NewsClick ಪ್ರಕರಣ: ಸರ್ಕಾರಿ ಸಾಕ್ಷಿಯಾಗಲು ಅನುಮತಿ ಕೋರಿ ನ್ಯಾಯಾಲಯದ ಮೊರೆ ಹೋದ ಅಮಿತ್ ಚಕ್ರವರ್ತಿ

ನ್ಯೂಸ್ ಕ್ಲಿಕ್ ಪ್ರಕರಣದಲ್ಲಿ ಅಮಿತ್ ಚಕ್ರವರ್ತಿ ಮತ್ತು ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ವಿರುದ್ಧದ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ದೆಹಲಿ ಪೊಲೀಸರಿಗೆ 60 ದಿನಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

NewsClick ಪ್ರಕರಣ: ಸರ್ಕಾರಿ ಸಾಕ್ಷಿಯಾಗಲು ಅನುಮತಿ ಕೋರಿ ನ್ಯಾಯಾಲಯದ ಮೊರೆ ಹೋದ ಅಮಿತ್ ಚಕ್ರವರ್ತಿ
ಅಮಿತ್ ಚಕ್ರವರ್ತಿ
Follow us
ರಶ್ಮಿ ಕಲ್ಲಕಟ್ಟ
|

Updated on: Dec 25, 2023 | 3:17 PM

ದೆಹಲಿ ಡಿಸೆಂಬರ್ 25: ಚೀನಾ ಪರ ಪ್ರಚಾರ ಮಾಡಲು ಹಣ ಪಡೆಯಲಾಗಿದೆ ಎಂದು ಆರೋಪಿಸಿ ನ್ಯೂಸ್ ಕ್ಲಿಕ್ ಪೋರ್ಟಲ್ (NewsClick case) ವಿರುದ್ಧ ಯುಎಪಿಎ (UAPA)ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ನ್ಯೂಸ್‌ಕ್ಲಿಕ್‌ನ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ (Amit Chakravarty) ಅವರು ಸರ್ಕಾರಿ ಸಾಕ್ಷಿಯಾಗಲು ಅನುಮತಿ ಕೋರಿ ದೆಹಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ವಿಶೇಷ ನ್ಯಾಯಾಧೀಶ ಹರ್ದೀಪ್ ಕೌರ್ ಮುಂದೆ ಅಮಿತ್ ಚಕ್ರವರ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಕ್ಷಮೆಯಾಚಿಸಿದ ಅವರು, ತಮ್ಮಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಲು ಸಿದ್ಧ ಎಂದು ದೆಹಲಿ ಪೊಲೀಸರಿಗೆ ತಿಳಿಸಿದ್ದಾರೆ. ಚಕ್ರವರ್ತಿ ಅವರ ಹೇಳಿಕೆಯನ್ನು ದಾಖಲಿಸಲು ನ್ಯಾಯಾಧೀಶರು ಮ್ಯಾಜಿಸ್ಟ್ರಿಯಲ್ ನ್ಯಾಯಾಲಯಕ್ಕೆ ಕಳುಹಿಸಿದ್ದಾರೆ.

ಚಕ್ರವರ್ತಿ ಮತ್ತು ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ವಿರುದ್ಧದ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ದೆಹಲಿ ಪೊಲೀಸರಿಗೆ 60 ದಿನಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ನ್ಯೂಸ್ ಪೋರ್ಟಲ್‌ಗೆ ಸಂಬಂಧಿಸಿದ ಪತ್ರಕರ್ತರ ನಿವಾಸಗಳು ಸೇರಿದಂತೆ ಹಲವು ಸ್ಥಳಗಳಲ್ಲಿ ಪೊಲೀಸರು ದಾಳಿಗಳನ್ನು ಮುಕ್ತಾಯಗೊಳಿಸಿದ ನಂತರ ಸಂಸ್ಥಾಪಕ ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥ ಇಬ್ಬರನ್ನೂ ಅಕ್ಟೋಬರ್‌ನಲ್ಲಿ ಬಂಧಿಸಲಾಯಿತು. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಅವರ ಮೇಲೆ ಭಯೋತ್ಪಾದನೆ ಆರೋಪ ಹೊರಿಸಲಾಯಿತು. ಏತನ್ಮಧ್ಯೆ, ಜಾರಿ ನಿರ್ದೇಶನಾಲಯ (ಇಡಿ) ಸಹ ಸಂಸ್ಥೆಯ ಆವರಣದಲ್ಲಿ ತನ್ನ ಶೋಧವನ್ನು ನಡೆಸಿತು. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಅಡಿಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಕೂಡ ಪ್ರಕರಣ ದಾಖಲಿಸಿದೆ.

ಇದನ್ನೂ ಓದಿ: ಯುಎಪಿಎ ಪ್ರಕರಣ: ಬಂಧನದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

ಕಮ್ಯುನಿಸ್ಟ್ ಪಾರ್ಟಿ ಆಫ್ ಚೈನಾ (CPC) ಯ ಪ್ರಚಾರ ಅಂಗದೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆಂದು ಆರೋಪಿಸಲಾದ ಯುಎಸ್ ಮೂಲದ ಮಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್‌ನಿಂದ ನ್ಯೂಸ್‌ಕ್ಲಿಕ್ ₹38 ಕೋಟಿ ಪಡೆದಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿಯ ನಂತರ ತನಿಖೆ ಪ್ರಾರಂಭವಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!