Social Media Influencers: ಸಾಮಾಜಿಕ ಮಾಧ್ಯಮ ಪ್ರಭಾವಿಗಳೇ ಎಚ್ಚರ; ಬಂದಿದೆ ಹೊಸ ನಿಯಮ, ತಪ್ಪಿದರೆ 50 ಲಕ್ಷ ದಂಡ

ಜನರ ಹಾದಿ ತಪ್ಪಿಸುವ ಜಾಹೀರಾತುಗಳನ್ನು ಕಡಿಮೆ ಮಾಡುವುದು ಮತ್ತು ಗ್ರಾಹಕರ ಹಿತ ಕಾಯುವ ದೃಷ್ಟಿಯಿಂದ ಹೊಸ ನಿಯಮ ರೂಪಿಸಲಾಗಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಹೊಸ ನಿಯಮದ ವಿವರ ಇಲ್ಲಿದೆ.

Social Media Influencers: ಸಾಮಾಜಿಕ ಮಾಧ್ಯಮ ಪ್ರಭಾವಿಗಳೇ ಎಚ್ಚರ; ಬಂದಿದೆ ಹೊಸ ನಿಯಮ, ತಪ್ಪಿದರೆ 50 ಲಕ್ಷ ದಂಡ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Jan 21, 2023 | 12:50 PM

ನವದೆಹಲಿ: ಸಾಮಾಜಿಕ ಮಾಧ್ಯಮಗಳ ಪ್ರಭಾವಿಗಳು (Social Media Influencers) ತಾವು ಸ್ವೀಕರಿಸಿದ ವಸ್ತುಗಳ ವಿವರ ಬಹಿರಂಗಪಡಿಸುವುದನ್ನು ಕೇಂದ್ರ ಸರ್ಕಾರ ಶುಕ್ರವಾರ ಕಡ್ಡಾಯಗೊಳಿಸಿದೆ. ತಪ್ಪಿದಲ್ಲಿ 50 ಲಕ್ಷ ರೂ. ವರೆಗೆ ದಂಡ ಮತ್ತು ಸಾಮಾಜಿಕ ಮಾಧ್ಯಮ ಅನುಮೋದನೆಗಳ ಮೇಲೆ ನಿಷೇಧ ಶಿಕ್ಷೆಯನ್ನೂ ಎದುರಿಸಬೇಕಾಗಲಿದೆ. ಹೊಸ ನಿಯಮದ ಪ್ರಕಾರ, ತಾವು ಸ್ವೀಕರಿಸಿದ ಉಡುಗೊರೆ, ಪಡೆದ ಹೋಟೆಲ್ ವಸತಿ ವ್ಯವಸ್ಥೆ, ಷೇರು, ರಿಯಾಯಿತಿ ಕೊಡುಗೆ, ಯಾವುದೇ ಉತ್ಪನ್ನ, ಸೇವೆ ಅಥವಾ ಯೋಜನೆಗಳ ಬಗ್ಗೆ ಪ್ರಭಾವ ಬೀರಿದ್ದಕ್ಕಾಗಿ ಪಡೆಯುವ ಬಹುಮಾನ ಇತ್ಯಾದಿಗಳ ವಿವರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ವಿವರವನ್ನು ಸರಳ ಮತ್ತು ಸ್ಪಷ್ಟವಾದ ಭಾಷೆಯಲ್ಲಿ ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ.

ಸಾಮಾಜಿಕ ಮಾಧ್ಯಮ ಪ್ರಭಾವ ಉದ್ಯಮ ವೇಗವಾಗಿ ಬೆಳವಣಿಗೆ ಹೊಂದುತ್ತಿರುವುದರ ನಡುವೆ, ಜನರ ಹಾದಿ ತಪ್ಪಿಸುವ ಜಾಹೀರಾತುಗಳನ್ನು ಕಡಿಮೆ ಮಾಡುವುದು ಮತ್ತು ಗ್ರಾಹಕರ ಹಿತ ಕಾಯುವ ದೃಷ್ಟಿಯಿಂದ ಹೊಸ ನಿಯಮ ರೂಪಿಸಲಾಗಿದೆ. ಸಾಮಾಜಿಕ ಮಾಧ್ಯಮ ಪ್ರಭಾವ ಉದ್ಯಮ ವಾರ್ಷಿಕ ಶೇ 20ರ ಬೆಳವಣಿಗೆ ಕಾಣುತ್ತಿದ್ದು, 2025ರ ವೇಳೆಗೆ ವಾರ್ಷಿಕ 2,800 ಕೋಟಿ ರೂ. ವಹಿವಾಟು ನಡೆಸುವ ನಿರೀಕ್ಷೆ ಇದೆ.

ಹೊಸ ಕಾನೂನಿಗೆ ‘ಎಂಡೋರ್ಸ್​​ಮೆಂಟ್ ನೋ ಹೌ’ಸ್ – ಫಾರ್ ಸೆಲೆಬ್ರಿಟೀಸ್, ಇನ್​ಫ್ಲುಯೆನ್ಸರ್ಸ್ ಆ್ಯಂಡ್ ವರ್ಚುವಲ್ ಮೀಡಿಯಾ ಇನ್​ಫ್ಲುಯೆನ್ಸರ್ಸ್ (ಅವತಾರ್ ಆರ್ ಕಂಪ್ಯೂಟರ್ ಜನರೇಟೆಡ್ ಕ್ಯಾರಕ್ಟರ್) ಆನ್ ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್ಸ್’ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ನಾಮಕರಣ ಮಾಡಿದೆ. ಒಂದು ವೇಳೆ ಕಾನೂನನ್ನು ಉಲ್ಲಂಘಿಸಿದಲ್ಲಿ, 2019ರ ಗ್ರಾಹಕ ರಕ್ಷಣಾ ಕಾಯ್ದೆಯಲ್ಲಿ ಉಲ್ಲೇಖಿಸಿರುವಂತೆ ಹಾದಿತಪ್ಪಿಸುವ ಜಾಹೀರಾತಿಗೆ ಸೂಚಿಸಲಾಗಿರುವ ದಂಡವನ್ನೇ ವಿಧಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Social media rules: ಸಾಮಾಜಿಕ ಮಾಧ್ಯಮಗಳ ಹೊಸ ನೀತಿ ನಿರೂಪಣೆಗೆ ಸರ್ಕಾರದಿಂದ ನೇಮಿಸಿದ ಸಮಿತಿಯನ್ನು ಬಳಕೆದಾರರು ಸಂಪರ್ಕ ಸಾಧ್ಯತೆ

ಹೊಸ ಕಾನೂನಿನಲ್ಲೇನಿದೆ?

ಕಾನೂನಿನ ಅಡಿ, ಉತ್ಪಾದಕರು, ಜಾಹೀರಾತುದಾರರು ಮತ್ತು ಪ್ರಭಾವಿಗಳಿಗೆ 10 ಲಕ್ಷ ರೂ. ವರೆಗೆ ದಂಡ ವಿಧಿಸುವ ಅಧಿಕಾರ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರಕ್ಕೆ (CCPA) ಇದೆ. ಮರುಕಳಿಸಿದ ಅಪರಾಧಕ್ಕೆ 50 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಹಾದಿತಪ್ಪಿಸುವ ಜಾಹೀರಾತನ್ನು ಅನುಮೋದಿಸುವವರ ಮೇಲೆ 1 ವರ್ಷದವರೆಗೆ ನಿಷೇಧ ಹೇರಲು ಮತ್ತು ಮರುಕಳಿಸಿದ ತಪ್ಪುಗಳಿಗಾಗಿ ನಿಷೇಧವನ್ನು 3 ವರ್ಷಗಳವರೆಗೆ ವಿಸ್ತರಿಸಬಹಲು ಸಿಸಿಪಿಎಗೆ ಅಧಿಕಾರವಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ