NIA Raid: ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು ಸೇರಿದಂತೆ ಹಲವೆಡೆ ಎನ್​ಐಎ ದಾಳಿ

ಚೆನ್ನೈ, ಮಧುರೈ, ತಿರುಚ್ಚಿ, ಥೇಣಿ ಮತ್ತು ಒಟ್ಟೇರಿ ಮತ್ತು ಚೆನ್ನೈನ ತಿರುವತ್ತಿಯೂರು ಸೇರಿದಂತೆ ಸುಮಾರು 10 ಸ್ಥಳಗಳಲ್ಲಿ ಹಾಗೂ ಜಮ್ಮು ಮತ್ತು ಕಾಶ್ಮೀರದ 12 ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.

NIA Raid: ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು ಸೇರಿದಂತೆ ಹಲವೆಡೆ ಎನ್​ಐಎ ದಾಳಿ
NIA Raid

Updated on: May 09, 2023 | 8:40 AM

ಚೆನ್ನೈ, ಮಧುರೈ, ತಿರುಚ್ಚಿ, ಥೇಣಿ ಮತ್ತು ಒಟ್ಟೇರಿ ಮತ್ತು ಚೆನ್ನೈನ ತಿರುವತ್ತಿಯೂರು ಸೇರಿದಂತೆ ಸುಮಾರು 10 ಸ್ಥಳಗಳಲ್ಲಿ ಹಾಗೂ ಜಮ್ಮು ಮತ್ತು ಕಾಶ್ಮೀರದ 12 ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಭಯೋತ್ಪಾದಕ ಗುಂಪುಗಳ ಪತ್ತೆ, ಅವರ ಚಟುವಟಿಕೆ ಮೇಲೆ ನಿಗಾ ಹಾಗೂ ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಸಂಬಂಧಿಸಿದ ದಾಳಿ ಇದಾಗಿದೆ. ಶ್ರೀನಗರ, ಅನಂತನಾಗ್, ಕುಪ್ವಾರ, ಪೂಂಚ್, ರಜೌರಿ ಮತ್ತು ಕಿಶ್ತ್ವಾರ್ ಸೇರಿದಂತೆ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮೇ 5 ರಂದು ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಐವರು ಸೇನಾ ಯೋಧರು ಹುತಾತ್ಮರಾದ ಬಳಿಕ ಎನ್​ಐಎ ಈ ದಾಳಿ ನಡೆದಿದೆ.

ಮತ್ತಷ್ಟು ಓದಿ: Jammu and Kashmir: ಭಯೋತ್ಪಾದಕರು ನಡೆಸಿದ ಬಾಂಬ್​​ ಸ್ಫೋಟದಲ್ಲಿ ಸೇನಾ ಸಿಬ್ಬಂದಿಗಳು ಹುತಾತ್ಮ

ಇದಕ್ಕೂ ಮುನ್ನ ಏಪ್ರಿಲ್ 20 ರಂದು ಪೂಂಚ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಸೇನಾ ಯೋಧರು ಹುತಾತ್ಮರಾಗಿದ್ದರು. ಸೇನಾ ವಾಹನವು ಪೂಂಚ್ ಜಿಲ್ಲೆಯ ಭಿಂಬರ್ ಗಲಿಯಿಂದ ಸಾಂಗಿಯೋಟ್‌ಗೆ ತೆರಳುತ್ತಿದ್ದಾಗ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಗುಂಪಿನೊಂದಿಗೆ ಸಂಪರ್ಕ ಹೊಂದಿರುವವರನ್ನು ಶೋಧಿಸಲಾಗುತ್ತಿದೆ ಎಂಬ ವರದಿಗಳಿವೆ. ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರ, ತಮಿಳುನಾಡಿನ ವಿವಿಧೆಡೆ ಎನ್‌ಐಎ ದಾಳಿ ನಡೆಸುತ್ತಿರುವುದು ತೀವ್ರ ಸಂಚಲನ ಮೂಡಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ