NIA Raids: ಕಾಶ್ಮೀರದ ಹಲವು ಸ್ಥಳಗಳ ಮೇಲೆ ಎನ್‌ಐಎ ದಾಳಿ

ಭಯೋತ್ಪಾದನೆಗೆ ಧನಸಹಾಯ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಂಗಳವಾರ ಕಾಶ್ಮೀರದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: ಭಯೋತ್ಪಾದನೆಗೆ ಧನಸಹಾಯ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಂಗಳವಾರ ಕಾಶ್ಮೀರದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವರದಿಯನ್ನು ಸಲ್ಲಿಸುವ ಸಮಯದಲ್ಲಿ, ದಕ್ಷಿಣ ಕಾಶ್ಮೀರದ ಅನಂತನಾಗ್, ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ದಾಳಿಗಳು ನಡೆಯುತ್ತಿದ್ದವು.

ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿಗಳ ಜೊತೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮಂಗಳವಾರ ಮುಂಜಾನೆ ಹಲವು ವಸತಿ ಗೃಹಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: NIA Raid: ಬಿಹಾರದಲ್ಲಿ ಪಿಎಫ್​​ಐ ಚಟುವಟಿಕೆ; ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಐವರು ಪಿಎಫ್​ಐ ಕಾರ್ಯಕರ್ತರ ಬಂಧಿಸಿದ ಎನ್​ಐಎ

ಭಯೋತ್ಪಾದಕ ನಿಧಿಯ ಬಗ್ಗೆ ತನಿಖಾ ಸಂಸ್ಥೆಯ ತನಿಖೆಯ ಭಾಗವಾಗಿ ಈ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Published On - 10:31 am, Tue, 14 March 23

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us