ಯುಎಪಿಎ ಪ್ರಕರಣ: ಬಂಧನದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

NewsClick founder Prabir Purkayastha: ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಪುರಕಾಯಸ್ಥ ಅವರ ವಕೀಲ ಕಪಿಲ್ ಸಿಬಲ್ ಅವರಲ್ಲಿ ಈ ಬಗ್ಗೆ ಕೋರ್ಟ್ ಗೆ ಸಲ್ಲಿಕೆ ಮಾಡಲು ಹೇಳಿದ್ದು ತುರ್ತು ವಿಚಾರಣೆಯನ್ನು ನಿರ್ಧರಿಸುವುದಾಗಿ ಹೇಳಿದೆ.

ಯುಎಪಿಎ ಪ್ರಕರಣ: ಬಂಧನದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋದ ನ್ಯೂಸ್‌ಕ್ಲಿಕ್ ಸಂಸ್ಥಾಪಕ
ಪ್ರಬೀರ್ ಪುರಕಾಯಸ್ಥ
Follow us
ರಶ್ಮಿ ಕಲ್ಲಕಟ್ಟ
|

Updated on: Oct 16, 2023 | 12:44 PM

ದೆಹಲಿ ಅಕ್ಟೋಬರ್ 16: ಯುಎಪಿಎ ಪ್ರಕರಣಕ್ಕೆ(UAPA case) ಸಂಬಂಧಿಸಿ ತಮ್ಮ ಬಂಧನವನ್ನು ಹಿಂಪಡೆಯಲು ಮತ್ತು ರಿಮಾಂಡ್‌ಗೆ ನಿರಾಕರಿಸಿರುವ ದೆಹಲಿ ಹೈಕೋರ್ಟ್ (Delhi High Court) ಆದೇಶವನ್ನು ಪ್ರಶ್ನಿಸಿ ನ್ಯೂಸ್‌ಕ್ಲಿಕ್ (NewsClick)ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ (Prabir Purkayastha) ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಪುರಕಾಯಸ್ಥ ಅವರ ವಕೀಲ ಕಪಿಲ್ ಸಿಬಲ್ ಅವರಲ್ಲಿ ಈ ಬಗ್ಗೆ ಕೋರ್ಟ್ ಗೆ ಸಲ್ಲಿಕೆ ಮಾಡಲು ಹೇಳಿದ್ದು ತುರ್ತು ವಿಚಾರಣೆಯನ್ನು ನಿರ್ಧರಿಸುವುದಾಗಿ ಹೇಳಿದೆ.

ಇದು ನ್ಯೂಸ್‌ಕ್ಲಿಕ್ ವಿಷಯವಾಗಿದೆ. ಪತ್ರಕರ್ತರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇಲ್ಲಿ ಆರೋಪಿಗಳಲ್ಲಿ ಒಬ್ಬರು 75 ವರ್ಷದ ವ್ಯಕ್ತಿ” ಎಂದು ಸಿಬಲ್ ಹೇಳಿದ್ದಾರೆ.

ಕಟ್ಟುನಿಟ್ಟಾದ ಭಯೋತ್ಪಾದನಾ-ವಿರೋಧಿ ಕಾನೂನು ಯುಎಪಿಎಗೆ ಬಂಧನದ ಸಮಯದಲ್ಲಿ ಬಂಧನದ ಲಿಖಿತ ಆಧಾರಗಳನ್ನು ಒದಗಿಸುವ ಅಗತ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದ್ದು,, ಪುರಕಾಯಸ್ಥ ಮತ್ತು ಚಕ್ರವರ್ತಿ ಅವರ ಅರ್ಜಿ ತಿರಸ್ಕರಿಸಿತ್ತು. ಯಾವುದೇ ಗೌಪ್ಯ ಮಾಹಿತಿಯನ್ನು ತೆಗೆದುಹಾಕಿದ ನಂತರ ಆರೋಪಿಗಳಿಗೆ ಬಂಧನದ ಲಿಖಿತ ಆಧಾರವನ್ನು ಒದಗಿಸಲು ಪ್ರಾರಂಭಿಸುವಂತೆ ನ್ಯಾಯಾಲಯವು ಪೊಲೀಸರನ್ನು ಒತ್ತಾಯಿಸಿತು.

ಬಾಕಿ ಉಳಿದಿರುವ ಅರ್ಜಿಗಳ ಜೊತೆಗೆ ಯಾವುದೇ ಅರ್ಹತೆಯಿಲ್ಲದ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. “ಇಡೀ ಸಮಸ್ಯೆಯನ್ನು ಸರಿಯಾದ ದೃಷ್ಟಿಕೋನದಿಂದ ಪರಿಶೀಲಿಸಿದ ನಂತರ, ಬಂಧನದ ಆಧಾರವು ನಿಜವಾಗಿ ಕಂಡುಬಂದಿದೆ. ಬಂಧನದ ನಂತರ ಸಾಧ್ಯವಾದಷ್ಟು ಬೇಗ ಅರ್ಜಿದಾರರಿಗೆ ತಿಳಿಸಲಾಗಿದೆ ಅದರಂತೆ, ಯಾವುದೇ ಕಾರ್ಯವಿಧಾನದ ದೌರ್ಬಲ್ಯ ಅಥವಾ UAPA ಯ ಸೆಕ್ಷನ್ 43B ಅಥವಾ ಸಂವಿಧಾನದ 22(1) ವಿಧಿಗಳ ಉಲ್ಲಂಘನೆಯಾಗಿ ಕಂಡುಬರುವುದಿಲ್ಲ. ಹಾಗಾಗಿ ಈ ಬಂಧನವು ಕಾನೂನಿನ ಅನುಸಾರ ನಡೆದಿದ್ದು ಎಂದು ನ್ಯಾಯಾಲಯ ಹೇಳಿತ್ತು.

ಅಕ್ಟೋಬರ್ 3 ರಂದು, ದೆಹಲಿ ಪೋಲೀಸ್ ವಿಶೇಷ ಘಟಕ ಭಾರತದಲ್ಲಿ ಚೀನಾ ಪರ ಪ್ರಚಾರವನ್ನು ಹರಡಲು ಹಣವನ್ನು ಪಡೆದ ಆರೋಪದಡಿಯಲ್ಲಿ ಪುರಕಾಯಸ್ಥ ಮತ್ತು ಚಕ್ರವರ್ತಿಯನ್ನು ಯುಎಪಿಎ ಆರೋಪದ ಅಡಿಯಲ್ಲಿ ಬಂಧಿಸಿತು.

ಇದನ್ನೂ ಓದಿ: ಎಫ್‌ಸಿಆರ್‌ಎ ಉಲ್ಲಂಘನೆ ಆರೋಪ: ನ್ಯೂಸ್‌ಕ್ಲಿಕ್ ವಿರುದ್ಧ ಸಿಬಿಐ ಹೊಸ ಎಫ್‌ಐಆರ್

ನ್ಯೂಸ್‌ಕ್ಲಿಕ್ ಚೀನಾದಿಂದ ದೊಡ್ಡ ಮೊತ್ತದ ಹಣವನ್ನು ಸ್ವೀಕರಿಸಿದೆ ಎಂದು ಎಫ್‌ಐಆರ್ ಆರೋಪಿಸಿದೆ. ಇದು ಭಾರತದ ಸಾರ್ವಭೌಮತೆಗೆ ಧಕ್ಕೆ ತರಲು ಮತ್ತು ಅದರ ನಾಗರಿಕರ ನಡುವೆ ವೈಷಮ್ಯವನ್ನು ಬಿತ್ತಲು ಉದ್ದೇಶಿಸಿದೆ. 2019 ರ ಲೋಕಸಭಾ ಚುನಾವಣೆಯನ್ನು ಹಾಳು ಮಾಡಲು ಪುರಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (PADS) ಎಂಬ ಗುಂಪಿನೊಂದಿಗೆ ಕೆಲಸ ಮಾಡಿದ್ದಾರೆ ಎಂದು ಎಫ್‌ಐಆರ್ ಆರೋಪಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ