Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಕರ್ನಾಟಕದಲ್ಲಿ ಮುಂದುವರಿದ ಚಳಿ; ಮುಂದಿನ ಕೆಲವು ದಿನಗಳವರೆಗೆ ಉತ್ತರ ಭಾರತದಲ್ಲಿ ಶೀತಗಾಳಿ

Weather Forecast: ಗುಜರಾತ್‌ನಲ್ಲಿ ಕನಿಷ್ಠ ತಾಪಮಾನವು 5-7 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿದೆ. ಅದರಂತೆ ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶದಲ್ಲಿ 3-5 ಡಿಗ್ರಿ ಸೆಲ್ಸಿಯಸ್‌ ಮತ್ತು ಉತ್ತರ ಪ್ರದೇಶ, ಬಿಹಾರ, ಒಡಿಶಾ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಡಿಗ್ರಿ ಸೆಲ್ಸಿಯಸ್‌ ಮಳೆಯಾಗಿದೆ.

Weather Today: ಕರ್ನಾಟಕದಲ್ಲಿ ಮುಂದುವರಿದ ಚಳಿ; ಮುಂದಿನ ಕೆಲವು ದಿನಗಳವರೆಗೆ ಉತ್ತರ ಭಾರತದಲ್ಲಿ ಶೀತಗಾಳಿ
ಮಳೆಯ ಚಿತ್ರ
Follow us
TV9 Web
| Updated By: preethi shettigar

Updated on: Jan 24, 2022 | 6:06 AM

ದೆಹಲಿ: ಮುಂದಿನ ಕೆಲವು ದಿನಗಳ ಕಾಲ ದೆಹಲಿ, ಪಂಜಾಬ್, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಚಳಿಗಾಳಿ ಅಥವಾ ಶೀತ ಗಾಳಿ ಇರಲಿದೆ ಎಂದು ರಾಷ್ಟ್ರೀಯ ಹವಾಮಾನ ಮುನ್ಸೂಚನಾ ಸಂಸ್ಥೆ, ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ದಿನೇ ದಿನೇ ಚಳಿ ಹೆಚ್ಚಾಗುತ್ತಿದೆ. ಮಳೆಯ (Rain) ಸಾಧ್ಯತೆಗಳು ಸದ್ಯಕ್ಕೆ ಇಲ್ಲ. ಐಎಂಡಿ ಪ್ರಕಾರ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆ ಅಥವಾ ಹಿಮಪಾತದ ಮುನ್ಸೂಚನೆ ಇದೆ. ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗಮನಾರ್ಹವಾಗಿ ದೆಹಲಿ-ಎನ್‌ಸಿಆರ್‌ನಲ್ಲಿ ಕಳೆದ 24 ಗಂಟೆಗಳಿಂದ ಮಳೆಯಾಗುತ್ತಲಿದೆ.

ಈ ವರ್ಷ ಜನವರಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಸುಮಾರು 70 ಮಿಮೀ ಮಳೆ ದಾಖಲಾಗಿದೆ. ಕಳೆದ 32 ವರ್ಷಗಳಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಇದೇ ಮೊದಲ ಬಾರಿಗೆ ಜನವರಿ ತಿಂಗಳಲ್ಲಿ ಇಷ್ಟು ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಗುಜರಾತ್‌ನಲ್ಲಿ ಕನಿಷ್ಠ ತಾಪಮಾನವು 5-7 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿದೆ. ಅದರಂತೆ ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶದಲ್ಲಿ 3-5 ಡಿಗ್ರಿ ಸೆಲ್ಸಿಯಸ್‌ ಮತ್ತು ಉತ್ತರ ಪ್ರದೇಶ, ಬಿಹಾರ, ಒಡಿಶಾ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಡಿಗ್ರಿ ಸೆಲ್ಸಿಯಸ್‌ ಮಳೆಯಾಗಿದೆ. ಇನ್ನೂ ಉತ್ತರ ಭಾರತದ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಿದೆ ಎಂದು ಐಎಂಡಿ ತಿಳಿಸಿದೆ.

ಭಾನುವಾರ ಬೆಳಗ್ಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಹಿಮಪಾತವಾಗಿದೆ. ಇಂದು ಪಂಜಾಬ್, ಹರಿಯಾಣ-ಚಂಡೀಗಢ ದೆಹಲಿ, ಉತ್ತರ ಪ್ರದೇಶದಲ್ಲಿ ಗುಡುಗು, ಮಿಂಚು, ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಇಂದು ಕೂಡ ಶೀತಯುತ ಅಲೆ ಕಾಣಿಸಿಕೊಂಡಿದೆ. ಹೀಗಾಗಿ ಜನರು ಬೆಂಕಿಯ ಮುಂದೆ ಕುಳಿತು ತಮ್ಮನ್ನು ತಾವು ಬೆಚ್ಚಗಿಡುವ ಪ್ರಯತ್ನದಲ್ಲಿ ನಿರತರಾಗಿದ್ದರು. ಪೂರ್ವ ಉತ್ತರ ಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲಿ ದಟ್ಟವಾದ ಮಂಜುಯುತ ವಾತಾವರಣ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ಭಾನುವಾರ ಹಿಮಪಾತವಾಗಿದೆ. ಹೀಗಾಗಿ ಕನಿಷ್ಠ 13 ರೈಲುಗಳು ತಡವಾಗಿ ಸಂಚರಿಸುತ್ತಿವೆ. ಆದ್ದರಿಂದ ಇಂದು ದೆಹಲಿಗೆ ತಡವಾಗಿ ರೈಲುಗಳು ಆಗಮಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ಪಂಜಾಬ್, ರಾಜಸ್ಥಾನ, ದೆಹಲಿಯಲ್ಲಿ ಆರೆಂಜ್​ ಅಲರ್ಟ್ ಘೋಷಣೆ

Weather Today: ಅಸ್ಸಾಂ, ರಾಜಸ್ಥಾನ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ; ಜಮ್ಮು ಕಾಶ್ಮೀರದಲ್ಲಿಂದು ಹಿಮಪಾತ

ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ