ಮೈಸೂರು-ದರ್ಭಾಂಗ ರೈಲು ಅಪಘಾತ: ತನಿಖೆ ಆರಂಭಿಸಿದ ಎನ್‌ಐಎ
ತಮಿಳುನಾಡಿನಲ್ಲಿ ಸಂಭವಿಸಿದ ಮೈಸೂರು-ದರ್ಭಾಂಗ ರೈಲು ಅಪಘಾತದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಯನ್ನು ಪ್ರಾರಂಭಿಸಿದೆ. ಮೈಸೂರು-ದರ್ಭಾಂಗ ಬಾಗಮತಿ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿಯಾದ ಸ್ಥಳಕ್ಕೆ ಎನ್‌ಐಎ ತಂಡ ಆಗಮಿಸಿದೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದರು
ತಮಿಳುನಾಡಿನಲ್ಲಿ ಸಂಭವಿಸಿದ ಮೈಸೂರು-ದರ್ಭಾಂಗ ರೈಲು ಅಪಘಾತದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಯನ್ನು ಪ್ರಾರಂಭಿಸಿದೆ. ಮೈಸೂರು-ದರ್ಭಾಂಗ ಬಾಗಮತಿ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿಯಾದ ಸ್ಥಳಕ್ಕೆ ಎನ್‌ಐಎ ತಂಡ ಆಗಮಿಸಿದೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದರು.
ಶುಕ್ರವಾರ ನಡೆದ ಅಪಘಾತದಲ್ಲಿ ಎಕ್ಸ್‌ಪ್ರೆಸ್ ರೈಲಿನ 12 ಬೋಗಿಗಳು ಹಳಿತಪ್ಪಿವೆ. ಕೊರುಕ್ಕುಪೇಟೆಯ ಸರ್ಕಾರಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಏತನ್ಮಧ್ಯೆ, ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, ಕೇಂದ್ರ ಸರ್ಕಾರವು ರೈಲು ಅಪಘಾತಗಳನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಟೀಕಿಸಿದರು.
ಸಿಗ್ನಲ್ ವೈಫಲ್ಯದಿಂದ ಈ ಘಟನೆ ಸಂಭವಿಸಿದೆ ಎಂದು ರೈಲ್ವೆಯ ಮೂಲಗಳು ಐಎಎನ್‌ಎಸ್‌ಗೆ ತಿಳಿಸಿವೆ. ಎಕ್ಸ್‌ಪ್ರೆಸ್ ರೈಲು ರಾತ್ರಿ 8.27 ಕ್ಕೆ ಪೊನ್ನೇರಿ ರೈಲು ನಿಲ್ದಾಣವನ್ನು ದಾಟಿತು ಮತ್ತು ಮುಖ್ಯ ಮಾರ್ಗದ ಮೂಲಕ ಮುಂದಿನ ನಿಲ್ದಾಣವಾದ ಕವರೈಪೆಟ್ಟೈಗೆ ತೆರಳಲು ಅನುಮತಿ ನೀಡಲಾಯಿತು.
ಕಳೆದ ಒಂದು ತಿಂಗಳ ಹಿಂದೆ ರೈಲು ಹಳಿ ತಪ್ಪಿಸಲು ಆಗಂತುಕರು ಮುಂದಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ, ಒಂದು ತಿಂಗಳ ಹಿಂದೆ ಪೊನ್ನೆರಿ ಹಾಗೂ ಅನುಪಮ್ ಪಟ್ಟು ನಿಲ್ದಾಣಗಳ ಮಧ್ಯದಲ್ಲಿ ರೈಲನ್ನ ಹಳಿ ತಪ್ಪಿಸಲು ಯತ್ನ ನಡೆದಿತ್ತು. ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿರಲಿಲ್ಲ.
ಮತ್ತಷ್ಟು ಓದಿ: ಚೆನ್ನೈ ಬಳಿ ಮೈಸೂರು-ದರ್ಭಂಗ ರೈಲು ಅಪಘಾತ, ಹಲವರಿಗೆ ಗಾಯ, 9 ಜನರ ಸ್ಥಿತಿ ಗಂಭೀರ
ಘಟನೆ ಬಳಿಕ ಒಂದು ತಿಂಗಳಿಂದ ಟ್ರಾಕ್ ಬಳಿ ರೈಲ್ವೆ ಪೊಲೀಸರು ಪ್ಯಾಟ್ರೋಲಿಂಗ್ ನಡೆಸಿದ್ದರು.ಈ ಅಪಘಾತದಲ್ಲಿ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನೆಲ್ಲ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡಿನಲ್ಲಿ ನಡೆದ ಅಪಘಾತದ ನಂತರ ಕೇಂದ್ರ ಸಚಿವ ಲಲನ್ ಸಿಂಗ್ ಹೇಳಿಕೆ ಹೊರಬಿದ್ದಿದ್ದು, ಅವರ ಹೇಳಿಕೆಯಿಂದ ಜನರಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲ್ವೇ ಅಧಿಕಾರಿಗಳೊಂದಿಗೆ ಮಾತನಾಡಿ, ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ರೈಲ್ವೇ ಅಧಿಕಾರಿಯ ತಂಡವು ರೈಲು ಅಪಘಾತದ ತನಿಖೆಯಲ್ಲಿ ತೊಡಗಿದ್ದು, ಪ್ರಸ್ತುತ ಅದರ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ