AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಕೇಸ್: ಪೊಲೀಸ್ ಅಧಿಕಾರಿಯನ್ನೇ ಅರೆಸ್ಟ್ ಮಾಡಿದ ಎನ್‌ಐಎ

ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಕೇಸ್​ಗೆ ಸಂಬಂಧಿಸಿ ಈ ಹಿಂದೆ ಈ ಘಟನೆಯ ತನಿಖೆಯ ಹೊಣೆ ಹೊತ್ತಿದ್ದ ಪೊಲೀಸ್ ಅಧಿಕಾರಿಯನ್ನೇ ರಾಷ್ಟ್ರೀಯ ತನಿಖಾ ದಳ ಅರೆಸ್ಟ್ ಮಾಡಿದೆ. ಸ್ಫೋಟಕ ಇಟ್ಟಿದ್ದ ತಂಡದಲ್ಲಿ ಸಚಿನ್ ವಜೆ ಕೂಡ ಭಾಗಿಯಾಗಿದ್ದು ಈ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಕೇಸ್: ಪೊಲೀಸ್ ಅಧಿಕಾರಿಯನ್ನೇ ಅರೆಸ್ಟ್ ಮಾಡಿದ ಎನ್‌ಐಎ
ಸಚಿನ್ ವಾಜೆ
ಆಯೇಷಾ ಬಾನು
ಆಯೇಷಾ ಬಾನು|

Updated on:Mar 14, 2021 | 10:27 AM

Share

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಕೇಸ್​ಗೆ ಸಂಬಂಧಿಸಿ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಜೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ಬಳಿಕ ತಡರಾತ್ರಿ ಎನ್‌ಐಎನಿಂದ ಅರೆಸ್ಟ್ ಮಾಡಲಾಗಿದೆ. ಈ ಹಿಂದೆ ಈ ಘಟನೆಯ ತನಿಖೆಯ ಹೊಣೆ ಹೊತ್ತಿದ್ದ ಪೊಲೀಸ್ ಅಧಿಕಾರಿಯನ್ನೇ ರಾಷ್ಟ್ರೀಯ ತನಿಖಾ ದಳ ಅರೆಸ್ಟ್ ಮಾಡಿದೆ. ಸ್ಫೋಟಕ ಇಟ್ಟಿದ್ದ ತಂಡದಲ್ಲಿ ಸಚಿನ್ ವಜೆ ಕೂಡ ಭಾಗಿಯಾಗಿದ್ದು ಈ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

ಎನ್​ಕೌಂಟರ್ ಸ್ಪೆಷಲಿಸ್ಟ್ ಆಗಿದ್ದ ಸಚಿನ್ ವಜೆ, ಅಂಬಾನಿ ಮನೆ ಬಳಿ ಪತ್ತೆಯಾದ ವಾಹನದಲ್ಲಿ ಸ್ಫೋಟಕ ಇರಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಫೆಬ್ರವರಿ 25ರಂದು ದಕ್ಷಿಣ ಮುಂಬೈನ ಕಾರ್ಮಿಚೇಲ್ ರಸ್ತೆಯಲ್ಲಿರುವ ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿರುವ ಕಾರೊಂದು ಪತ್ತೆಯಾಗಿತ್ತು. ಈ ಕಾರಿನೊಳಗೆ ಜಿಲೆಟಿನ್ ಕಡ್ಡಿಗಳನ್ನು ತುಂಬಿಸಿಡಲಾಗಿತ್ತು. ಅದೃಷ್ಟವಶಾತ್ ಜಿಲೆಟಿನ್ ಸ್ಫೋಟಗೊಳ್ಳದ ಕಾರಣ ಭಾರಿ ಅನಾವುತ ತಪ್ಪಿದೆ.

ಮುಕೇಶ್ ಅಂಬಾನಿ ಅವರ ನಿವಾಸದ ಬಳಿ ಜಿಲೆಟಿನ್ ಕಡ್ಡಿಗಳನ್ನು ಇರಿಸಿದ ಮಹೇಂದ್ರಾ ಸ್ಕಾರ್ಪಿಯೋ ಕಾರನ್ನು ನಿರ್ವಹಿಸುತ್ತಿದ್ದ ಮನ್​ಸುಖ್ ಹಿರೇನ್ ಅವರ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಹಿಂದೆ ಸಚಿನ್ ವಜೆ ಅವರ ಕೈವಾಡ ಇದೆ ಎಂದು ಮನ್​ಸುಖ್ ಪತ್ನಿ ಆರೋಪಿಸಿದ್ದರು. ಈ ಆರೋಪ ಕೇಳಿ ಬಂದ ಮೇಲೆ ಘಟನೆಯ ತನಿಖೆಯ ಹೊಣೆ ಹೊತ್ತಿದ್ದ ವಜೆ ಅವರನ್ನು ತನಿಖಾ ತಂಡದಿಂದ ಕೈಬಿಡಲಾಗಿತ್ತು. ಶನಿವಾರ ವಜೆ ಅವರನ್ನು ಎನ್​ಐಎ ಸತತ 12 ಗಂಟೆಗಳ ಕಾಲ ವಿಚಾರಣೆ ನಡೆಸಿ ರಾತ್ರಿ 11.50ಕ್ಕೆ ಅರೆಸ್ಟ ಮಾಡಿದೆ. ಭಾನುವಾರ ಅವರನ್ನು ಕೋರ್ಟ್​ಗೆ ಹಾಜರು ಪಡಿಸಲಾಗುವುದು ಎಂದು ಎನ್​ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಅಂಬಾನಿ ಮನೆ ಮುಂದೆ ಕಾರಿನಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ಉದ್ಯಮಿ ಮನ್​ಸುಖ್ ಹಿರೇನ್ ಸಾವಿಗೆ ಪೊಲೀಸ್ ಅಧಿಕಾರಿ ಸಚಿನ್ ವಾಜ್ ನಂಟು?

Published On - 9:24 am, Sun, 14 March 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ