ. ಬಾಲಕ ಅಥವಾ ಬಾಲಕಿಯ ವಯಸ್ಸು 18 ವರ್ಷ ತುಂಬುತ್ತಿದ್ದಂತೆ ವಯಸ್ಕರ ವಿಭಾಗದಲ್ಲಿ ಬಯೋಮೆಟ್ರಿಕ್ ಮತ್ತು ಬೆರಳಚ್ಚು ನೀಡಿ ಹೊಸ ಪಾಸ್‌ಪೋರ್ಟ್ ಪಡೆಯುವುದು ಕಡ್ಡಾಯ.

ಆನ್‌ಲೈನ್ ಸಲ್ಲಿಕೆ ಪ್ರಕ್ರಿಯೆ: ಪೋಷಕರು ‘ಪಾಸ್‌ಪೋರ್ಟ್ ಸೇವಾ’ (Passport Seva) ಪೋರ್ಟಲ್ ಅಥವಾ ‘mPassport Seva’ ಆ್ಯಪ್ ಮೂಲಕ ಈ ಪರಿಷ್ಕೃತ ನಿಯಮಗಳನ್ವಯ ತಮ್ಮ ಅಪ್ರಾಪ್ತ ಮಕ್ಕಳಿಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿಯ ಜೊತೆಗೆ ಮಗುವಿನ ಜನನ ಪ್ರಮಾಣಪತ್ರ ಮತ್ತು ಪೋಷಕರ ಪಾಸ್‌ಪೋರ್ಟ್ ಪ್ರತಿಗಳನ್ನು ಲಗತ್ತಿಸುವುದು ಅಗತ್ಯವಾಗಿದೆ.

ಇ-ಪಾಸ್‌ಪೋರ್ಟ್ (ಚಿಪ್ ಆಧಾರಿತ): ಭಾರತ ಸರ್ಕಾರವು ಭದ್ರತೆಯನ್ನು ಹೆಚ್ಚಿಸಲು ಬಯೋಮೆಟ್ರಿಕ್ ಚಿಪ್ ಆಧಾರಿತ ಇ-ಪಾಸ್‌ಪೋರ್ಟ್‌ಗಳನ್ನು ಹಂತಹಂತವಾಗಿ ಜಾರಿಗೆ ತರುತ್ತಿದ್ದು, ನೂತನ ಶುಲ್ಕ ಮತ್ತು ನಿಯಮಾವಳಿಗಳು ಸುಧಾರಿತ ತಂತ್ರಜ್ಞಾನದ ಸೇವೆ ಒದಗಿಸಲು ನೆರವಾಗಲಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’