AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವರಿಗೆ ಮೋದಿ ಸರ್ಕಾರದಿಂದ ಹೊಸ ವರ್ಷದ ಉಡುಗೊರೆ, ಉಚಿತ ಆಹಾರ ಧಾನ್ಯ ವಿತರಣೆಗೆ ತೀರ್ಮಾನ

ಹೊಸ ವರ್ಷಕ್ಕೆ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಸಿಹಿ ಸುದ್ದಿ ನೀಡಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರಧಾನ್ಯ ಸಿಗಲಿದೆ,

ಬಡವರಿಗೆ ಮೋದಿ ಸರ್ಕಾರದಿಂದ ಹೊಸ ವರ್ಷದ ಉಡುಗೊರೆ, ಉಚಿತ ಆಹಾರ ಧಾನ್ಯ ವಿತರಣೆಗೆ ತೀರ್ಮಾನ
ನರೇಂದ್ರ ಮೋದಿ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Dec 23, 2022 | 9:56 PM

Share

ನವದೆಹಲಿ: ನರೇಂದ್ರ ಮೋದಿ(Narendra Modi) ನೇತೃತ್ವದ ಸರ್ಕಾರ ದೇಶದ ಬಡ ಜನರಿಗೆ ಹೊಸ ವರ್ಷದ ಉಡುಗೊರೆ(New year gift) ನೀಡಿದೆ. ದೇಶದ ಬಡ ಜನರಿಗೆ ಉಚಿತ ಆಹಾರ ಧಾನ್ಯಗಳ ವಿತರಣೆ ಮುಂದುವರಿಸಲು ಇಂದು(ಡಿಸೆಂಬರ್ 23) ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಇದರಿಂದ ವರ್ಷಕ್ಕೆ 81.3 ಕೋಟಿ ಜನರು ಉಚಿತ ಆಹಾರಧಾನ್ಯ  (free foodgrains) ಪಡೆಯಲಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 81.3 ಕೋಟಿ ಬಡವರಿಗೆ ಒಂದು ವರ್ಷ ಉಚಿತವಾಗಿ ಪಡಿತರ ವಿತರಣೆ ವಿಸ್ತರಿಸಲು ಇಂದು(ಶುಕ್ರವಾರ) ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದು, ಮುಂದಿನ ವರ್ಷ ಅಂದ್ರೆ ಡಿಸೆಂಬರ್ 2023 ರವರೆಗೆ ವಿತರಿಸಲಾಗುತ್ತದೆ. ಇದಕ್ಕೆ ಸುಮಾರು 2 ಲಕ್ಷ ಕೋಟಿ ರೂಪಾಯಿ ವೆಚ್ಚವಾಗಲಿದ್ದು, ವೆಚ್ಚದ ಹೊರೆಯನ್ನು ಕೇಂದ್ರ ಸರ್ಕಾರ ಭರಿಸಲಿದೆ.

ಇನ್ನು ಸಚಿವ ಸಂಪುಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪಿಯೂಷ್ ಗೋಯಲ್, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರಧಾನ್ಯ ಸಿಗಲಿದೆ. ಅವರು ಡಿಸೆಂಬರ್ 2023 ರವರೆಗೆ ಆಹಾರ ಧಾನ್ಯಗಳನ್ನು ಪಡೆಯಲು ಒಂದು ರೂಪಾಯಿಯನ್ನು ಪಾವತಿಸಬೇಕಾಗಿಲ್ಲ. ಇದಕ್ಕಾಗಿ ಸರ್ಕಾರವು ವರ್ಷಕ್ಕೆ ಸುಮಾರು 2 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತದೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:44 pm, Fri, 23 December 22