AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ಸ್ವಪ್ನಾ ಸುರೇಶ್ ಜಾಮೀನು ತಿರಸ್ಕರಿಸಿದ ಎನ್​ಐಎ ನ್ಯಾಯಾಲಯ

Kerala Gold Smuggling Case: ಈ ಹಿಂದೆ ಪ್ರಕರಣದ ಕೆಲವು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ದಳ ಹೈಕೋರ್ಟ್​ಗೆ ಮನವಿ ಸಲ್ಲಿಸಿತ್ತು. ಆ ಮನವಿಯನ್ನೂ ಹೈಕೋರ್ಟ್ ತಿರಸ್ಕರಿಸಿತ್ತು.

ಕೇರಳ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ಸ್ವಪ್ನಾ ಸುರೇಶ್ ಜಾಮೀನು ತಿರಸ್ಕರಿಸಿದ ಎನ್​ಐಎ ನ್ಯಾಯಾಲಯ
ಸ್ವಪ್ನಾ ಸುರೇಶ್
TV9 Web
| Updated By: ganapathi bhat|

Updated on:Apr 06, 2022 | 6:53 PM

Share

ಕೊಚ್ಚಿ: ಚಿನ್ನ ಕಳ್ಳಸಾಗಾಣಿಕೆ ಆರೋಪದಲ್ಲಿ ಸಿಲುಕಿರುವ ಸ್ವಪ್ನಾ ಸುರೇಶ್ ಹಾಗೂ ಇತರ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ ಇಂದು (ಮಾರ್ಚ್ 22) ತಿರಸ್ಕರಿಸಿದೆ. ಪ್ರಕರಣದ ಕುರಿತಾದ ತನಿಖೆ ಕೊನೆಯಾಗಿದೆ ಹಾಗೂ ಆರೋಪಿಗಳು ದೀರ್ಘಕಾಲದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂಬ ಕಾರಣಕ್ಕೆ ಜಾಮೀನು ಕೋರಿ ಆರೋಪಿಗಳು ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಜೊತೆಗೆ, ಆರೋಪಿಗಳ ವಿರುದ್ಧದ ಇರುವ ಆಪಾದನೆಗಳು ಕಾನೂನಿನ ಎದುರು ಸ್ಥಿರವಾಗಿಲ್ಲ ಎಂದೂ ಅವರು ಹೇಳಿದ್ದರು.

ಈ ಹಿಂದೆ ಪ್ರಕರಣದ ಕೆಲವು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ದಳ (National Investigation Agency – NIA) ಹೈಕೋರ್ಟ್​ಗೆ ಮನವಿ ಸಲ್ಲಿಸಿತ್ತು. ಆ ಮನವಿಯನ್ನೂ ಹೈಕೋರ್ಟ್ ತಿರಸ್ಕರಿಸಿತ್ತು. ಈ ವಿವರಗಳನ್ನು ಸ್ವಪ್ನಾ ಸುರೇಶ್ ಹಾಗೂ ಇತರ ಆರು ಆರೋಪಿಗಳು ತಮ್ಮ ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಉಳಿದ ಕೆಲ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್, ಚಿನ್ನ ಕಳ್ಳಸಾಗಾಣಿಕೆಯು ಕಾನೂನು ಬಾಹಿರ ಚಟುವಟಿಕೆ (ತಡೆ) ಕಾಯ್ದೆ (UAPA)ಯ ಅಡಿಯಲ್ಲಿ ಬರುವುದಿಲ್ಲ. ಬದಲಾಗಿ ದೇಶದ ಆರ್ಥಿಕ ಅಥವಾ ಹಣಕಾಸು ಸ್ಥಿರತೆಗೆ ಸಮಸ್ಯೆ ಉಂಟಾದ ಬಗ್ಗೆ ಸಾಕ್ಷಿ ಬೇಕು ಎಂದು ತಿಳಿಸಿತ್ತು. ಹೈಕೋರ್ಟ್​ನ ಈ ತೀರ್ಪು ಉಲ್ಲೇಖಿಸಿದ್ದ ಆರೋಪಿಗಳು ತಮ್ಮ ವಿರುದ್ಧದ ಆಪಾದನೆಗಳು ಸ್ಥಿರವಾಗಿಲ್ಲ ಎಂದು ಹೇಳಿದ್ದರು.

ಸದ್ಯ, ₹ 14.82 ಕೋಟಿ ಬೆಲೆಬಾಳುವ 30 ಕೆಜಿ ಚಿನ್ನ ಕಳ್ಳ ಸಾಗಾಣಿಕೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸ್ವಪ್ನಾ ಸುರೇಶ್ ಕೇರಳದಲ್ಲಿನ ಯುಎಇ ರಾಯಭಾರ ಕಚೇರಿಯ ಮಾಜಿ ಉದ್ಯೋಗಿಯಾಗಿದ್ದರು. ಕಳೆದ ಕೆಲವು ತಿಂಗಳ ಹಿಂದೆ ಹಂಚಿಕೆಯಾಗಿದ್ದ ಸ್ವಪ್ನಾ ಸುರೇಶ್​ಗೆ ಸಂಬಂಧಿಸಿದ್ದು ಎನ್ನಲಾಗಿರುವ ಧ್ವನಿ ತುಣುಕಿನಲ್ಲಿ, ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಹಾಗೂ ಇತರ ಕೆಲವು ಸಚಿವರ ವಿರುದ್ಧ ಹೇಳಿಕೆ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.

ಅಷ್ಟೇ ಅಲ್ಲದೆ, ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದ ವೇಳೆ ಸ್ವಪ್ನಾ ಸುರೇಶ್ ಜೊತೆಗಿದ್ದ ಇಬ್ಬರು ಮಹಿಳಾ ಪೊಲೀಸರು ಕೂಡ, ವಿಜಯನ್ ಹೆಸರು ಹೇಳುವಂತೆ ಸ್ವಪ್ನಾರನ್ನು ಒತ್ತಾಯಿಸಿದ್ದನ್ನು ಕೇಳಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಜಾರಿ ನಿರ್ದೇಶನಾಲಯ ಜೊತೆಗೆ ರಾಷ್ಟ್ರೀಯ ತನಿಖಾ ದಳ (NIA) ಹಾಗೂ ಕಸ್ಟಮ್ಸ್ ಅಧಿಕಾರಿಗಳು ಕೂಡ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಕೇಂದ್ರದ ಏಜೆನ್ಸಿಗಳು ತಮ್ಮ ರಾಜ್ಯ ಸರ್ಕಾರವನ್ನು ಗುರಿಯಾಗಿಸಿ ಹೀಗೆ ಮಾಡುತ್ತಿದೆ ಎಂದು ಪಿಣರಾಯಿ ವಿಜಯನ್ ಆರೋಪಿಸಿದ್ದರು.

ಇದನ್ನೂ ಓದಿ: ಪಿಣರಾಯಿ ವಿಜಯನ್ ಹೆಸರು ಹೇಳಲು ಸ್ವಪ್ನಾ ಸುರೇಶ್​ರನ್ನು ಒತ್ತಾಯಿಸಲಾಗಿದೆ: ED ವಿರುದ್ಧ ಪ್ರಕರಣ ದಾಖಲಿಸಿದ ಕೇರಳ ಪೊಲೀಸ್

ಇದನ್ನೂ ಓದಿ:  ಕೇರಳ Gold Smuggling: ನೇರವಾಗಿ ಫೀಲ್ಡ್ ಗೆ ಇಳಿದ NIA

Published On - 3:23 pm, Mon, 22 March 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ