Train Fare Hike: ಇಂದಿನಿಂದ ರೈಲು ಪ್ರಯಾಣ ದುಬಾರಿ, ಹೊಸ ಟಿಕೆಟ್ ದರಗಳ ಕುರಿತು ಇಲ್ಲಿದೆ ಮಾಹಿತಿ

ಭಾರತೀಯ ರೈಲ್ವೆ ಇಲಾಖೆ ಡಿಸೆಂಬರ್ 26 ರಿಂದ ದೇಶಾದ್ಯಂತ ರೈಲು ಪ್ರಯಾಣ ದರ ಹೆಚ್ಚಿಸಿದೆ. ಉಪನಗರ ರೈಲುಗಳನ್ನು ಹೊರತುಪಡಿಸಿ, ದೀರ್ಘ ಪ್ರಯಾಣದ ಟಿಕೆಟ್‌ಗಳು ದುಬಾರಿಯಾಗಲಿವೆ. ಸಾಮಾನ್ಯ, ಮೇಲ್, ಎಕ್ಸ್‌ಪ್ರೆಸ್, ಎಸಿ ವಿಭಾಗಗಳಲ್ಲಿ ಪ್ರತಿ ಕಿಲೋಮೀಟರ್‌ಗೆ 1 ರಿಂದ 2 ಪೈಸೆ ಏರಿಕೆ ಮಾಡಲಾಗಿದೆ. ಈ ವರ್ಷದಲ್ಲಿ ಇದು ಎರಡನೇ ದರ ಹೆಚ್ಚಳವಾಗಿದ್ದು, ರೈಲ್ವೆಗೆ 600 ಕೋಟಿ ರೂ. ಆದಾಯ ಗಳಿಸುವ ಗುರಿ ಹೊಂದಿದೆ.

Train Fare Hike: ಇಂದಿನಿಂದ ರೈಲು ಪ್ರಯಾಣ ದುಬಾರಿ, ಹೊಸ ಟಿಕೆಟ್ ದರಗಳ ಕುರಿತು ಇಲ್ಲಿದೆ ಮಾಹಿತಿ
ರೈಲು

Updated on: Dec 26, 2025 | 8:16 AM

ನವದೆಹಲಿ, ಡಿಸೆಂಬರ್ 26: ದೇಶಾದ್ಯಂತ ಇಂದಿನಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆ ಪ್ರಯಾಣ ದರ ಏರಿಕೆ ಮಾಡಲಾಗಿದೆ. ಈ ಮೂಲಕ ರೈಲು(Train) ಪ್ರಯಾಣ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುವಂತಾಗಿದ್ದು ರೈಲು ಪ್ರಯಾಣ ದುಬಾರಿಯಾಗಲಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲವಾದರೂ, ದೀರ್ಘ ಪ್ರಯಾಣದ ದರವನ್ನು ರೈಲ್ವೆ ಸಚಿವಾಲಯ ಹೆಚ್ಚಳ ಮಾಡಿದೆ. ಪ್ರತಿ 500 ಕಿ.ಮೀ.ಗೆ 10 ರೂ. ಹೆಚ್ಚಳ ಮಾಡಲಾಗಿದೆ.

ಡಿಸೆಂಬರ್ 21 ರಂದು ಸಚಿವಾಲಯವು ಪ್ರಯಾಣಿಕರ ದರದಲ್ಲಿ ಹೆಚ್ಚಳವನ್ನು ಘೋಷಿಸಿದ್ದು, ಇದು ಡಿಸೆಂಬರ್ 26 ರಿಂದ ಜಾರಿಗೆ ಬರಲಿದೆ ಎಂಬುದನ್ನು ಗಮನಿಸಬೇಕು. ಈ ವರ್ಷ ರೈಲು ದರದಲ್ಲಿ ಇದು ಎರಡನೇ ಹೆಚ್ಚಳವಾಗಿದೆ. ಹಿಂದಿನ ಹೆಚ್ಚಳ ಜುಲೈನಲ್ಲಿ ಆಗಿತ್ತು.

215 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕಾಗಿ, ಸಾಮಾನ್ಯ ವರ್ಗದಲ್ಲಿ ಪ್ರತಿ ಕಿಲೋಮೀಟರಿಗೆ ಒಂದು ಪೈಸೆ, ಮೇಲ್, ಎಕ್ಸ್‌ಪ್ರೆಸ್ ರೈಲುಗಳ ಎಸಿ ಅಲ್ಲದ ವರ್ಗದಲ್ಲಿ ಪ್ರತಿ ಕಿಲೋಮೀಟರಿಗೆ ಎರಡು ಪೈಸೆ ಮತ್ತು ಎಲ್ಲಾ ರೈಲುಗಳ ಎಸಿ ವರ್ಗದ ದರವನ್ನು ಹೆಚ್ಚಿಸಲಾಗಿದೆ. ಮುಂದಿನ ಪ್ರಯಾಣಕ್ಕಾಗಿ ಡಿಸೆಂಬರ್ 26 ರ ಮೊದಲು ಬುಕ್ ಮಾಡಿದ ಟಿಕೆಟ್‌ಗಳಿಗೆ ಈ ಬದಲಾವಣೆ ಅನ್ವಯಿಸುವುದಿಲ್ಲ.

ಮತ್ತಷ್ಟು ಓದಿ: ಟ್ರೈನ್ ಟಿಕೆಟ್ ಬೆಲೆ ಪ್ರತೀ ಕಿಮೀಗೆ 1-2 ಪೈಸೆ ಹೆಚ್ಚಳ; ಡಿ. 26ರಿಂದ ಹೊಸ ದರ ಜಾರಿ

215 ಕಿಲೋಮೀಟರ್ ದೂರದವರೆಗಿನ ಸಾಮಾನ್ಯ ದರ್ಜೆಯ ಟಿಕೆಟ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ 215 ಕಿಮೀಗಿಂತ ಹೆಚ್ಚಿನ ದೂರಕ್ಕೆ ಪ್ರತಿ ಕಿಮೀಗೆ 1 ಪೈಸೆ ವೆಚ್ಚವಾಗುತ್ತದೆ. ಮೇಲ್ ಅಥವಾ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಹವಾನಿಯಂತ್ರಿತವಲ್ಲದ ಕೋಚ್‌ಗಳಿಗೆ, ಪ್ರತಿ ಕಿಮೀಗೆ 2 ಪೈಸೆ ಹೆಚ್ಚಳವಾಗಲಿದೆ. ಹವಾನಿಯಂತ್ರಿತ ಕೋಚ್‌ಗಳಲ್ಲಿ ಪ್ರಯಾಣದ ವೆಚ್ಚವನ್ನು ಸಹ ಪ್ರತಿ ಕಿಮೀಗೆ 2 ಪೈಸೆ ಹೆಚ್ಚಿಸಲಾಗಿದೆ.

ಹೊಸ ದರಗಳು ಜಾರಿಗೆ ಬಂದ ನಂತರ ಹವಾನಿಯಂತ್ರಿತವಲ್ಲದ ಬೋಗಿಗಳಲ್ಲಿ 500 ಕಿ.ಮೀ ಪ್ರಯಾಣಕ್ಕೆ 10 ರೂ. ಹೆಚ್ಚಾಗಲಿದೆ. ಇದರಿಂದ ಪ್ರಯಾಣಿಕರಿಗೆ ಹೊರಯಾಗುವುದು ಖಚಿತವಾಗಿದೆ.

ತೇಜಸ್ ರಾಜಧಾನಿ, ರಾಜಧಾನಿ, ಶತಾಬ್ದಿ, ದುರಂತೋ, ವಂದೇ ಭಾರತ್, ಹಮ್ಸಾಫರ್, ಅಮೃತ್ ಭಾರತ್, ತೇಜಸ್, ಮಹಾಮಾನ, ಗತಿಮಾನ್, ಅಂತ್ಯೋದಯ, ಗರೀಬ್ ರಥ, ಜನ ಶತಾಬ್ದಿ, ಯುವ ಎಕ್ಸ್‌ಪ್ರೆಸ್, ನಮೋ ಭಾರತ್ ರಾಪಿಡ್ ರೈಲ್ ಸೇರಿದಂತೆ ಪ್ರಮುಖ ರೈಲುಗಳ ದರ ಬದಲಾಗಲಿದೆ.

ಕಳೆದ ದಶಕದಲ್ಲಿ ರೈಲ್ವೆ ತನ್ನ ಜಾಲ ಮತ್ತು ಕಾರ್ಯಾಚರಣೆಗಳನ್ನು ಗಮನಾರ್ಹವಾಗಿ ವಿಸ್ತರಿಸಿದೆ ಮತ್ತು ತನ್ನ ಮಾನವಶಕ್ತಿಯನ್ನು ಹೆಚ್ಚಿಸುತ್ತಿದೆ ಈ ಹಿನ್ನೆಯಲ್ಲಿ ಇತ್ತೀಚಿನ ಪ್ರಯಾಣ ದರ ಹೆಚ್ಚಳ ಮಾಡಿದ್ದು ರೈಲ್ವೆಯ ಆದಾಯವನ್ನು ವಾರ್ಷಿಕವಾಗಿ 600 ಕೋಟಿ ರೂ.ಗಳಷ್ಟು ಹೆಚ್ಚಿಸಿಕೊಳ್ಳುವ ಗುರಿ ಹೊಂದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ