ಪಂಜಾಬ್: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಆಸ್ತಿಗಳ ಮೇಲೆ ಎನ್ಐಎ ದಾಳಿ
ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಯ ಅಧಿಕಾರಿಗಳು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು( Gurpatwant Singh Pannun )ಅವರ ಆಸ್ತಿಗಳ ಮೇಲೆ ದಾಳಿ ನಡೆಸಿದೆ. ಆತ ನಿಷೇಧಿತ ಸಂಘಟನೆಯ ಸಿಖ್ ಫಾರ್ ಜಸ್ಟಿಸ್ನ ಮುಖಂಡ. ಚಂಡೀಗಢ ಮತ್ತು ಅಮೃತಸರದಲ್ಲಿರುವ ಆತನ ಆಸ್ತಿಯನ್ನು ಎನ್‌ಐಎ ವಶಪಡಿಸಿಕೊಂಡಿದೆ. ಪನ್ನು ಅಮೃತಸರ ನಿವಾಸಿಯಾಗಿದ್ದು, ಆತನ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಯ ಅಧಿಕಾರಿಗಳು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು( Gurpatwant Singh Pannun ) ಆಸ್ತಿಗಳ ಮೇಲೆ ದಾಳಿ ನಡೆಸಿದೆ. ಆತ ನಿಷೇಧಿತ ಸಂಘಟನೆಯ ಸಿಖ್ ಫಾರ್ ಜಸ್ಟಿಸ್ನ ಮುಖಂಡ. ಚಂಡೀಗಢ ಮತ್ತು ಅಮೃತಸರದಲ್ಲಿರುವ ಆತನ ಆಸ್ತಿಯನ್ನು ಎನ್‌ಐಎ ವಶಪಡಿಸಿಕೊಂಡಿದೆ. ಪನ್ನು ಅಮೃತಸರ ನಿವಾಸಿಯಾಗಿದ್ದು, ಆತನ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ.
ಕೆನಡಾದಲ್ಲಿ ಪನ್ನು ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಭಾರತದಲ್ಲಿ ಪನ್ನು ವಿರುದ್ಧ ದೇಶವಿರೋಧಿ ಪಿತೂರಿ ಸೇರಿದಂತೆ ಒಟ್ಟು 7 ಪ್ರಕರಣಗಳು ದಾಖಲಾಗಿದ್ದು, ಅದರ ವಿವರಗಳನ್ನು ನೀಡಲಾಗಿದೆ. ಪನ್ನುನ ಅಪರಾಧಗಳ ಬಗ್ಗೆ ಕೆನಡಾಕ್ಕೆ ಹಲವಾರು ಬಾರಿ ತಿಳಿಸಲಾಗಿದೆ. ಆದರೆ ಕೆನಡಾ ಭಯೋತ್ಪಾದಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.
ಚಂಡೀಗಢದಲ್ಲಿ, ಖಾಲಿಸ್ತಾನಿ ಗುರುಪತ್ವಂತ್ ಪನ್ನು ಅವರ ಸೆಕ್ಟರ್ 15 ರ ಮನೆಯನ್ನು ಎನ್ಐಎ ವಶಪಡಿಸಿಕೊಂಡಿದೆ. ಸುಮಾರು ಅರ್ಧ ಗಂಟೆ ಕಾಲ ಎನ್‌ಐಎ ತಂಡ ಇಲ್ಲಿ ಹಾಜರಿದ್ದು, ಮನೆಯ ಹೊರಗೆ ಸೂಚನಾ ಫಲಕ ಹಾಕಿತ್ತು. ಅದೇ ರೀತಿ ಅಮೃತಸರದ ಖಾನ್ಕೋಟ್ ಗ್ರಾಮದಲ್ಲಿ ಪನ್ನುವಿನ 46 ಕನಾಲ್ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ.
ಮತ್ತಷ್ಟು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಓರ್ವ ಹಂತಕ, ಧಾರ್ಮಿಕ ಮುಖಂಡನಲ್ಲ: ಭಾರತೀಯ ಗುಪ್ತಚರ ಸಂಸ್ಥೆ
ಈಗಾಗಲೇ ಕೆನಡಾದಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ಹರ್ದೀಪ್ ಸಿಂಗ್ ವಿಚಾರವಾಗಿ ಭಾರತ ಹಾಗೂ ಕೆನಡಾ ನಡುವೆ ವೈಮನಸ್ಸು ಮೂಡಿದೆ. ಕೆನಡಾದಲ್ಲಿ ಹರ್ದೀಪ್ ಸಾವಿಗೆ ಭಾರತದ ಏಜೆಂಟ್ಗಳೇ ಕಾರಣ ಎಂದು ಕೆನಡಾ ಆರೋಪಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಭಾರತ ಇಲ್ಲ ಸಲ್ಲದ ಆರೋಪ ಮಾಡಬೇಡಿ, ನಿಮ್ಮ ಬಳಿ ಸಾಕ್ಷ್ಯಗಳಿದ್ದರೆ ತೋರಿಸಿ ಆಗ ನೋಡೋಣ ಎಂದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ