AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khalistan Terrorists: ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ 21 ಖಲಿಸ್ತಾನಿಗಳ ಹೆಸರು ಪ್ರಕಟಿಸಿದ ಎನ್​ಐಎ

20 ರಿಂದ 25 ಖಲಿಸ್ತಾನಿ ಭಯೋತ್ಪಾದಕರ ವಿರುದ್ಧ ಲುಕ್ ಔಟ್ ನೋಟಿಸ್ ಅನ್ನೂ ಹೊರಡಿಸಲಾಗಿದೆ. ಈ ಮಧ್ಯೆ, ಖಲಿಸ್ತಾನಿ ಬೆಂಬಲಿಗರು ಇಂದು (ಜುಲೈ 8) ‘ಕಿಲ್ ಇಂಡಿಯಾ' ಹೆಸರಿನ ರ‍್ಯಾಲಿ ಮೂಲಕ ಭಾರತ ಮತ್ತು ಭಾರತೀಯ ರಾಜತಾಂತ್ರಿಕರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

Khalistan Terrorists: ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ 21 ಖಲಿಸ್ತಾನಿಗಳ ಹೆಸರು ಪ್ರಕಟಿಸಿದ ಎನ್​ಐಎ
ಎನ್​ಐಎ
ಗಣಪತಿ ಶರ್ಮಾ
|

Updated on: Jul 08, 2023 | 12:35 PM

Share

ನವದೆಹಲಿ: ವಿದೇಶಗಳಲ್ಲಿರುವ ಖಲಿಸ್ತಾನಿ ಭಯೋತ್ಪಾದಕರ (Khalistan Terrorists) ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (NIA) ಮಹತ್ವದ ಕ್ರಮ ಕೈಗೊಂಡಿದೆ. 21 ಖಲಿಸ್ತಾನಿಗಳ ಹೆಸರುಗಳನ್ನು ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ ದಾಖಲಾಗಿದೆ. ಈ ಖಲಿಸ್ತಾನಿಗಳ ಹೆಸರುಗಳನ್ನು ಅವರ ಫೋಟೋಗಳೊಂದಿಗೆ ಎನ್​ಐಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ಲಖ್ಬೀರ್ ಸಿಂಗ್ ಲಾಂಡಾ, ಮನ್ದೀಪ್ ಸಿಂಗ್, ಸತ್ನಾಮ್ ಸಿಂಗ್, ಅಮ್ರಿಕ್ ಸಿಂಗ್ ಸೇರಿದಂತೆ ಕೆನಡಾ, ಅಮೆರಿಕ ಮತ್ತು ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಹೆಸರುಗಳಿವೆ.

ಏತನ್ಮಧ್ಯೆ, ತನಿಖಾ ಸಂಸ್ಥೆಯ 5 ಸದಸ್ಯರ ತಂಡ ಶೀಘ್ರದಲ್ಲೇ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳಿ ಭಾರತೀಯ ರಾಯಭಾರಿ ಕಚೇರಿ ಮೇಲಿನ ದಾಳಿಯ ತನಿಖೆ ನಡೆಸಲಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ. ಜುಲೈ 17ರ ನಂತರ ಈ ತಂಡ ಅಮೆರಿಕಕ್ಕೆ ತೆರಳಲಿದೆ ಎಂದು ಹೇಳಲಾಗುತ್ತಿದೆ. ಮಾರ್ಚ್‌ನಲ್ಲಿ ಖಲಿಸ್ತಾನಿ ಬೆಂಬಲಿಗರು ದಾಳಿ ಮಾಡಿದ್ದರು.

ಗುಪ್ತಚರ ಮೂಲಗಳ ಪ್ರಕಾರ, ಭದ್ರತಾ ಏಜೆನ್ಸಿಗಳಾದ ಎನ್‌ಐಎ, ಐಬಿ ಮತ್ತು ರಾಜ್ಯ ಪೊಲೀಸರು ಸಮಾಲೋಚನೆ ನಡೆಸಿ ಪಟ್ಟಿಯನ್ನು ಸಿದ್ಧಪಡಿಸಿವೆ. ಬ್ರಿಟನ್, ಅಮೆರಿಕ ಮತ್ತು ಕೆನಡಾ ರಾಯಭಾರಿ ಕಚೇರಿ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಖಲಿಸ್ತಾನಿ ಮತ್ತು ಖಲಿಸ್ತಾನಿ ಪರ ಇರುವ ಭಯೋತ್ಪಾದಕರ ಸಂಪೂರ್ಣ ಪಟ್ಟಿಯನ್ನು ಎನ್‌ಐಎ ಇತ್ತೀಚೆಗಷ್ಟೇ ಸಿದ್ಧಪಡಿಸಿತ್ತು. ತನಿಖಾ ಸಂಸ್ಥೆಗಳ ಪಟ್ಟಿಯಲ್ಲಿ ಸಿಖ್ ಫಾರ್ ಜಸ್ಟಿಸ್​ನ ಪರಾರಿಯಾಗಿರುವ ಗುರುಪತ್ವಂತ್ ಸಿಂಗ್ ಪನ್ನು ಹೆಸರು ಅಗ್ರಸ್ಥಾನದಲ್ಲಿದೆ ಎಂದು ಹೇಳಲಾಗುತ್ತಿದೆ.

ಮಾಹಿತಿಯ ಪ್ರಕಾರ, ಸಿಖ್ಸ್ ಫಾರ್ ಜಸ್ಟಿಸ್ (SFJ), ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (BKI), ಖಲಿಸ್ತಾನಿ ಲಿಬರೇಶನ್ ಫೋರ್ಸ್ (KLF), ಖಲಿಸ್ತಾನ್ ಟೈಗರ್ ಫೋರ್ಸ್ (KTF), ಖಲಿಸ್ತಾನ್ ಜಿಂದಾಬಾದ್ ಫೋರ್ಸ್ (KZF), ಖಲಿಸ್ತಾನ್ ಕಮಾಂಡೋ ಫೋರ್ಸ್ (KCF) ವಿದೇಶಗಳಲ್ಲಿ ಕಾರ್ಯಾಚರಿಸುತ್ತಿದೆ. ಇಂಟರ್ನ್ಯಾಷನಲ್ ಸಿಖ್ ಯೂತ್ ಫೆಡರೇಶನ್ (ISYF) ಮತ್ತು ದಾಲ್ ಖಾಲ್ಸಾ ಇಂಟರ್ನ್ಯಾಷನಲ್ (DKI) ಸದಸ್ಯರ ಹೆಸರುಗಳುಳ್ಳ ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ. ಇದಲ್ಲದೇ 20 ರಿಂದ 25 ಖಲಿಸ್ತಾನಿ ಭಯೋತ್ಪಾದಕರ ವಿರುದ್ಧ ಲುಕ್ ಔಟ್ ನೋಟಿಸ್ ಅನ್ನೂ ಹೊರಡಿಸಲಾಗಿದೆ.

ಇದನ್ನೂ ಓದಿ: Khalistanis: ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಿಗೆ ಭಾರತ ಮನವಿ

ಇಂದು ಖಲಿಸ್ತಾನಿ ಬೆಂಬಲಿಗರ ‘ಕಿಲ್ ಇಂಡಿಯಾ’ ರ‍್ಯಾಲಿ

ಖಲಿಸ್ತಾನಿ ಬೆಂಬಲಿಗರು ಇಂದು (ಜುಲೈ 8) ‘ಕಿಲ್ ಇಂಡಿಯಾ’ ಹೆಸರಿನ ರ‍್ಯಾಲಿ ಮೂಲಕ ಭಾರತ ಮತ್ತು ಭಾರತೀಯ ರಾಜತಾಂತ್ರಿಕರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಮಾಹಿತಿಯ ಪ್ರಕಾರ, ಈ ರ‍್ಯಾಲಿಯನ್ನು ಅಮೆರಿಕದಿಂದ ಕೆನಡಾಕ್ಕೆ ಯೋಜಿಸಲಾಗಿದೆ. ಈ ರ‍್ಯಾಲಿ ವೇಳೆ ಹಿಂಸಾಚಾರ ಬಡೆಸಯುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಸುಳಿವು ನೀಡಿವೆ ಎಂದು ಕೆಲವು ಮಾಧಚ್ಯಮಗಳು ವರದಿ ಮಾಡಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್