AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವದೆಹಲಿ: ನೈಜೀರಿಯಾ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ; ದೇಶದಲ್ಲಿ 6ನೇ ಪ್ರಕರಣ

ದೆಹಲಿಯಲ್ಲಿ ವಾಸಿಸುತ್ತಿರುವ 35 ವರ್ಷದ ನೈಜೀರಿಯಾದ ವ್ಯಕ್ತಿಗೆ ಮಂಕಿಫಾಕ್ಸ್​ ದೃಡಪಟ್ಟಿದೆ.

ನವದೆಹಲಿ: ನೈಜೀರಿಯಾ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ; ದೇಶದಲ್ಲಿ 6ನೇ ಪ್ರಕರಣ
ಮಂಕಿಪಾಕ್ಸ್
TV9 Web
| Edited By: ವಿವೇಕ ಬಿರಾದಾರ|

Updated on:Aug 01, 2022 | 9:24 PM

Share

ನವದೆಹಲಿ: ದೆಹಲಿಯಲ್ಲಿ ವಾಸಿಸುತ್ತಿರುವ 35 ವರ್ಷದ ನೈಜೀರಿಯಾದ ವ್ಯಕ್ತಿಗೆ ಮಂಕಿಪಾಕ್ಸ್​ ದೃಢಪಟ್ಟಿದೆ. ಈ ಮೂಲಕ ದೆಹಲಿಯ 2 ನೇ ಪ್ರಕರಣವಾಗಿದ್ದು, ದೇಶದ 6 ನೇ ಪ್ರಕರಣವಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

ಭಾರತದಲ್ಲಿ ಮಂಕಿಪಾಕ್ಸ್‌ ಮೊದಲ ಬಲಿ

ಭಾರತದಲ್ಲಿ ಮಂಕಿಪಾಕ್ಸ್‌(Monkeypox) ಸೋಂಕಿಗೆ ಮೊದಲ ಬಲಿಯಾಗಿದೆ. ದುಬೈನಿಂದ ಕೇರಳಕ್ಕೆ ವಾಪಸಾಗಿದ್ದ 22 ವರ್ಷದ ಯುವಕ ಶನಿವಾರ (ಜುಲೈ 30) ಮೃತಪಟ್ಟಿದ್ದರು. ಮೃತನ ಸ್ಯಾಂಪಲ್ಸ್‌ ಟೆಸ್ಟ್‌ನಲ್ಲಿ ಮಂಕಿಪಾಕ್ಸ್‌ ಸೋಂಕು ಇದ್ದದ್ದು ದೃಢವಾಗಿದೆ. ಹೀಗಾಗಿ ಯುವಕ ಮಂಕಿಪಾಕ್ಸ್‌ ಸೋಂಕಿನಿಂದಲೇ ಮೃತಪಟ್ಟಿದ್ದಾನೆಂದು ಕೇರಳದ ಆರೋಗ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.

ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶನಿವಾರ 22 ವರ್ಷದ ಯುವಕ ಮೃತಪಟ್ಟಿದ್ದು ಆತನಿಗೆ ಮಂಕಿಪಾಕ್ಸ್‌ ಸೋಂಕು ಇದದ್ದು ಪತ್ತೆಯಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಇದು ಕೇರಳದಲ್ಲಿ ವರದಿಯಾದ ಮೊದಲ ಮಂಕಿಪಾಕ್ಸ್‌ ಸಾವು. ಈ ಹಿಂದೆ ದೇಶದ ಮೊದಲ ಮೂರು ಮಂಕಿಪಾಕ್ಸ್ ಪ್ರಕರಣಗಳು ಕೇರಳದಲ್ಲಿ ವರದಿಯಾಗಿದ್ದವು. ಎಲ್ಲರೂ ಯುಎಇಯಿಂದ ಬಂದವರು. ನಂತರ ದೆಹಲಿಯಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿತ್ತು. ಮೃತ ಯುವಕ ತ್ರಿಶೂರ್ ಜಿಲ್ಲೆಯ ಚಾವಕ್ಕಾಡ್ ಮೂಲದವರಾಗಿದ್ದು, ಜುಲೈ 21 ರಂದು ಯುಎಇಯಿಂದ ಹಿಂದಿರುಗಿದ್ದರು. ಜುಲೈ 27 ರಂದು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಸೇರಿದ ಕೇವಲ 3 ದಿನಗಳ ನಂತರ ನಿಧನರಾಗಿದ್ದಾರೆ. ಅವರ ಮಾದರಿಗಳನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

ಭಾರತಕ್ಕೆ ಹೊರಡುವ ಒಂದು ದಿನದ ಮೊದಲು ಯುಎಇಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ಯುವಕನಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ಕಂಡುಬಂದಿದೆ ಎಂದು ಶನಿವಾರವಷ್ಟೇ ಅವರ ಸಂಬಂಧಿಕರು ಆಸ್ಪತ್ರೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಆರೋಗ್ಯ ಸಚಿವರು ತಿಳಿಸಿದರು. ಹಾಗೂ ಇದೇ ವೇಳೆ ಮೃತ ಯುವಕ ಇತರ ಕೆಲವು ಕಾಯಿಲೆಗಳಿಂದ ಬಳಲುತ್ತಿದ್ದರು ಎಂಬ ಶಂಕೆ ಇದೆ. ಯುವಕನ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು. ಮೃತ ಯುವಕನ ನಿಕಟ ಸಂಪರ್ಕದಲ್ಲಿದ್ದವರು ಹಾಗೂ ಯುವಕನ ಕುಟುಂಬ ಸದಸ್ಯರ ಮೇಲೆ ನಿಗಾ ಇಡಲಾಗಿದೆ.

Published On - 9:17 pm, Mon, 1 August 22

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್