ಆಂಧ್ರದಲ್ಲಿ ಓರ್ವ ಶಂಕಿತ ಉಗ್ರನ ಬಂಧನ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಬಗ್ಗೆಯೂ ವಿಚಾರಣೆ
ಬೆಂಗಳೂರು ನಗರದ ಹೆಚ್ಎಎಲ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಎನ್ಐಎ (NIA) ಅಲರ್ಟ್ ಆಗಿದ್ದು, ಆಂಧ್ರ ಪ್ರದೇಶದಲ್ಲಿ ಒಬ್ಬ ಶಂಕಿತ ಉಗ್ರನನ್ನು ಬಂಧಿಸಿದೆ. ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಈತನಿಗೆ ನಂಟು ಇದೆಯಾ ಎಂಬಿತ್ಯಾದಿ ಆಹಾಮಗಳಲ್ಲಿ ತನಿಖೆಯಾಗುವ ಸಾಧ್ಯತೆ ಇದೆ.
ಹೈದರಾಬಾದ್, ಮಾ.4: ಬೆಂಗಳೂರು ನಗರದ ಹೆಚ್ಎಎಲ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಎನ್ಐಎ (NIA) ಅಲರ್ಟ್ ಆಗಿದ್ದು, ಆಂಧ್ರ ಪ್ರದೇಶದಲ್ಲಿ ಒಬ್ಬ ಶಂಕಿತ ಉಗ್ರನನ್ನು (Suspect Terrorist) ಬಂಧಿಸಿದೆ. ತೆಲಂಗಾಣದ ಕಡಪ ಜಿಲ್ಲೆಯ ಮೈದುಕೂರು ಮಂಡಲಂ ಚೆರ್ಲೋಪಲ್ಲಿಯಲ್ಲಿ ನಿಷೇಧಿತ ಪಿಎಫ್‌ಐ ಏಜೆಂಟ್ ಅಬ್ದುಲ್ ಸಲೀಂ ಬಂಧತ ಶಂಕಿತ ಉಗ್ರನಾಗಿದ್ದಾನೆ.
ನಿಷೇಧಿತ ಪಿಎಫ್‌ಐ ಸಂಘಟನೆಯ ಉತ್ತರ ತೆಲಂಗಾಣದ ಕಾರ್ಯದರ್ಶಿಯಾಗಿದ್ದ ಅಬ್ದುಲ್ ಸಲೀಂ, ಕಳೆದ 25 ದಿನಗಳ ಹಿಂದೆ ಮೈದುಕೂರಿಗೆ ಬಂದು ಮಸೀದಿಯಲ್ಲಿ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ. ಅಲ್ಲದೆ, ಆನ್‌ಲೈನ್ ಮೂಲಕ ಫೋನ್‌ನಲ್ಲಿ ಮಾತನಾಡುತ್ತಿದ್ದ ಎನ್ನಲಾಗುತ್ತಿದೆ. ಹೆಚ್ಚಿನ ವಿಚಾರಣೆಗಾಗಿ ಅಬ್ದುಲ್ ಸಲೀಂನನ್ನು ಹೈದರಾಬಾದ್‌ಗೆ ಕರೆದೊಯ್ಯಲಾಗಿದೆ. ಬೇರೊಂದು ಪ್ರಕರಣ ಸಂಬಂಧ ಬಂಧಿಸಲಾಗಿದ್ದು, ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಈತನಿಗೆ ನಂಟು ಇದೆಯಾ ಎಂಬಿತ್ಯಾದಿ ಆಹಾಮಗಳಲ್ಲಿ ತನಿಖೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ತನಿಖೆ ಅಖಾಡಕ್ಕೆ ಎನ್ಐಎ: ಕಾರ್ಯಾಚರಣೆ ಹೇಗಿರಲಿದೆ ಗೊತ್ತೇ?
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಮಧ್ಯಾಹ್ನದ ವೇಳೆ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಗಂಭೀರತೆ ಅರಿತು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಆಂಧ್ರದಲ್ಲಿ ಒಬ್ಬ ಶಂಕಿತ ಉಗ್ರನನ್ನು ಬಂಧಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:39 pm, Mon, 4 March 24