ತಿರುವನಂತಪುರಂ: ಕೇರಳ ಸರ್ಕಾರವನ್ನು ಬೆಚ್ಚಿಬೀಳಿಸಿದ,ಇತ್ತೀಚೆಗೆ ಬಹಳಷ್ಟು ತಿರುವುಗಳನ್ನು ಪಡೆಯುತ್ತಿರುವ ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವನ್ನು ಕೇಂದ್ರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಹಸ್ತಾಂತರಿಸಿದೆ.
ಗೃಹ ಸಚಿವಾಲಯ ತಿರುವನಥಪುರಂ ವಿಮಾನ ನಿಲ್ದಾಣದಲ್ಲಿ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸಲು NIAಗೆ ಅನುಮತಿ ನೀಡಿದೆ.ಕೇರಳದ ತಿರುವನಂತಪುರಂನ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣವನ್ನು NIAಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಈ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ರೀತಿಯ ಚಿನ್ನದ ಸ್ಮಗ್ಲಿಂಗ್ನಿಂದಾಗಿ ದೇಶದ ಭದ್ರತೆ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತವೆ. ಹೀಗಾಗಿ, ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ನೀಡಲಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಇದನ್ನೂ ಓದಿ: Gold Smuggling: ಸಿಎಂ ಪಿಣರಾಯಿ ವಿರುದ್ಧ ‘ಕೆಂಪು ಬಾವುಟ’ ಬೀಸಿದ ಸ್ಥಳೀಯ ಕಾಂಗ್ರೆಸ್
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಈ ಪ್ರಕರಣದ ತನಿಖೆಗೆ ಮಧ್ಯಸ್ಥಿಕೆ ವಹಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಪಿಣರಾಯಿ ವಿಜಯನ್ ಪತ್ರ ಬರೆದಿದ್ದರು. ಅದರ ಮಾರನೇ ದಿನವೇ ಕೇಂದ್ರ ಸರ್ಕಾರ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸಿದೆ.
Published On - 8:53 am, Fri, 10 July 20