ಉಗ್ರ ದಾವೂದ್ ಇಬ್ರಾಹಿಂ ಬಗ್ಗೆ ಮಾಹಿತಿ ನೀಡಿದವರಿಗೆ ₹25 ಲಕ್ಷ ಬಹುಮಾನ ಘೋಷಿಸಿದ ಎನ್ಐಎ

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾವೂದ್ ಇಬ್ರಾಹಿಂನ ಸಹಚರ ಛೋಟಾ ಶಕೀಲ್‌ಗೆ ₹ 20 ಲಕ್ಷ ಬಹುಮಾನವನ್ನು ಘೋಷಣೆ ಮಾಡಿದೆ. ಇತರ ಭಯೋತ್ಪಾದಕರಾದ ಅನೀಸ್ ಇಬ್ರಾಹಿಂ, ಜಾವೇದ್ ಚಿಕ್ನಾ ಮತ್ತು ಟೈಗರ್ ಮೆಮನ್ ಮಾಹಿತಿ ನೀಡುವವರಿಗೆ....

ಉಗ್ರ ದಾವೂದ್ ಇಬ್ರಾಹಿಂ ಬಗ್ಗೆ ಮಾಹಿತಿ ನೀಡಿದವರಿಗೆ ₹25 ಲಕ್ಷ ಬಹುಮಾನ ಘೋಷಿಸಿದ ಎನ್ಐಎ
ದಾವೂದ್ ಇಬ್ರಾಹಿಂ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 01, 2022 | 12:57 PM

ದೆಹಲಿ: ‘ಜಾಗತಿಕ ಭಯೋತ್ಪಾದಕ’ ದಾವೂದ್ ಇಬ್ರಾಹಿಂ (Dawood Ibrahim) ಬಗ್ಗೆ ಮಾಹಿತಿ ನೀಡಿದವರಿಗೆ ₹ 25 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಘೋಷಿಸಿದ್ದು, ಆತನ ಹೊಸ ಫೋಟೋ ಬಿಡುಗಡೆ ಮಾಡಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾವೂದ್ ಇಬ್ರಾಹಿಂನ ಸಹಚರ ಛೋಟಾ ಶಕೀಲ್‌ಗೆ ₹ 20 ಲಕ್ಷ ಬಹುಮಾನವನ್ನು ಘೋಷಣೆ ಮಾಡಿದೆ. ಇತರ ಭಯೋತ್ಪಾದಕರಾದ ಅನೀಸ್ ಇಬ್ರಾಹಿಂ, ಜಾವೇದ್ ಚಿಕ್ನಾ ಮತ್ತು ಟೈಗರ್ ಮೆಮನ್ ಮಾಹಿತಿ ನೀಡುವವರಿಗೆ ಎನ್ಐಎ ತಲಾ ₹ 15 ಲಕ್ಷ ಬಹುಮಾನ ಘೋಷಿಸಿದೆ. ದಾವೂದ್ ಇಬ್ರಾಹಿಂ ಮತ್ತು ಇತರರು “ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಮತ್ತು ಅಲ್ ಖೈದಾದೊಂದಿಗೆ ಸಕ್ರಿಯ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ.

1993 ರ ಮುಂಬೈ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಮತ್ತು ವಿಶ್ವಸಂಸ್ಥೆ ಘೋಷಿಸಿದ ಇತರ ಭಯೋತ್ಪಾದಕರು ನೆರೆಯ ದೇಶದಲ್ಲಿ ಮುಕ್ತವಾಗಿದ್ದಾರೆ ಎಂದು ಭಾರತ ಕಳೆದ ವರ್ಷ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ತಿಳಿಸಿತ್ತು. ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳು ಮತ್ತು ಮೋಸ್ಟ್ ವಾಂಟೆಡ್ ವ್ಯಕ್ತಿಗಳ ಬೆದರಿಕೆಗಳನ್ನು ಎದುರಿಸಲು ಅಂತರರಾಷ್ಟ್ರೀಯ ಪ್ರಯತ್ನಗಳನ್ನು ಕೇಂದ್ರೀಕರಿಸಲು ಭಾರತ ಕರೆ ನೀಡಿತ್ತು.

“ಒಂದು ಸಂಘಟಿತ ಅಪರಾಧ ಮಾಡುವ ಡಿ-ಕಂಪನಿ, ಚಿನ್ನ ಮತ್ತು ನಕಲಿ ಕರೆನ್ಸಿಗಳನ್ನು ಕಳ್ಳಸಾಗಣೆ ಮಾಡುತ್ತಿದ್ದು, ರಾತ್ರೋರಾತ್ರಿ ಭಯೋತ್ಪಾದಕ ಘಟಕವಾಗಿ ರೂಪಾಂತರಗೊಂಡಿತು, 1993 ರಲ್ಲಿ ಮುಂಬೈ ನಗರದಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಕಾರಣವಾಯಿತು. ಈ ದಾಳಿಯು 250 ಕ್ಕೂ ಹೆಚ್ಚು ಅಮಾಯಕರ ಜೀವವನ್ನು ಬಲಿ ತೆಗೆದುಕೊಂಡಿತು ಎಂದು ಭಾರತ ಕಳೆದ ವರ್ಷ ಹೇಳಿಕೆಯಲ್ಲಿ ತಿಳಿಸಿದೆ.

ದಾವೂದ್ ಇಬ್ರಾಹಿಂ 1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್. ಈ  ಸ್ಫೋಟದಲ್ಲಿ ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ 12 ಬಾಂಬ್‌ಗಳು ಸ್ಫೋಟಗೊಂಡವು, 257 ಜನರು ಸಾವನ್ನಪ್ಪಿದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಮಿತಿಯಿಂದ ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡಲಾದ ದಾವೂದ್ ಇಬ್ರಾಹಿಂ ಬಂಧನದಿಂದ ತಪ್ಪಿಸಿಕೊಳ್ಳಲು ಪಾಕಿಸ್ತಾನದಲ್ಲಿ ಆಶ್ರಯ ಪಡೆದಿದ್ದಾನೆ.

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯು ಬಿಡುಗಡೆ ಮಾಡಿದ ಇತ್ತೀಚಿನ ಭಯೋತ್ಪಾದಕ ಸಂಘಟನೆಗಳು ಮತ್ತು ಭಯೋತ್ಪಾದಕರ ಪಟ್ಟಿಯಲ್ಲಿ ದಾವೂದ್ ಇಬ್ರಾಹಿಂ ಕರಾಚಿ ವಿಳಾಸ ಹೊಂದಿದ್ದು ಪಾಕಿಸ್ತಾನದಿಂದ ಆಶ್ರಯ ಪಡೆದಿದ್ದಾನೆ ಎಂಬ ಭಾರತದ ಸಮರ್ಥನೆಯನ್ನು 2018 ರಲ್ಲಿ ದೃಢಪಡಿಸಲಾಯಿತು.

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ