AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಹೊತ್ತ ಕಾರ್ ಪ್ರಕರಣ; ಇನ್ನೋರ್ವ ಮುಂಬೈ ಪೊಲಿಸ್ ಸಿಬ್ಬಂದಿ ಬಂಧನ

Sachin Vaze: ಬಂಧಿತ ಸುನಿಲ್ ಮಾನೆ ಅಮಾನತಾಗಿರುವ ಸಚಿನ್ ವಾಜೆಯನ್ನು ಮಾರ್ಚ್ ಮೊದಲ ವಾರದಲ್ಲಿ ಭೇಟಿ ಮಾಡಿದ್ದ ಎಂದು ಹಲವು ಸಾಕ್ಷ್ಯಗಳಿವೆ. ಈ ಕುರಿತು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ಎನ್​ಐಎ ತಂಡ ತಿಳಿಸಿದೆ.

ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಹೊತ್ತ ಕಾರ್ ಪ್ರಕರಣ; ಇನ್ನೋರ್ವ ಮುಂಬೈ ಪೊಲಿಸ್ ಸಿಬ್ಬಂದಿ ಬಂಧನ
ಸಚಿನ್ ವಾಜೆ
guruganesh bhat
|

Updated on:Apr 23, 2021 | 11:57 PM

Share

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಅಪರಿಚಿತ ಕಾರಿನಲ್ಲಿ ಸ್ಫೋಟಕ ಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್​ಐಎ ಮುಂಬೈನ  ಪೊಲೀಸ್ ಸಿಬ್ಬಂದಿ ಸುನಿಲ್ ಮಾನೆಯನ್ನು ಬಂಧಿಸಿದೆ. ಸ್ಫೋಟಕ ತುಂಬಿದ್ದ ಕಾರಿನ ನಿರ್ವಹಣೆ ಮಾಡುತ್ತಿದ್ದ ಮನ್​ಸುಖ್ ಹಿರೇನ್ ಮೃತದೇಹ ಪತ್ತೆಯಾಗುವ ಎರಡು ದಿನ ಮೊದಲು ಬಂಧಿತ ಮುಂಬೈ ಪೊಲೀಸ್ ಇನ್ಸ್​ಪೆಕ್ಟರ್ ಸುನಿಲ್ ಮಾನೆ ಈಗಾಗಲೇ ಅಮಾನತಾಗಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆಯನ್ನು ಭೇಟಿಯಾಗಿದ್ದರು ಎಂದು ಎನ್​ಐಎ ತಿಳಿಸಿದೆ.

ಬಂಧಿತ ಸುನಿಲ್ ಮಾನೆ ಅಮಾನತಾಗಿರುವ ಸಚಿನ್ ವಾಜೆಯನ್ನು ಮಾರ್ಚ್ ಮೊದಲ ವಾರದಲ್ಲಿ ಭೇಟಿ ಮಾಡಿದ್ದ ಎಂದು ಹಲವು ಸಾಕ್ಷ್ಯಗಳಿವೆ. ಈ ಕುರಿತು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ಎನ್​ಐಎ ತಂಡ ತಿಳಿಸಿದೆ. ಸುನಿಲ್ ಮಾನೆಯನ್ನು ಮುಂದಿನ ಶುಕ್ರವಾರ ಕೋರ್ಟ್​ಗೆ ಹಾಜರುಪಡಿಸಲಾಗುವುದು ಎಂದು ಸಹ ತನಿಖಾ ತಂಡ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಪೋಟಕ ಹೊತ್ತಿದ್ದ ಕಾರು ಸಿಕ್ಕ ಪ್ರಕರಣದಲ್ಲಿ ಎನ್​ಐಎ ದಳದಿಂದ ಬಂಧಿಸಲ್ಪಟ್ಟಿದ್ದ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮುಂಬೈ ಸ್ಪೆಷಲ್ ಬ್ರ್ಯಾಂಚ್​ನ ಹೆಚ್ಚುವರಿ ಪೊಲೀಸ್ ಕಮಿಷನರ್ ಸಚಿನ್ ವಾಜೆ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸ್ಫೋಟಕ ಇಟ್ಟಿದ್ದ ತಂಡದಲ್ಲಿ ಸಚಿನ್ ವಾಜೆ ಕೂಡ ಭಾಗಿಯಾಗಿದ್ದು ಈ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು.

ಎನ್​ಕೌಂಟರ್ ಸ್ಪೆಷಲಿಸ್ಟ್ ಆಗಿದ್ದ ಸಚಿನ್ ವಾಜೆ, ಅಂಬಾನಿ ಮನೆ ಬಳಿ ಪತ್ತೆಯಾದ ವಾಹನದಲ್ಲಿ ಸ್ಫೋಟಕ ಇರಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಫೆಬ್ರವರಿ 25ರಂದು ದಕ್ಷಿಣ ಮುಂಬೈನ ಕಾರ್ಮಿಚೇಲ್ ರಸ್ತೆಯಲ್ಲಿರುವ ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿರುವ ಕಾರೊಂದು ಪತ್ತೆಯಾಗಿತ್ತು. ಈ ಕಾರಿನೊಳಗೆ ಜಿಲೆಟಿನ್ ಕಡ್ಡಿಗಳನ್ನು ತುಂಬಿಸಿಡಲಾಗಿತ್ತು. ಅದೃಷ್ಟವಶಾತ್ ಜಿಲೆಟಿನ್ ಸ್ಫೋಟಗೊಳ್ಳದ ಕಾರಣ ಭಾರಿ ಅನಾಹುತ ತಪ್ಪಿತ್ತು.

ಇದನ್ನೂ ಓದಿ: ವ್ಯಕ್ತಿ ವ್ಯಕ್ತಿತ್ವ: ಹಿಂದೂ ಮುಸ್ಲಿಂ ಸಾಮರಸ್ಯ, ಸೈಬರ್ ಕ್ರೈಂ ಪತ್ತೆಹಚ್ಚುವಲ್ಲಿ ಏಷ್ಯಾಕ್ಕೇ ಪ್ರಥಮ; ಸಚಿನ್ ವಾಜೆಯ ವೈವಿಧ್ಯಮಯ ವ್ಯಕ್ತಿತ್ವ

ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ; ಎನ್ಐಎಯಿಂದ ಸಚಿನ್ ವಾಜೆ ಸಹಚರ ರಿಯಾಜ್ ಕಾಜಿ ಬಂಧನ

(NIA arrests one more Mumbai police cop in Mukesh Ambani bomb scare case)

Published On - 11:55 pm, Fri, 23 April 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!