AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಹೇಗೆ ಮನಸ್ಸು ಬಂತು: ಶಿಶುವಿನ ಬಾಯಿಗೆ ಗಮ್ ಹಾಕಿ, ಕಲ್ಲು ತುಂಬಿ ಕಾಡಿನಲ್ಲಿ ಎಸೆದು ಹೋದ ಪಾಪಿಗಳು

ಶಿಶುವಿನ ಬಾಯಿಗೆ ಗಮ್ ಹಾಕಿ ಅಂಟಿಸಿ, ಅಳಬಾರದೆಂದು ಬಾಯೊಳಗೆ ಕಲ್ಲು ಹಾಕಿ ತುಂಬಿ, ಕಾಡಿನಲ್ಲಿ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದ ಭಿಲ್ವಾರದಲ್ಲಿ ನಡೆದಿದೆ. ಕಾಡಿನಲ್ಲಿ ದನ ಕಾಯುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಶಿಶು ಬಿದ್ದಿದ್ದು, ಕೂಡಲೇ ಮಗುವಿನ ಬಾಯಿ ಹೇಗೋ ತೆರೆದು, ಕಲ್ಲು ಹೊರ ತೆಗೆದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಅಲ್ಲಿ ಬಿಟ್ಟು ಹೋದವರರ್ಯಾರು, ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

ಅದ್ಹೇಗೆ ಮನಸ್ಸು ಬಂತು: ಶಿಶುವಿನ ಬಾಯಿಗೆ ಗಮ್ ಹಾಕಿ, ಕಲ್ಲು ತುಂಬಿ ಕಾಡಿನಲ್ಲಿ ಎಸೆದು ಹೋದ ಪಾಪಿಗಳು
ಮಗುImage Credit source: Google
ನಯನಾ ರಾಜೀವ್
|

Updated on: Sep 24, 2025 | 11:24 AM

Share

ರಾಜಸ್ಥಾನ, ಸೆಪ್ಟೆಂಬರ್ 24: ರಾಜಸ್ಥಾನದ ಭಿಲ್ವಾರದಲ್ಲಿ 15 ದಿನಗಳ ಶಿಶು(Baby) ಪತ್ತೆಯಾಗಿದೆ. ಅದರ ಪುಟ್ಟ ತುಟಿಗಳಿಗೆ ಗಮ್ ಅಂಡಿಸಲಾಗಿತ್ತು, ಅಳಲು ಆಗದಂತೆ ಬಾಯಿಗೆ ಕಲ್ಲುಗಳನ್ನು ತುಂಬಿಸಿ ಅಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ನಡೆದಿದೆ.ವ್ಯಕ್ತಿಯೊಬ್ಬರು ಶಿಶುವನ್ನು ಕಂಡು, ಹೇಗೋ ಮಾಡಿ ಬಾಯಿ ತೆರೆಯಲು ಯಶಸ್ವಿಯಾದರೂ ಕೂಡ ಬಾಯೊಳಗೆ ತುಂಬಿದ್ದ ಕಲ್ಲು ನೋಡಿ ದಿಗ್ಭ್ರಮೆಗೊಂಡಿದ್ದಾರೆ.

ಮಗುವನ್ನು ಕೊಲ್ಲಲು ಅದೆಷ್ಟೇ ಪ್ರಯತ್ನಗಳು ನಡೆದಿದ್ದರೂ, ಅದೃಷ್ಟವಶಾತ್ ಅದು ಬದುಕುಳಿದಿದೆ. ದನ ಕಾಯುವವರೊಬ್ಬರು ಕಾಡಿನಲ್ಲಿ ಮಗುವನ್ನು ನೋಡಿ ಅದರ ಬಾಯಿಯಿಂದ ಕಲ್ಲನ್ನು ಹೊರತೆಗೆದರು. ತಕ್ಷಣ ಅವನನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಮಗು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದೆ.

ಭಿಲ್ವಾರದ ಮಂಡಲಗಢ ವಿಧಾನಸಭಾ ಕ್ಷೇತ್ರದ ಬಿಜೋಲಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ. ಸೀತಾ ಕುಂಡ್ ದೇವಾಲಯದ ಮುಂಭಾಗದ ರಸ್ತೆಯ ಪಕ್ಕದ ಕಾಡಿನಲ್ಲಿ ಮಗು ಪತ್ತೆಯಾಗಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ಮತ್ತಷ್ಟು ಓದಿ: Viral: ಬಾತ್ ರೂಮ್‌ನಲ್ಲೇ ಹೆರಿಗೆ; ನವಜಾತ ಶಿಶುವನ್ನು ಬಕೆಟ್‌ನಲ್ಲೇ ತುಂಬಿಸಿಟ್ಟು ಎಸ್ಕೇಪ್ ಆದ ಬಾಣಂತಿ

ಪೊಲೀಸರು  ಪ್ರಕರಣದ ತನಿಖೆ ನಡೆಸುತ್ತಿದ್ದು, ಮಗುವಿನ ಪೋಷಕರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಹತ್ತಿರದ ಆಸ್ಪತ್ರೆಗೆಯಲ್ಲಿ ಆಗಿರುವ ಹೆರಿಗೆಗಳ ಬಗ್ಗೆಯೂ ಅವರು ಪರಿಶೀಲಿಸುತ್ತಿದ್ದಾರೆ. ಸುತ್ತಮುತ್ತಲಿನ ಹಳ್ಳಿಗಳಲ್ಲಿರುವ ಜನರನ್ನು ಸಹ ಅವರು ಹುಡುಕುತ್ತಿದ್ದಾರೆ ಮತ್ತು ವಿಚಾರಣೆ ಮಾಡುತ್ತಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಯಾರು ಆ ಕಾಡಿನಲ್ಲಿ ಮಗುವನ್ನು ಎಸೆದು ಹೋಗಿರಬಹುದು ಎಂಬುದರ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ಮಗುವಿನ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ