ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಕೇಸ್ಗೆ ಸಂಬಂಧಿಸಿ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಜೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ಬಳಿಕ ತಡರಾತ್ರಿ ಎನ್‌ಐಎನಿಂದ ಅರೆಸ್ಟ್ ಮಾಡಲಾಗಿದೆ. ಈ ಹಿಂದೆ ಈ ಘಟನೆಯ ತನಿಖೆಯ ಹೊಣೆ ಹೊತ್ತಿದ್ದ ಪೊಲೀಸ್ ಅಧಿಕಾರಿಯನ್ನೇ ರಾಷ್ಟ್ರೀಯ ತನಿಖಾ ದಳ ಅರೆಸ್ಟ್ ಮಾಡಿದೆ. ಸ್ಫೋಟಕ ಇಟ್ಟಿದ್ದ ತಂಡದಲ್ಲಿ ಸಚಿನ್ ವಜೆ ಕೂಡ ಭಾಗಿಯಾಗಿದ್ದು ಈ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.
ಎನ್ಕೌಂಟರ್ ಸ್ಪೆಷಲಿಸ್ಟ್ ಆಗಿದ್ದ ಸಚಿನ್ ವಜೆ, ಅಂಬಾನಿ ಮನೆ ಬಳಿ ಪತ್ತೆಯಾದ ವಾಹನದಲ್ಲಿ ಸ್ಫೋಟಕ ಇರಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಫೆಬ್ರವರಿ 25ರಂದು ದಕ್ಷಿಣ ಮುಂಬೈನ ಕಾರ್ಮಿಚೇಲ್ ರಸ್ತೆಯಲ್ಲಿರುವ ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿರುವ ಕಾರೊಂದು ಪತ್ತೆಯಾಗಿತ್ತು. ಈ ಕಾರಿನೊಳಗೆ ಜಿಲೆಟಿನ್ ಕಡ್ಡಿಗಳನ್ನು ತುಂಬಿಸಿಡಲಾಗಿತ್ತು. ಅದೃಷ್ಟವಶಾತ್ ಜಿಲೆಟಿನ್ ಸ್ಫೋಟಗೊಳ್ಳದ ಕಾರಣ ಭಾರಿ ಅನಾವುತ ತಪ್ಪಿದೆ.
ಮುಕೇಶ್ ಅಂಬಾನಿ ಅವರ ನಿವಾಸದ ಬಳಿ ಜಿಲೆಟಿನ್ ಕಡ್ಡಿಗಳನ್ನು ಇರಿಸಿದ ಮಹೇಂದ್ರಾ ಸ್ಕಾರ್ಪಿಯೋ ಕಾರನ್ನು ನಿರ್ವಹಿಸುತ್ತಿದ್ದ ಮನ್ಸುಖ್ ಹಿರೇನ್ ಅವರ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಹಿಂದೆ ಸಚಿನ್ ವಜೆ ಅವರ ಕೈವಾಡ ಇದೆ ಎಂದು ಮನ್ಸುಖ್ ಪತ್ನಿ ಆರೋಪಿಸಿದ್ದರು. ಈ ಆರೋಪ ಕೇಳಿ ಬಂದ ಮೇಲೆ ಘಟನೆಯ ತನಿಖೆಯ ಹೊಣೆ ಹೊತ್ತಿದ್ದ ವಜೆ ಅವರನ್ನು ತನಿಖಾ ತಂಡದಿಂದ ಕೈಬಿಡಲಾಗಿತ್ತು. ಶನಿವಾರ ವಜೆ ಅವರನ್ನು ಎನ್‌ಐಎ ಸತತ 12 ಗಂಟೆಗಳ ಕಾಲ ವಿಚಾರಣೆ ನಡೆಸಿ ರಾತ್ರಿ 11.50ಕ್ಕೆ ಅರೆಸ್ಟ ಮಾಡಿದೆ. ಭಾನುವಾರ ಅವರನ್ನು ಕೋರ್ಟ್ಗೆ ಹಾಜರು ಪಡಿಸಲಾಗುವುದು ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.
NIA arrested Mumbai Police officer Sachin Vaze at 2350 hrs in case relating to explosives-laden car found parked outside industrialist Mukesh Ambani’s residence
— Bharti Jain (@bhartijainTOI) March 13, 2021
Published On - 9:24 am, Sun, 14 March 21