ಬಂಗಾಳದ ಚುನಾವಣೋತ್ತರ ಗಲಭೆಗೆ ದೀದಿ ಸರ್ಕಾರವೇ ಕಾರಣ; ಹೈಕೋರ್ಟ್​ಗೆ ವರದಿ ಸಲ್ಲಿಸಿದ ಮಾನವ ಹಕ್ಕುಗಳ ಆಯೋಗ

West Bengal Post Poll Violence: ಪಶ್ಚಿಮ ಬಂಗಾಳದ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಅಂದರೆ ಮೇ 2ರಿಂದ ಜೂನ್ 20ರವರೆಗೆ 1,934ಕ್ಕೂ ಹೆಚ್ಚು ದೂರುಗಳು ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

ಬಂಗಾಳದ ಚುನಾವಣೋತ್ತರ ಗಲಭೆಗೆ ದೀದಿ ಸರ್ಕಾರವೇ ಕಾರಣ; ಹೈಕೋರ್ಟ್​ಗೆ ವರದಿ ಸಲ್ಲಿಸಿದ ಮಾನವ ಹಕ್ಕುಗಳ ಆಯೋಗ
ಮಮತಾ ಬ್ಯಾನರ್ಜಿ
Follow us
| Updated By: ಸುಷ್ಮಾ ಚಕ್ರೆ

Updated on:Jul 15, 2021 | 7:16 PM

ಕೊಲ್ಕತ್ತಾ: ಕಳೆದ ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಭಾರೀ ಗಲಭೆ ಏರ್ಪಟ್ಟಿತ್ತು. ದೇಶದ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿತ್ತು. ಈ ಬಾರಿ ದೀದಿ ನಾಡಿನಲ್ಲಿ ಕೇಸರಿ ಬಾವುಟ ಹಾರಿಸಲೇಬೇಕೆಂದು ಬಿಜೆಪಿ ಶತಾಯಗತಾಯ ಪ್ರಯತ್ನಪಟ್ಟಿತ್ತು. ಕೊರೋನಾ ಕೇಸುಗಳು ಅತಿರೇಕಕ್ಕೆ ಏರಿದ ಸಂದರ್ಭದಲ್ಲೂ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮತ್ತಿತರ ಬಿಜೆಪಿ ನಾಯಕರು ಬಂಗಾಳದ ರಸ್ತೆಗಳಲ್ಲಿ ರ್ಯಾಲಿ ನಡೆಸಿ ಟೀಕೆಗೂ ಗುರಿಯಾಗಿದ್ದರು. ಇಷ್ಟೆಲ್ಲ ಆದರೂ ಪಶ್ಚಿಮ ಬಂಗಾಳದಲ್ಲಿ ಮತ್ತೆ ಮಮತಾ ಬ್ಯಾನರ್ಜಿ ವಿಜಯ ಪತಾಕೆ ಹಾರಿಸಿದ್ದರು. ಚುನಾವಣೋತ್ತರ ಗಲಭೆಯಲ್ಲಿ ಬಿಜೆಪಿಯ 15ಕ್ಕೂ ಹೆಚ್ಚು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಟಿಎಂಸಿ ನಾಯಕರು ಕೂಡ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ, ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದರು.

ಈ ಘಟನೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಗಲಭೆಯ ಬಗ್ಗೆ ವರದಿ ನೀಡಬೇಕೆಂದು ಕೊಲ್ಕತ್ತಾ ಹೈಕೋರ್ಟ್​ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೊಲ್ಕತ್ತಾ ಹೈಕೋರ್ಟ್​ಗೆ ಜುಲೈ 13ರಂದು ಮಾನವ ಹಕ್ಕುಗಳ ಆಯೋಗ ವರದಿ ಸಲ್ಲಿಸಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಗಲಭೆಯ ಕುರಿತು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವ ಮಾನವ ಹಕ್ಕುಗಳ ಆಯೋಗ (NHRC), ಕಳೆದ ಕೆಲವು ತಿಂಗಳಿನಿಂದ ಪಶ್ಚಿಮ ಬಂಗಾಳದಲ್ಲಿ ಸಾವಿರಾರು ಜನರ ಮೇಲೆ ಹಲ್ಲೆ, ಕೊಲೆ, ಅತ್ಯಾಚಾರ, ದೌರ್ಜನ್ಯ, ಬೆದರಿಕೆ ಹಾಕುವ ಕೆಲಸಗಳು ನಡೆದಿವೆ. ಇದಕ್ಕೆ ಸರ್ಕಾರವೇ ಹೊಣೆ ಎಂದಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಲ್ಲಿಸಿರುವ ವರದಿ ಪ್ರಕಾರ, ಪಶ್ಚಿಮ ಬಂಗಾಳದ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಅಂದರೆ ಮೇ 2ರಿಂದ ಜೂನ್ 20ರವರೆಗೆ 1,934ಕ್ಕೂ ಹೆಚ್ಚು ದೂರುಗಳು ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಅವುಗಳಲ್ಲಿ 29 ಕೊಲೆ, 12 ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ, 940 ದರೋಡೆ ಪ್ರಕರಣಗಳು ಕೂಡ ಸೇರಿವೆ. ಈ ಅವಧಿಯಲ್ಲಿ ಬಂಗಾಳದ 9,304 ಜನರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಅವರಲ್ಲಿ 1,345 ಜನರನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ. ಇದುವರೆಗೂ ಶೇ.2.8ರಷ್ಟು ಆರೋಪಿಗಳನ್ನು ಮಾತ್ರ ಬಂಧಿಸಲಾಗಿದೆ. ಹೀಗೆ ಬಂಧಿತರಾದ 1,345 ಆರೋಪಿಗಳಲ್ಲೂ 1,086 ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಪಶ್ಚಿಮ ಬಂಗಾಳದ ರಾಜಕೀಯ ಪಕ್ಷಗಳು, ಅಲ್ಲಿನ ರಾಜ್ಯ ಸರ್ಕಾರ ತಮ್ಮ ಪ್ರಭಾವವನ್ನು ಬಳಸಿ ಉಳಿದವರನ್ನು ರಕ್ಷಿಸಿವೆ. ಏಕೆಂದರೆ ಈ ರೀತಿ ಎಫ್​ಐಆರ್​ ದಾಖಲಾಗಿರುವವರೆಲ್ಲರೂ ರಾಜಕೀಯ ಪಕ್ಷಗಳ ಕಾರ್ಯಕರ್ತರಾಗಿದ್ದಾರೆ. ಇದೇ ರೀತಿ ಎಲ್ಲದರಲ್ಲೂ ರಾಜಕಾರಣಿಗಳು ಹಸ್ತಕ್ಷೇಪ ಮಾಡುತ್ತಿದ್ದರೆ ಅಪರಾಧ ಪ್ರಕರಣಗಳು ಇನ್ನೂ ಹೆಚ್ಚುತ್ತವೆ ಎಂದು ಮಾನವ ಹಕ್ಕುಗಳ ಆಯೋಗ ವರದಿಯಲ್ಲಿ ವಿವರಿಸಿದೆ. ಕೊಲ್ಕತ್ತಾ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ನೇತೃತ್ವದ ಪಂಚಸದಸ್ಯರ ನ್ಯಾಯಪೀಠಕ್ಕೆ ಈ ವರದಿಯನ್ನು ಸಲ್ಲಿಸಲಾಗಿದೆ.

ಈ ವರದಿಗೆ ಆಕ್ಷೇಪ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಾನವ ಹಕ್ಕುಗಳ ಆಯೋಗ ಸಲ್ಲಿಸಿರುವ ವರದಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ. ವಾಸ್ತವ ಅಂಶಗಳನ್ನು ಮುಚ್ಚಿಹಾಕಿ, ಬಿಜೆಪಿ ನಾಯಕರು ನಡೆಸಿದ ಗಲಭೆಯನ್ನು ಮರೆಮಾಚಲು ರಾಜ್ಯ ಸರ್ಕಾರದತ್ತ ಬೆರಳು ತೋಮಾನವ ಹಕ್ಕುಗಳ ಆಯೋಗ ವರದಿ ಸಲ್ಲಿಸಿದ ಬಳಿಕ ಅದನ್ನು ಕೋರ್ಟ್​ ನಮ್ಮ ಗಮನಕ್ಕೆ ತರುತ್ತದೆ, ನಮ್ಮ ಅಭಿಪ್ರಾಯ, ವಿವರಣೆಯನ್ನೂ ಕೇಳುತ್ತದೆ. ಅದಕ್ಕಿಂತ ಮೊದಲು ಈ ವರದಿಯನ್ನು ಲೀಕ್ ಮಾಡಿದ್ದು ಸರಿಯಲ್ಲ. ಮಾನವ ಹಕ್ಕುಗಳ ಆಯೋಗ ಈ ಮೂಲಕ ನ್ಯಾಯಾಲಯಕ್ಕೆ ಅಗೌರವ ತೋರಿದೆ. ನಾವು ಅಫಿಡವಿಟ್ ಸಲ್ಲಿಸುವ ಮೂಲಕ ನಮ್ಮ ಅಭಿಪ್ರಾಯನ್ನು ಹೈಕೋರ್ಟ್​ಗೆ ತಿಳಿಸಲಿದ್ದೇವೆ ಎಂದಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಮೇ 2ರಿಂದ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗಿತ್ತು. ಬೈಕ್, ಕಾರುಗಳನ್ನು ರಸ್ತೆಯಲ್ಲಿ ಸುಟ್ಟುಹಾಕಿ ಗಲಭೆ ಉಂಟುಮಾಡಲಾಗಿತ್ತು. ಈ ಸಂದರ್ಭದಲ್ಲಿ ಸಾಕಷ್ಟು ಜನರು ಪ್ರಾಣವನ್ನೂ ಕಳೆದುಕೊಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ 292 ಸ್ಥಾನಗಳ ಪೈಕಿ 213 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಟಿಎಂಸಿ ಮತ್ತೊಮ್ಮೆ ದಿಗ್ವಿಜಯ ಸಾಧಿಸಿತ್ತು. ಬಿಜೆಪಿ ಕೇವಲ 77 ಸ್ಥಾನಗಳಲ್ಲಿ ಗೆಲುವು ಕಂಡು ಹೀನಾಯ ಸೋಲು ಅನುಭವಿಸಿತ್ತು. ಆದರೆ, ಮಮತಾ ಬ್ಯಾನರ್ಜಿ ತಮ್ಮ ಸ್ವಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದರು.

ಇದನ್ನೂ ಓದಿ: Rudraksh Varanasi: ಶಿವಲಿಂಗದ ಆಕಾರದಲ್ಲಿ ವಾರಾಣಸಿಯಲ್ಲಿ ಎದ್ದು ನಿಂತಿದೆ ರುದ್ರಾಕ್ಷ ಸೆಂಟರ್; ಈ ಭವ್ಯ ಕಟ್ಟಡದ ವಿಶೇಷತೆಯೇನು ಗೊತ್ತಾ?

(National Human Rights Commission report slams Mamata Banergee West Bengal Government over post poll violence)

Published On - 7:15 pm, Thu, 15 July 21

ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ