AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಫ್‌ಐ ವಿರುದ್ಧ ಕ್ರಮ: ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್​ಐಎ ದಾಳಿ

ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ಬೆಳಗ್ಗೆ ಹಠಾತ್ ದಾಳಿ ನಡೆಸಿದೆ. ನಿಷೇಧಿತ ಸಂಘಟನೆ ಪಿಎಫ್‌ಐ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದೇಶದ ಹತ್ತಾರು ಕಡೆ ದಾಳಿ ನಡೆಸಿದೆ. ಕಳೆದ ವರ್ಷ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪಿಎಫ್‌ಐ ಅನ್ನು ನಿಷೇಧಿಸಲಾಗಿತ್ತು.

ಪಿಎಫ್‌ಐ ವಿರುದ್ಧ ಕ್ರಮ: ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್​ಐಎ ದಾಳಿ
ಎನ್​ಐಎ
ನಯನಾ ರಾಜೀವ್
|

Updated on: Oct 11, 2023 | 9:40 AM

Share

ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ಬೆಳಗ್ಗೆ ಹಠಾತ್ ದಾಳಿ ನಡೆಸಿದೆ. ನಿಷೇಧಿತ ಸಂಘಟನೆ ಪಿಎಫ್‌ಐ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದೇಶದ ಹತ್ತಾರು ಕಡೆ ದಾಳಿ ನಡೆಸಿದೆ. ಕಳೆದ ವರ್ಷ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪಿಎಫ್‌ಐ ಅನ್ನು ನಿಷೇಧಿಸಲಾಗಿತ್ತು.

ಪ್ರಕರಣ ಸಂಖ್ಯೆ 31/2022 ಅಡಿಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳು ಹಿಂಸಾತ್ಮಕ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಉದ್ದೇಶಕ್ಕಾಗಿ ಪಾಟ್ನಾದ ಫುಲ್ವಾರಿ ಷರೀಫ್ ಪ್ರದೇಶದಲ್ಲಿ ಜಮಾಯಿಸಿದ್ದರು.

ಯಾವ ಸ್ಥಳಗಳಲ್ಲಿ ದಾಳಿ ನಡೆಯುತ್ತಿದೆ? ದೆಹಲಿಯ ಹೌಜ್ ಖಾಜಿ ಪೊಲೀಸ್ ಠಾಣೆ ವ್ಯಾಪ್ತಿಯ ಬಲ್ಲಿ ಮಾರನ್, ರಾಜಸ್ಥಾನದ ಟೋಂಕ್, ತಮಿಳುನಾಡಿನ ಮಧುರೈ, ಉತ್ತರ ಪ್ರದೇಶದ ಬಾರಾಬಂಕಿ, ಲಕ್ನೋ, ಬಹ್ರೈಚ್, ಸೀತಾಪುರ್ ಮತ್ತು ಹರ್ದೋಯಿ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಲಕ್ನೋದ ಮಡೆಗಂಜ್‌ನ ಬಡಿ ಪಕಾರಿಯಾ ಪ್ರದೇಶದ ಮೇಲೆ ಏಜೆನ್ಸಿ ದಾಳಿ ನಡೆಸಿತು. ಮತ್ತೊಂದೆಡೆ, ಮಹಾರಾಷ್ಟ್ರದಲ್ಲಿ ಅನೇಕ ಸ್ಥಳಗಳಲ್ಲಿ NIA PFI ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದೆ.

ಮತ್ತಷ್ಟು ಓದಿ: NIA Raid: ಕರ್ನಾಟಕ ಸೇರಿದಂತೆ 5 ರಾಜ್ಯಗಳ 14 ಕಡೆ ಏಕಕಾಲಕ್ಕೆ ಎನ್​ಐಎ ದಾಳಿ

ಇದಕ್ಕೂ ಮೊದಲು, ಎನ್‌ಐಎ ಪಿಎಫ್‌ಐ ಶಂಕಿತನನ್ನು ಭಾನುವಾರ (ಅಕ್ಟೋಬರ್ 08) ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂಧಿಸಿತ್ತು. ಈ ವ್ಯಕ್ತಿ ಕುವೈತ್‌ಗೆ ತೆರಳುವ ಮುನ್ನವೇ ಸಿಕ್ಕಿಬಿದ್ದಿದ್ದ.

ಮುಂಬೈನ ವಿಕ್ರೋಲಿ ಪ್ರದೇಶದಲ್ಲಿ 7/11 ರೈಲು ಸ್ಫೋಟದ ಖುಲಾಸೆಗೊಂಡ ಆರೋಪಿ ಅಬ್ದುಲ್ ವಾಹಿದ್ ಶೇಖ್ ಅವರ ನಿವಾಸದ ಮೇಲೆ ತನಿಖಾ ಸಂಸ್ಥೆ ದಾಳಿ ನಡೆಸುತ್ತಿದೆ. ಶೇಖ್ PFI ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಲಾಗಿದೆ. ಉತ್ತರ ಪ್ರದೇಶದ ಬಾರಾಬಂಕಿಯಲ್ಲೂ ಶೋಧ ನಡೆಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ