ಭಯೋತ್ಪಾದಕ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ; ಐಪಿಎಸ್​ ಅಧಿಕಾರಿಯನ್ನು ಬಂಧಿಸಿದ ರಾಷ್ಟ್ರೀಯ ತನಿಖಾ ದಳ

ಭಯೋತ್ಪಾದಕ ಸಂಘಟನೆ ಎಲ್​ಇಟಿಗೆ ಸೇರಲು ಯುವಕರನ್ನು ಪ್ರೇರೇಪಿಸುವ ಮತ್ತು ಅವರನ್ನ ನೇಮಕ ಮಾಡಿಕೊಳ್ಳುತ್ತಿರುವ ಕೇಸ್​ಗೆ ಸಂಬಂಧಪಟ್ಟಂತೆ ಬುಧವಾರ ಎನ್​ಐಎ ಜಮ್ಮು-ಕಾಶ್ಮೀರದ ಮೂರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ.

ಭಯೋತ್ಪಾದಕ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ; ಐಪಿಎಸ್​ ಅಧಿಕಾರಿಯನ್ನು ಬಂಧಿಸಿದ ರಾಷ್ಟ್ರೀಯ ತನಿಖಾ ದಳ
ಎನ್​ಐಎ
Follow us
TV9 Web
| Updated By: Lakshmi Hegde

Updated on:Feb 19, 2022 | 10:21 AM

ನಿಷೇಧಿತ ಲಷ್ಕರ್​ ಇ ತೊಯ್ಬಾ ಉಗ್ರ ಸಂಘಟನೆಯ ತಳಮಟ್ಟದ ಕೆಲಸಗಾರರಿಗೆ ಸಹಾಯ ಮಾಡಿ, ರಹಸ್ಯ ದಾಖಲೆಗಳು, ಮಾಹಿತಿಗಳನ್ನು ಸೋರಿಕೆ ಮಾಡಿದ ಆರೋಪದಡಿ ರಾಷ್ಟ್ರೀಯ ತನಿಖಾ ದಳ (National Investigation Agency) ತನ್ನ ಮಾಜಿ ಎಸ್​ಪಿ, ಐಪಿಎಸ್​ ಅಧಿಕಾರಿ ಅರವಿಂದ್ ದಿಗ್ವಿಜಯ್​ ನೇಗಿ ಎಂಬುವರನ್ನು ಬಂಧಿಸಿದೆ. ಐಪಿಎಸ್​ ಅಧಿಕಾರಿಯನ್ನು (IPS officer) ಬಂಧಿಸಿರುವ ಬಗ್ಗೆ ಎನ್​ಐಎ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದೇ ಪ್ರಕರಣದಲ್ಲಿ ಈ ಮೊದಲು ಎನ್​ಐಎ ಆರು ಮಂದಿಯನ್ನು ಬಂಧಿಸಿತ್ತು. ಇದೀಗೆ ಅರೆಸ್ಟ್ ಆಗಿರುವ ನೇಗಿ 2011ನೇ ಬ್ಯಾಚ್​​ನ ಐಪಿಎಸ್​ ಅಧಿಕಾರಿಯಾಗಿದ್ದು, ಕಳೆದ ವರ್ಷ ನವೆಂಬರ್​ 6ರಂದು ಎನ್​ಐಎ ಕೇಸ್​ ದಾಖಲಿಸಿಕೊಂಡಿತ್ತು. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚೆಚ್ಚು ಹರಡಲು ಮತ್ತು ಯೋಜನೆಗಳನ್ನು ರೂಪಿಸಲು ಎಲ್​ಇಟಿಯ ತಳಮಟ್ಟದ ಕೆಲಸಗಾರರಿಗೆ ಸಹಾಯ ಮಾಡಿದ ಆರೋಪ ಬಂದ ಹಿನ್ನೆಲೆಯಲ್ಲಿ  ಎನ್​ಐಎ ತನಿಖೆ ಶುರು ಮಾಡಿತ್ತು.

ಎನ್​ಐಎನ್​​ಲ್ಲಿದ್ದ ಐಪಿಎಸ್​​ ಅಧಿಕಾರಿ ಎ.ಡಿ.ನೇಗಿಯವರನ್ನು ಶಿಮ್ಲಾದಲ್ಲಿ ಪೋಸ್ಟಿಂಗ್​ ಮಾಡಲಾಗಿತ್ತು. ಕಳೆದ ವರ್ಷ ನವೆಂಬರ್​​ನಲ್ಲಿ ಕೇಸ್​ ದಾಖಲಿಸಿ ಅವರ ಮನೆಯನ್ನು ಸರ್ಚ್​ ಮಾಡಲಾಗಿದೆ. ಈ ವೇಳೆ ಎನ್​ಐಎಗೆ ಸಂಬಂಧಪಟ್ಟ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿದ್ದಕ್ಕೆ ಪುರಾವೆ ಸಿಕ್ಕಿದೆ. ಈ ಮಾಹಿತಿಗಳನ್ನು ಎ.ಡಿ.ನೇಗಿ ಯಾರಿಗೆ ಕೊಟ್ಟಿದ್ದಾರೋ, ಆತ ಎಲ್​ಇಟಿಯ ತಳಮಟ್ಟದ ಕೆಲಸಗಾರನಾಗಿದ್ದಾನೆ ಎಂದೂ ರಾಷ್ಟ್ರೀಯ ತನಿಖಾ ದಳದ ವಕ್ತಾರ ತಿಳಿಸಿದ್ದಾರೆ.

ಭಯೋತ್ಪಾದಕ ಸಂಘಟನೆ ಎಲ್​ಇಟಿಗೆ ಸೇರಲು ಯುವಕರನ್ನು ಪ್ರೇರೇಪಿಸುವ ಮತ್ತು ಅವರನ್ನ ನೇಮಕ ಮಾಡಿಕೊಳ್ಳುತ್ತಿರುವ ಕೇಸ್​ಗೆ ಸಂಬಂಧಪಟ್ಟಂತೆ ಬುಧವಾರ ಎನ್​ಐಎ ಜಮ್ಮು-ಕಾಶ್ಮೀರದ ಮೂರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ. ಇದಕ್ಕೆ ಕೇಂದ್ರ ಮೀಸಲು ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ಸಹಾಯವನ್ನೂ ತೆಗೆದುಕೊಂಡಿದೆ. ಲಷ್ಕರ್​ ಇ ತೊಯ್ಬಾದ ಅಂಗ ಸಂಸ್ಥೆ ದಿ ರೆಸಿಸ್ಟನ್ಸ್​ ಫ್ರಂಟ್​​ನ ಕಮಾಂಡರ್​ಗಳಾದ ಸಜ್ಜದ್​ ಗುಲ್​, ಸಲೀಂ ರೆಹಮಾನಿ ಅಲಿಯಾಸ್ ಅಬು ಸಾದ್​ ಮತ್ತು ಸೈಫುಲ್ಲಾ ಸಜೀದ್​ ಜಟ್​ ಸೇರಿ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಯುವಕರನ್ನು ಸೆಳೆಯುವ ಕಾರ್ಯ ಮಾಡುತ್ತಿದ್ದಾರೆ. ಅವರನ್ನು ಉಗ್ರ ಸಂಘಟನೆಗೆ ಸೇರಿಸಲು ಪ್ರಚೋದಿಸುತ್ತಿದ್ದಾರೆ ಎಂದೂ ಎನ್​ಐಎ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶೋಧ ಕಾರ್ಯ ನಡೆಸಿದ ಎನ್​ಐಎ ಅಧಿಕಾರಿಗಳು ಹಲವು ಡಿಜಿಟಲ್​ ಡಿವೈಸ್​​ಗಳನ್ನು, ವಸ್ತುಗಳನ್ನೂ ಜಪ್ತಿ ಮಾಡಿದ್ದಾರೆ.

Published On - 8:34 am, Sat, 19 February 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ