
ಥಾಣೆ, ಏಪ್ರಿಲ್ 21: ಥಾಣೆ ಜಿಲ್ಲೆಯ ಭಿವಾಂಡಿ ಪ್ರದೇಶದಲ್ಲಿರುವ ಬರೋಡಿ ಗ್ರಾಮದಲ್ಲಿ ಸುಡುತ್ತಿರುವ ಕಸದ ರಾಶಿಯ ಬಳಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಆತಂಕಕಾರಿ ಘಟನೆಯೊಂದು ನಡೆದಿದೆ. ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಸ್ಥಳೀಯ ನಿವಾಸಿಗಳು ವಾಕಿಂಗ್ ಮಾಡುವಾಗ ಕಸದ ರಾಶಿಯ ಬಳಿ ಮಗುವೊಂದು ಕಂಡಿದೆ. ಆಗ ಅಲ್ಲಿ ಹೋಗಿ ನೋಡಿದಾಗ ನವಜಾತ ಶಿಶುವಿನ ಶವ ಪತ್ತೆಯಾಗಿದೆ ಎಂದು ನರ್ಪೋಲಿ ಪೊಲೀಸ್ ಠಾಣೆಯ ಅಧಿಕಾರಿಗಳು ದೃಢಪಡಿಸಿದ್ದಾರೆ.
ಅಧಿಕಾರಿಯ ಪ್ರಕಾರ, ಶವ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರ ಒಂದು ತಂಡವು ಸ್ಥಳಕ್ಕೆ ಕೂಡಲೆ ತಲುಪಿತು. ಆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಯಿತು.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಆರೋಪಿಯ ಬೆತ್ತಲೆ ಮೆರವಣಿಗೆ, ಎತ್ತಿನ ಗಾಡಿಗೆ ಕಟ್ಟಿ ಹಲ್ಲೆ
ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 94 (ಮೃತ ದೇಹವನ್ನು ರಹಸ್ಯವಾಗಿ ವಿಲೇವಾರಿ ಮಾಡುವ ಮೂಲಕ ಜನನವನ್ನು ಮರೆಮಾಚುವುದು) ಅಡಿಯಲ್ಲಿ ಪೊಲೀಸರು ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಮುಂದುವರೆದಂತೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ