AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಗುಂಡಿಗಳ ಪತ್ತೆಗೆ ಎಐ ಮೊರೆಹೋದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಸ್ತೆ ಗುಂಡಿ ಹಾಗೂ ದೋಷಗಳನ್ನು ಮುಂಚಿತವಾಗಿಯೇ ಪತ್ತೆಹಚ್ಚಿ ದುರಸ್ತಿಗೊಳಿಸಲು ಕೃತಕ ಬುದ್ಧಿಮತ್ತೆ (AI), ಡ್ರೋನ್ ಮತ್ತು ಸುಧಾರಿತ ಡೇಟಾ ವಿಶ್ಲೇಷಣಾ ತಂತ್ರಜ್ಞಾನ ಆಧಾರಿತ ಹೊಸ ವ್ಯವಸ್ಥೆಗೆ ಮೊರೆಹೋಗಿದೆ. ಈ ಹೊಸ ವ್ಯವಸ್ಥೆಯಿಂದ ಹೆದ್ದಾರಿಗಳ ಆಯುಷ್ಯ ಹೆಚ್ಚಲಿರುವುದರ ಜೊತೆಗೆ ನಿರ್ವಹಣಾ ವೆಚ್ಚ ಕಡಿಮೆಯಾಗಲಿದೆ ಎಂದು ಪ್ರಾಧಿಕಾರ ಹೇಳಿಕೊಂಡಿದೆ.

ರಸ್ತೆ ಗುಂಡಿಗಳ ಪತ್ತೆಗೆ ಎಐ ಮೊರೆಹೋದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಸಾಂದರ್ಭಿಕ ಚಿತ್ರImage Credit source: PTI
ಪ್ರಸನ್ನ ಹೆಗಡೆ
|

Updated on: Jun 17, 2026 | 6:45 AM

Share

ಬೆಂಗಳೂರು, ಜೂನ್​​ 17: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ದೇಶದ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದ್ದು, ಕೃತಕ ಬುದ್ಧಿಮತ್ತೆ (AI), ಡ್ರೋನ್‌ಗಳು ಹಾಗೂ ಸುಧಾರಿತ ಡೇಟಾ ವಿಶ್ಲೇಷಣಾ ತಂತ್ರಜ್ಞಾನಗಳನ್ನು ಬಳಸುವ ಪೂರ್ವಾನುಮಾನ ಆಧಾರಿತ ಆಸ್ತಿ ನಿರ್ವಹಣಾ ವ್ಯವಸ್ಥೆ (Predictive Asset Management Framework) ಅಳವಡಿಸಿಕೊಳ್ಳುತ್ತಿದೆ. ಗುಂಡಿಗಳು ಮತ್ತು ಇತರ ರಸ್ತೆ ದೋಷಗಳು ಗಂಭೀರ ಸಮಸ್ಯೆಗಳಾಗುವ ಮುನ್ನವೇ ಅವುಗಳನ್ನು ಪತ್ತೆಹಚ್ಚಿ ದುರಸ್ತಿಗೊಳಿಸುವುದು ಈ ಹೊಸ ವ್ಯವಸ್ಥೆಯ ಮುಖ್ಯ ಉದ್ದೇಶವಾಗಿದೆ.

ರಾಷ್ಟ್ರೀಯ ಹೆದ್ದಾರಿಗಳ ಸ್ಥಿತಿಯನ್ನು ಪರಿಶೀಲಿಸಲು ನೆಟ್‌ವರ್ಕ್ ಸರ್ವೇ ವೆಹಿಕಲ್ಸ್ (NSVs) ಅನ್ನು ಬಳಸಲಾಗುತ್ತಿದೆ. ಇವು ರಸ್ತೆಯ ಮೇಲ್ಮೈಯ ಅಸಮತೋಲನ, ಬಿರುಕುಗಳು, ಗುಂಡಿಗಳು ಹಾಗೂ ರಚನಾತ್ಮಕ ಹಾನಿಯನ್ನು ಮೌಲ್ಯಮಾಪನ ಮಾಡಲಿವೆ. ಇದರ ಜೊತೆಗೆ ಡ್ರೋನ್ ಅನಾಲಿಟಿಕ್ಸ್ ಮಾನಿಟರಿಂಗ್ ಸಿಸ್ಟಮ್ (DAMS) ಮೂಲಕ ಹೆದ್ದಾರಿ ಆಸ್ತಿಗಳ ಡಿಜಿಟಲ್ ದಾಖಲೆ ಸಿದ್ಧಪಡಿಸುವುದು, ಸೇತುವೆಗಳು ಹಾಗೂ ಇತರ ರಚನೆಗಳ ಮೇಲ್ವಿಚಾರಣೆ ಮತ್ತು ಅತಿಕ್ರಮಣ ಪತ್ತೆಹಚ್ಚುವ ಕಾರ್ಯ ನಡೆಯಲಿದೆ. ಫಾಲಿಂಗ್ ವೇಟ್ ಡಿಫ್ಲೆಕ್ಟೋಮೀಟರ್ (FWD) ಪರೀಕ್ಷೆಗಳ ಮೂಲಕ ರಸ್ತೆಯ ಸಾಮರ್ಥ್ಯ ಅಳೆಯಲಾಗುತ್ತಿದ್ದು, ದುರ್ಬಲಗೊಳ್ಳುತ್ತಿರುವ ರಸ್ತೆ ಭಾಗಗಳನ್ನು ಗುರುತಿಸಲಾಗುತ್ತದೆ.

ಇದನ್ನೂ ಓದಿ: ಭವಾನಿಪುರದ ಸೋಲು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಿಎಂ ಮಮತಾ ಬ್ಯಾನರ್ಜಿ

AI ಮೂಲಕ ರಸ್ತೆ ಗುಂಡಿಗಳ ಪತ್ತೆ

ಹೆದ್ದಾರಿಗಳಲ್ಲಿ AI ಆಧಾರಿತ ಡ್ಯಾಶ್‌ಕ್ಯಾಮ್ ಅನಾಲಿಟಿಕ್ಸ್ ಸರ್ವೀಸ್ (DAS) ಅನ್ನು ಕೂಡ ಜಾರಿಗೊಳಿಸಲಾಗುತ್ತಿದೆ. ಈ ವ್ಯವಸ್ಥೆ ಸ್ವಯಂಚಾಲಿತವಾಗಿ, ರಸ್ತೆ ಗುಂಡಿಗಳು, ಹಾನಿಗೊಳಗಾದ ಕ್ರ್ಯಾಶ್ ಬ್ಯಾರಿಯರ್‌ಗಳು, ದೋಷಪೂರಿತ ಬೀದಿ ದೀಪಗಳು ಸೇರಿ ಮುಂತಾದ ಸಮಸ್ಯೆಗಳನ್ನು ಪತ್ತೆಹಚ್ಚಲಿದೆ. ಈ ಹೊಸ ವ್ಯವಸ್ಥೆಯಿಂದ ಹೆದ್ದಾರಿಗಳ ಆಯುಷ್ಯ ಹೆಚ್ಚಲಿರುವುದರ ಜೊತೆಗೆ ನಿರ್ವಹಣಾ ವೆಚ್ಚ ಕಡಿಮೆಯಾಗಲಿದೆ. ಪ್ರಯಾಣಿಕರಿಗೆ ಉತ್ತಮ ಸಂಚಾರ ಅನುಭವ ಕೂಡ ದೊರಕಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿರೋದಾಗಿ ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು